Friday, November 6, 2026
spot_img
More
    spot_img
    HomeBreaking Newsಡಿಕೆಶಿ ಕೈಗೆ ಡ್ರಿಪ್ಸ್: ಖರ್ಗೆ ಜೊತೆ ಒಂದೇ ಕಾರಲ್ಲಿ ಏರ್‌ಪೋರ್ಟ್‌ಗೆ ಪ್ರಯಾಣ!

    ಡಿಕೆಶಿ ಕೈಗೆ ಡ್ರಿಪ್ಸ್: ಖರ್ಗೆ ಜೊತೆ ಒಂದೇ ಕಾರಲ್ಲಿ ಏರ್‌ಪೋರ್ಟ್‌ಗೆ ಪ್ರಯಾಣ!

    ನಾಯಕತ್ವ ಬದಲಾವಣೆ ವಿಚಾರ ಬಿಸಿ ಬಿಸಿ ಚರ್ಚೆಯಾಗುತ್ತಿರುವಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಗೆ ವಾಪಸ್ ಆಗಿದ್ದಾರೆ. 4 ದಿನದಿಂದ ಖರ್ಗೆ ಭೇಟಿ ಮಾಡದಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒಂದೇ ಕಾರಿನಲ್ಲಿ ಏರ್‌ಪೋರ್ಟ್‌ಗೆ ಖರ್ಗೆ ಜೊತೆ ಪ್ರಯಾಣ ಮಾಡಿದರು.

    ಕರ್ನಾಟಕ ಕಾಂಗ್ರೆಸ್‌ನ ಅಧಿಕಾರ ಹಂಚಿಕೆ ಬಿಕ್ಕಟ್ಟು ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ಮಂಗಳವಾರ ಮಲ್ಲಿಕಾರ್ಜುನ ಖರ್ಗೆ ದೆಹಲಿಗೆ ವಾಪಸ್ ಆಗಿದ್ದಾರೆ. ಶುಕ್ರವಾರದಿಂದಲೂ ಖರ್ಗೆ ಭೇಟಿ ಮಾಡದ ಡಿ.ಕೆ.ಶಿವಕುಮಾರ್ ಇಂದು ಒಂದೇ ಕಾರಿನಲ್ಲಿ ಏರ್‌ಪೋರ್ಟ್‌ಗೆ ತೆರಳಿದರು.

    ಡಿಕೆಶಿ ಕೈಗೆ ಡ್ರಿಪ್: ಹಲವು ರಾಜಕೀಯ ಬೆಳವಣಿಗೆ ನಡುವೆಯೇ ಡಿ.ಕೆ.ಶಿವಕುಮಾರ್ ಸ್ವಕ್ಷೇತ್ರ ಕನಕಪುರಕ್ಕೆ ಭೇಟಿ ನೀಡಿದರು. ಅವರು ‘ನನ್ನ ಮತ ಅನ್ನದಾತರ ಹಿತಕ್ಕಾಗಿ!’ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹಾಕಿದ್ದಾರೆ.

    ‘ಇಂದು ಕನಕಪುರದಲ್ಲಿ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಮುಂದಿನ 5 ವರ್ಷಗಳ ಅವಧಿಗೆ ನಡೆದ ಆಡಳಿತ ಮಂಡಳಿ ಸದಸ್ಯರ ಚುನಾವಣೆಯಲ್ಲಿ ನನ್ನ ಮತವನ್ನು ಚಲಾಯಿಸಿದೆ’ ಎಂದು ಫೋಟೋ ಸಹ ಹಂಚಿಕೊಂಡಿದ್ದಾರೆ.

    ಆದರೆ ಈ ಫೋಟೋದಲ್ಲಿ ಡಿ.ಕೆ.ಶಿವಕುಮಾರ್ ಕೈಗೆ ಡ್ರಿಪ್ ಹಾಕಿರುವುದು ಕಂಡುಬರುತ್ತಿದೆ. ಅಧಿಕಾರ ಹಂಚಿಕೆ ಬೆಳವಣಿಗೆ ನಡುವೆ ಡಿ.ಕೆ.ಶಿವಕುಮಾರ್ ಆರೋಗ್ಯಕ್ಕೆ ಏನಾಗಿದೆ? ಎಂದು ಜನರು ತಲೆಕೆಡಿಸಿಕೊಂಡಿದ್ದಾರೆ. ಕನಕಪುರಕ್ಕೆ ಸಹೋದರ ಡಿ.ಕೆ.ಸುರೇಶ್ ಜೊತೆ ಹೋಗಿ ಡಿ.ಕೆ.ಶಿವಕುಮಾರ್ ಮತದಾನ ಮಾಡಿದರು.

    ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, “ನಾಯಕತ್ವ ಬದಲಾವಣೆ ವಿಚಾರ ಬಹಿರಂಗವಾಗಿ ಚರ್ಚೆ ಮಾಡುವಂತದ್ದಲ್ಲ” ಎಂದು ಹೇಳಿದರು. ಕರ್ನಾಟಕದ ರಾಜಕೀಯದ ಕುರಿತು ಅವರು ವರದಿಯ ಜೊತೆ ದೆಹಲಿಗೆ ವಾಪಸ್ ಆಗಿದ್ದು, ರಾಹುಲ್ ಗಾಂಧಿ ಭೇಟಿ ಮಾಡಲಿದ್ದಾರೆ ಎಂಬ ಮಾಹಿತಿ ಇದೆ.

    ಮಲ್ಲಿಕಾರ್ಜುನ ಖರ್ಗೆ ಜೊತೆ ವಿಮಾನ ನಿಲ್ದಾಣಕ್ಕೆ ಒಂದೇ ಕಾರಿನಲ್ಲಿ ಹೋದರು ಸಹ ಡಿ.ಕೆ.ಶಿವಕುಮಾರ್ ದೆಹಲಿಗೆ ಹೋಗಿಲ್ಲ. ಅವರು ಏರ್‌ಪೋರ್ಟ್‌ನಿಂದ ಕನಕಪುರಕ್ಕೆ ಮತದಾನ ಮಾಡಲು ಆಗಮಿಸಿದರು. ರಾಹುಲ್ ಗಾಂಧಿ ಭೇಟಿಗೆ ಸಮಯ ಸಿಕ್ಕರೆ ಅಥವ ಭೇಟಿಗೆ ಸೂಚನೆ ನೀಡಿದರೆ ಮಾತ್ರ ಡಿ.ಕೆ.ಶಿವಕುಮಾರ್ ದೆಹಲಿಗೆ ಹೋಗುವ ಸಾಧ್ಯತೆ ಇದೆ.

    ದೆಹಲಿಯಲ್ಲಿ ಡಿ.ಕೆ.ಶಿವಕುಮಾರ್ ಬೆಂಬಲಿಗ ಶಾಸಕರು ಇರುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, “ಅಭಿಪ್ರಾಯ ಹೇಳುವ ಸ್ವಾತಂತ್ರ್ಯ ಎಲ್ಲರಿಗೂ ಇದೆ” ಎಂದರು. ಶುಕ್ರವಾರದಿಂದ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನಲ್ಲಿದ್ದು, ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

    ಹೈಕಮಾಂಡ್ ಕರ್ನಾಟಕದ ರಾಜಕೀಯವನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ನಾಯಕತ್ವ ಬದಲಾವಣೆ ಕುರಿತು ಎದ್ದಿರುವ ಸುದ್ದಿಗಳಿಗೆ ಶೀಘ್ರವೇ ತೆರೆ ಎಳೆಯುವ ನಿರೀಕ್ಷೆ ಇದೆ. ಡಿ.ಕೆ.ಶಿವಕುಮಾರ್ ಶುಕ್ರವಾರದಿಂದ ಖರ್ಗೆ ಭೇಟಿ ಯಾಗಿರಲಿಲ್ಲ. ಆದರೆ ಮಂಗಳವಾರ ಒಂದೇ ಕಾರಿನಲ್ಲಿ ಏರ್‌ಪೋರ್ಟ್ ತನಕ ಹೋಗಿದ್ದು, ಕುತೂಹಲಕ್ಕೆ ಕಾರಣವಾಗಿದೆ.

    ಮಲ್ಲಿಕಾರ್ಜುನ ಖರ್ಗೆ ಕರ್ನಾಟಕದ ವಿದ್ಯಮಾನದ ಕುರಿತು ನೀಡಿದ್ದ ಹೇಳಿಕೆಗೆ ಬಿಜೆಪಿ ಪ್ರತಿಕ್ರಿಯೆ ನೀಡಿತ್ತು. ‘ಮುಖ್ಯಮಂತ್ರಿ ಬದಲಾವಣೆ, ಪವರ್ ಶೇರಿಂಗ್- ರಾಜಕೀಯ ಬಿಕ್ಕಟ್ಟಿನಿಂದ ಕರ್ನಾಟಕ ಬಳಲುತ್ತಿದೆ. ಎಐಸಿಸಿ ಅಧ್ಯಕ್ಷರಾದ Mallikarjun Kharge ಮಲ್ಲಿಕಾರ್ಜುನ ಖರ್ಗೆಯವರು ತಮಗೆ ಏನೂ ಗೊತ್ತಿಲ್ಲ ಎಂದು ಹೇಳುವ ಮೂಲಕ ಅಸಹಾಯಕತನ ತೋರುತ್ತಿದ್ದಾರೆ’ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದರು.

    ‘ಗಾಂಧಿ ಪರಿವಾರದ ಆದೇಶ ಹಾಗೂ ಅವರ ಸ್ಪಷ್ಟತೆಗಾಗಿ ಕಾಂಗ್ರೆಸ್ ಹೈಕಮಾಂಡ್ ಕಾದು ನಿಂತಿದೆ. ಇತ್ತ ರಾಜ್ಯದ ನಾಯಕರ ಮಧ್ಯೆ ಇಲ್ಲದ ಸರ್ಕಸ್ ನಡೆಯುತ್ತಿದೆ. ಈ ಮಧ್ಯೆ ಮೂಲೆಗುಂಪಾಗಿರುವ ರಾಜ್ಯದ ಆಡಳಿತ ಮತ್ತಷ್ಟು ಹದಗೆಡುತ್ತಿದೆ. ಕುಟುಂಬದ ರಾಜಕಾರಣದ ಮಧ್ಯೆ ರಾಜ್ಯ ಸಿಲುಕಿರುವುದು ದುರಂತ’ ಎಂದು ಸರ್ಕಾರವನ್ನು ಟೀಕಿಸಿದ್ದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search