ಬೆಂಗಳೂರು: ಭಾನುವಾರ ( ನವೆಂಬರ್ 23 ) ಚಿಕ್ಕಬಾಣಾವರ ರೈಲ್ವೆ ನಿಲ್ದಾಣದಲ್ಲಿ ರೈಲು ದಾಟುತ್ತಿದ್ದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ವಂದೇ ಭಾರತ್ ರೈಲಿಗೆ ಸಿಲುಕಿ ಮೃತಪಟ್ಟಿದ್ದರು. ಹಳಿ ದಾಟುವ ಸಮಯದಲ್ಲಿ ರೈಲು ಬಂದಿದ್ದು, ಇದರಿಂದ ತಪ್ಪಿಸಿಕೊಳ್ಳಲಾಗದ ಕಾರಣ ಈ ಘಟನೆ ಸಂಭವಿಸಿರಬಹುದು ಎಂದು ಊಹಿಸಲಾಗಿತ್ತು.
ಆದರೆ ಯುಡಿಆರ್ ದಾಖಲಿಸಿಕೊಂಡು ತನಿಖೆಗೆ ಮುಂದಾದ ರೈಲ್ವೆ ಪೊಲೀಸರಿಗೆ ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಗಮನಿಸಿದಾಗ ಇದು ಆಕಸ್ಮಿಕ ಸಾವಲ್ಲ ಆತ್ಮಹತ್ಯೆ ಎಂಬುದು ತಿಳಿದುಬಂದಿದೆ.
ಹೌದು, ಸಿಸಿಟಿವಿ ದೃಶ್ಯವನ್ನು ಗಮನಿಸಿದಾಗ ಮೇಲ್ನೋಟಕ್ಕೆ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದ್ದು, ಸ್ಥಳದಲ್ಲಿ ಯಾವುದೇ ಡೆತ್ನೋಟ್ ಕಂಡುಬಂದಿಲ್ಲ. ರೈಲು ಡಿಕ್ಕಿಯಾದ ರಭಸಕ್ಕೆ ಇಬ್ಬರ ದೇಹಗಳು ಛಿದ್ರಗೊಂಡಿದ್ದು, ನಗರ ರೈಲ್ವೆ ಪೊಲೀಸರು ಬೆಂಗಳೂರು ಗ್ರಾಮಾಂತರ ರೈಲ್ವೆ ಪೊಲೀಸ್ ಠಾಣೆಗೆ ಪ್ರಕರಣವನ್ನು ವರ್ಗಾಯಿಸಿದ್ದಾರೆ.
20 ವರ್ಷದ ಜಸ್ಟಿನ್ ಜೋಸೆಫ್ ಹಾಗೂ 19 ವರ್ಷದ ಸ್ಟೆರಿನ್ ಎಲ್ಜಾ ಮೃತ ವಿದ್ಯಾರ್ಥಿಗಳಾಗಿದ್ದಾರೆ. ಇಬ್ಬರೂ ಸಹ ಸಪ್ತಗಿರಿ ನರ್ಸಿಂಗ್ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ ಎರಡನೇ ಸೆಮಿಸ್ಟರ್ ವ್ಯಾಸಂಗ ಮಾಡುತ್ತಿದ್ದರು. ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪೋಷಕರಿಗೆ ವಿಷಯ ತಿಳಿಸಲಾಗಿದೆ.
Disclaimer: ಯಾವುದೇ ಸಮಸ್ಯೆಗೂ ಸಾವೊಂದೇ ಪರಿಹಾರವಲ್ಲ. ಆತ್ಮಹತ್ಯೆಯ ಯೋಚನೆ ಬಂದರೆ ನಿಮ್ಮ ನೆಚ್ಚಿನ ವ್ಯಕ್ತಿ ಜೊತೆ ಮಾತನಾಡಿ ಪರಿಹಾರ ಕಂಡುಕೊಳ್ಳಿ. ಇಲ್ಲವೇ ಈ ಸಹಾಯವಾಣಿಗೆ ಕರೆಮಾಡಿ: 9152987821
ಮೈಸೂರು: ಸರ್ಕಾರಿ ಶಾಲೆಯ ಮಕ್ಕಳಿಂದ ಶೌಚಾಲಯ ಸ್ವಚ್ಛತೆ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


