ಶಿವಮೊಗ್ಗ: ಧರ್ಮಸ್ಥಳದಲ್ಲಿ ಸರಣಿ ಕೊಲೆ ಹಾಗೂ ಅತ್ಯಾಚಾರ ಕೊಲೆಗಳು ನಡೆದಿದ್ದು, ಅವುಗಳ ಶವಗಳನ್ನು ತಾನೇ ಹೂತುಹಾಕಿದ್ದಾಗಿ ಹೇಳಿಕೆ ನೀಡಿ ದೂರು ದಾಖಲಿಸಿದ್ದ ಮಾಸ್ಕ್ಮನ್ ಚಿನ್ನಯ್ಯಗೆ ಜಾಮೀನು ಮಂಜೂರಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಸತ್ರ ನ್ಯಾಯಾಲಯವು 1 ಲಕ್ಷ ರೂ. ಶೂರಿಟಿ ಸೇರಿ 12 ಷರತ್ತುಗಳನ್ನು ಹಾಕಿ ಜಾಮೀನು ಮಂಜೂರು ಮಾಡಿದೆ. 79 ದಿನಗಳ ಬಳಿಕ ಚಿನ್ನಯ್ಯಗೆ ಜೈಲಿನಿಂದ ಬಿಡುಗಡೆ ಭಾಗ್ಯ ಸಿಕ್ಕಿದೆ. ಭದ್ರತೆ ದೃಷ್ಟಿಯಿಂದ ಚಿನ್ನಯ್ಯನನ್ನು ಕಳೆದ ಸೆ.18ರಂದು ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ವರ್ಗಾಯಿಸಲಾಗಿತ್ತು.
ಇದೀಗ ಜಾಮೀನು ಮಂಜೂರಾಗಿದ್ದು, ನ್ಯಾಯಾಲಯದಿಂದ ಬಿಡುಗಡೆ ಆದೇಶ ಬಂದ ಬಳಿಕ ಜೈಲಿನಿಂದ ಬಿಡುಗಡೆಗೊಳಿಸುವ ಸಾಧ್ಯತೆ ಇದೆ. ಆ.23ರಂದು ಎಸ್ಐಟಿ ಅಧಿಕಾರಿಗಳು ಚಿನ್ನಯ್ಯನನ್ನು ಬಂಧಿಸಿದ್ದರು. ಸೆ.16ರಂದು ಬೆಳ್ತಂಗಡಿ ನ್ಯಾಯಾಲಯ ಆತನಿಗೆ ಜಾಮೀನು ನಿರಾಕರಿಸಿತ್ತು.
ಮೈಸೂರು: ಸರ್ಕಾರಿ ಶಾಲೆಯ ಮಕ್ಕಳಿಂದ ಶೌಚಾಲಯ ಸ್ವಚ್ಛತೆ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


