Thursday, November 5, 2026
spot_img
More
    spot_img
    HomeLatest newsಶೀಘ್ರದಲ್ಲೇ ಇದಕ್ಕೆಲ್ಲ ಫುಲ್‌ಸ್ಟಾಪ್:‌ ಡಿಕೆಶಿ ಸಿಎಂ ಮಾಡಿ ಎಂದು ದೆಹಲಿಗೆ ಹೊರಟ ಶಾಸಕರ ಬಗ್ಗೆ ಸಿದ್ದರಾಮಯ್ಯ...

    ಶೀಘ್ರದಲ್ಲೇ ಇದಕ್ಕೆಲ್ಲ ಫುಲ್‌ಸ್ಟಾಪ್:‌ ಡಿಕೆಶಿ ಸಿಎಂ ಮಾಡಿ ಎಂದು ದೆಹಲಿಗೆ ಹೊರಟ ಶಾಸಕರ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ

    ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಸದ್ಯ ಭಾರೀ ಸದ್ದು ಮಾಡುತ್ತಿರುವ ವಿಷಯವೆಂದರೆ ಅದು ಮುಖ್ಯಮಂತ್ರಿ ಅಧಿಕಾರ ಹಂಚಿಕೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದಾಗಿನಿಂದಲೂ ಈ ಕುರಿತು ಚರ್ಚೆಗಳು ನಡೆಯುತ್ತಲೇ ಇದ್ದು, ಇದೀಗ ಮುಕ್ತವಾಗಿ ಈ ಬಗ್ಗೆ ಶಾಸಕರು ಮಾತನಾಡಲಾರಂಭಿಸಿದ್ದಾರೆ.

    ಕೆಲ ಶಾಸಕರು ಡಿಕೆ ಶಿವಕುಮಾರ್‌ ಅವರನ್ನು ಆರಂಭದಲ್ಲಿ ಹೇಳಿದಂತೆ ಉಳಿದ ಎರಡೂವರೆ ವರ್ಷಗಳಿಗೆ ಮುಖ್ಯಮಂತ್ರಿಯನ್ನಾಗಿ ಮಾಡಿ ಎಂದು ದೆಹಲಿಗೆ ತೆರಳಿ ಹೈಕಮಾಂಡ್‌ ಮುಂದೆ ಪಟ್ಟುಹಿಡಿದಿದ್ದಾರಂತೆ.

    ಈ ಕುರಿತು ಭಾರೀ ಚರ್ಚೆಗಳು ಏರ್ಪಟ್ಟಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮದವರು ಹೈಕಮಾಂಡ್‌ ಎಚ್ಚರಿಕೆಯ ನಡುವೆಯೂ ಬಾಲಕೃಷ್ಣ, ನಯನ ಮೋಟಮ್ಮ, ಇಕ್ಬಾಲ್‌ ಹುಸೇನ್‌ ಸೇರಿದಂತೆ ಹಲವು ಶಾಸಕರು ದೆಹಲಿಗೆ ಹೋಗಿದ್ದಾರೆ ಎಂಬುದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ʼಹೋಗಲಿ ಬಿಡಿ. ಶಾಸಕರಿಗೆ ಸ್ವಾತಂತ್ರ್ಯ ಇರುತ್ತದೆ. ಅವರು ಏನು ಅಭಿಪ್ರಾಯ ಕೊಡುತ್ತಾರೋ ನೋಡೋಣ. ಅಂತಿಮವಾಗಿ ಹೈಕಮಾಂಡ್‌ ನಿರ್ಧಾರವನ್ನು ತೆಗೆದುಕೊಳ್ಳಬೇಕು. ಹೈಕಮಾಂಡ್‌ ಏನು ಹೇಳುತ್ತೋ ಅದನ್ನು ಕೇಳಬೇಕು. ಹೈಕಮಾಂಡ್‌ನವರು ಇದಕ್ಕೆ ಫುಲ್‌ಸ್ಟಾಪ್‌ ಇಡಲಿದ್ದಾರೆʼ ಎಂದು ಹೇಳಿದರು.

    ಇನ್ನು ಸಚಿವ ಸಂಪುಟ ವಿಸ್ತರಣೆ ಪ್ರಶ್ನೆಗೂ ಸಹ ಉತ್ತರಿಸಿದ ಸಿದ್ದರಾಮಯ್ಯ ಹೈಕಮಾಂಡ್‌ನವರು ಗ್ರೀನ್‌ ಸಿಗ್ನಲ್‌ ಕೊಟ್ಟ ಕೂಡಲೇ ಕೈಗೊಳ್ಳುತ್ತೇವೆ ಎಂದರು.

    ಮೈಸೂರು: ಸರ್ಕಾರಿ ಶಾಲೆಯ ಮಕ್ಕಳಿಂದ ಶೌಚಾಲಯ ಸ್ವಚ್ಛತೆ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search