ಬೆಂಗಳೂರು: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಭಾರಿ ಶಾಕ್! ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ರಾಜ್ಯದ 10 ಮಹತ್ವದ ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ನಿದ್ದೆಯಲ್ಲಿದ್ದ ಅಧಿಕಾರಿಗಳಿಗೆ ನಡುಕ ಹುಟ್ಟಿಸಿದ ಲೋಕಾಯುಕ್ತ ಪೊಲೀಸರು, ದಾವಣಗೆರೆ APMCಯ ಸಹಾಯಕ ನಿರ್ದೇಶಕ ಜೆ. ಪ್ರಭು ಸೇರಿದಂತೆ RTO ಸೂಪರಿಂಟೆಂಡೆಂಟ್, CAO ಮತ್ತು ಮುಖ್ಯ ಇಂಜಿನಿಯರ್ಗಳ ಮನೆ, ಕಚೇರಿಗಳ ಮೇಲೆ ಮುಗಿಬಿದ್ದಿದ್ದಾರೆ!
ಬೆಂಗಳೂರು, ಮಂಡ್ಯ, ಬೀದರ್, ಮೈಸೂರು, ಧಾರವಾಡ ಹಾಗೂ ಶಿವಮೊಗ್ಗದ ಭ್ರಷ್ಟಾಚಾರದ ಆರೋಪ ಹೊತ್ತಿರುವ ಈ ಅಧಿಕಾರಿಗಳ ದಾಖಲೆಗಳನ್ನು ಅಧಿಕಾರಿಗಳು ಬಿರುಸಿನಿಂದ ಪರಿಶೀಲಿಸುತ್ತಿದ್ದು, ಭ್ರಷ್ಟಾಚಾರದ ಹಲವು ರಹಸ್ಯಗಳು ಬಯಲಾಗುವ ಸಾಧ್ಯತೆ ಇದೆ.
ಯಾವ್ಯಾವ ಅಧಿಕಾರಿಗಳ ಮೇಲೆ ದಾಳಿ?
ದಾವಣಗೆರೆ- APMC ಸ.ನಿರ್ದೇಶಕ ಪ್ರಭು ಜೆ.
ಮಂಡ್ಯ- ನಗರ ಪಾಲಿಕೆ CAO ಪುಟ್ಟಸ್ವಾಮಿ.
ಬೀದರ್- ಕೃಷ್ಣಾ ಮೇಲ್ದಂಡೆ ಯೋಜನೆ ಮು.ಇಂಜಿನಿಯರ್ ಪ್ರೇಮ್ ಸಿಂಗ್.
ಮೈಸೂರು- ಹೂಟಗಳ್ಳಿ ನಗರ ಪಾಲಿಕೆ ರೆವಿನ್ಯೂ ಇನ್ಸ್ಪೆಕ್ಟರ್ ರಾಮಸ್ವಾಮಿ ಸಿ.
ಧಾರವಾಡ- ಕರ್ನಾಟಕ ವಿ.ವಿಯ ಸ.ಪ್ರಾಧ್ಯಾಪಕ ಸುಭಾಶ್ ಚಂದ್ರ.
ಧಾರವಾಡ- ಪ್ರಾ.ಪಶು ಕ್ಲಿನಿಕ್ ಹುಲಿಗೋಲ್ ಹಿರಿಯ ಪರೀಕ್ಷಕ ಸತೀಶ್.
ಶಿವಮೊಗ್ಗ- SIMS ಮೆಡಿಕಲ್ ಕಾಲೇಜ್ FDA ಲಕ್ಷ್ಮೀಪತಿ ಸಿ.ಎನ್.
ಬೆಂಗಳೂರು- RTO ಸೂಪರಿಂಟೆಂಡೆಂಟ್ ಕುಮಾರಸ್ವಾಮಿ.
ಮೈಸೂರು (ಮಡಿಕೇರಿ) PWD, ಸ.ಅ.ಇಂಜಿನಿಯರ್ ಗಿರೀಶ್ ಡಿ.ಎಂ.
ಬೆಂಗಳೂರಿಗೆ ಪವರ್ ಶಾಕ್! ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


