ಬೆಂಗಳೂರು: ಮುಖ್ಯಮಂತ್ರಿಯಾಗಬೇಕು ಎಂದು ಯಾರಿಗೆ ಆಸೆ ಇಲ್ಲ. ಎಲ್ಲಾ ಸಚಿವರು, ಶಾಸಕರಿಗೆ ಸಿಎಂ ಆಗಬೇಕು ಎಂಬ ಆಸೆ ಇರುತ್ತದೆ ಎಂದು ಸಕ್ಕರೆ ಸಚಿವ ಶಿವಾನಂದ್ ಪಾಟೀಲ್ ಹೇಳಿದ್ದಾರೆ.
ರಾಜ್ಯ ಕಾಂಗ್ರೆಸ್‌ನಲ್ಲಿ ನವೆಂಬರ್ ತಿಂಗಳ ಆಗಮನವಾದಾಗಿನಿಂದ ಪಕ್ಷವನ್ನು ಎರಡು ಬಣಗಳಾಗಿ ತೋರುತ್ತಿರುವ ಅಧಿಕಾರ ಹಂಚಿಕೆ ವಿವಾದ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರುವಾಗಲೇ ಸಚಿವರು ನೀಡಿದ ಈ ಹೇಳಿಕೆ ಪಕ್ಷದ ಒಳಗಿನ ಭಿನ್ನಮತದ ಹೊಗೆಗೆ ಸಾಕ್ಷಿಯಾಗಿದೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರಿಗೂ ಸಿಎಂ ಆಗಬೇಕೆಂಬ ಆಸೆ ಇದೆ. ಆದರೆ ಮಲ್ಲಿಕಾರ್ಜುನ ಖರ್ಗೆ ಸಿಎಂ ಸ್ಥಾನಕ್ಕೆ ಸೂಕ್ತ ವ್ಯಕ್ತಿ. ಖರ್ಗೆ ಅವರು ಸಿಎಂ ಆಗಲಿ ಎಂದು ಹೇಳಿದರು.
ನಾನು ಒಂದು ಕಾಲದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ವಿಚಾರದಲ್ಲಿ ತಪ್ಪು ಮಾತನಾಡಿದ್ದೆ. ತಪ್ಪು ಮಾಡಿದ್ದನ್ನು ಒಪ್ಪಿಕೊಳ್ಳುತ್ತೇನೆ. ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಸ್ಥಾನಕ್ಕೆ ಅರ್ಹವಾದ ಹಾಗೂ ಸೂಕ್ತವಾದ ವ್ಯಕ್ತಿ ಎಂದು ಹೇಳಿದರು.
ಮೈಸೂರು: ಸರ್ಕಾರಿ ಶಾಲೆಯ ಮಕ್ಕಳಿಂದ ಶೌಚಾಲಯ ಸ್ವಚ್ಛತೆ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


