Monday, November 2, 2026
spot_img
More
    spot_img
    HomeStateDistrict50 ಶಾಸಕರ ಬೆಂಬಲ ತೋರಿಸಿದರೆ ತಕ್ಷಣ ಡಿ.ಕೆ.ಶಿವಕುಮಾರ್ ಸಿಎಂ!

    50 ಶಾಸಕರ ಬೆಂಬಲ ತೋರಿಸಿದರೆ ತಕ್ಷಣ ಡಿ.ಕೆ.ಶಿವಕುಮಾರ್ ಸಿಎಂ!

    ಕರ್ನಾಟಕ ಕಾಂಗ್ರೆಸ್ ನಾಯಕತ್ವ ಬದಲಾವಣೆ ವಿಚಾರದಲ್ಲಿ ಚರ್ಚೆಯಾಗುತ್ತಿರುವ ಅಂಶ ಶಾಸಕರ ಬೆಂಬಲ ಯಾರ ಕಡೆ ಇದೆ? ಎಂಬುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಶಾಸಕರು ಇದ್ದಾರೆ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ಡಿ.ಕೆ.ಶಿವಕುಮಾರ್ ಬೆಂಬಲಿಗ ಶಾಸಕರು ದೆಹಲಿ ಯಾತ್ರೆ ಮಾಡುತ್ತಿದ್ದಾರೆ.

    ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ 50 ಶಾಸಕರ ಬಲ ತೋರಿಸಿದರೆ ಮುಖ್ಯಮಂತ್ರಿ ಆಗಬಹುದು. ಆದರೆ ಅಷ್ಟು ಶಾಸಕರ ಬೆಂಬಲ ಅವರಿಗೆ ಇಲ್ಲ ಎಂಬುದು ಬಿಜೆಪಿ ನಾಯಕರ ಹೇಳಿಕೆ. “ಎಲ್ಲಾ 140 ಶಾಸಕರು ನಮ್ಮವರು. ಬಣ ರಾಜಕೀಯ ನಾನು ಮಾಡುವುದಿಲ್ಲ” ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

    ರಮೇಶ್ ಜಾರಕಿಹೊಳಿ ಹೇಳಿಕೆ: ಮಾಜಿ ಸಚಿವ, ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುವ ಕುರಿತು ಮಾತನಾಡಿದ್ದು, “ಡಿ.ಕೆ.ಶಿವಕುಮಾರ್ 50 ಶಾಸಕರ ಬಲವನ್ನು ತೋರಿಸಿದರೆ ಅವರು ತಕ್ಷಣ ಮುಖ್ಯಮಂತ್ರಿಯಾಗಬಹುದು” ಎಂದು ಹೇಳಿದರು.

    “ಆದರೆ ಅವರ ಬಳಿ ಅಷ್ಟು ಬೆಂಬಲ ಇಲ್ಲ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಳ್ಳಲು ಡಿ.ಕೆ.ಶಿವಕುಮಾರ್ ಅವರೇ ಮೂಲ ಕಾರಣ. ಅವರು ಬೆಳಗಾವಿ ರಾಜಕೀಯದಲ್ಲಿ ಹಸ್ತಕ್ಷೇಪ ಮಾಡಿದ ಕಾರಣಕ್ಕೆ ನಾನು ಮೈತ್ರಿ ಸರ್ಕಾರ ಬೀಳಿಸುವ ನಾಯಕತ್ವವನ್ನು ತೆಗೆದುಕೊಂಡೆ” ಎಂದು ರಮೇಶ್ ಜಾರಕಿಹೊಳಿ ತಿಳಿಸಿದರು.

    “ನನ್ನ ಜೀವನದಲ್ಲಿ ನಾನು ಡಿ.ಕೆ.ಶಿವಕುಮಾರ್ ಅನ್ನು ಎಂದಿಗೂ ಒಪ್ಪಿಕೊಳ್ಳುವುದಿಲ್ಲ. ಅವರು ಬಿಜೆಪಿಗೆ ಬರುತ್ತೇನೆ ಎಂದರೆ ನಾನು ಒಪ್ಪುವುದಿಲ್ಲ. ಅಂತಹ ಪರಿಸ್ಥಿತಿ ಬಂದರೆ ದೇವರು ಮಾರ್ಗದರ್ಶನ ಮಾಡಿದಂತೆ ನಾನು ನಡೆದುಕೊಳ್ಳುತ್ತೇನೆ” ಎಂದು ರಮೇಶ್ ಜಾರಕಿಹೊಳಿ ಹೇಳಿದರು.

    70 ಶಾಸಕರ ಬಲ: ವಿರೋಧ ಪಕ್ಷದ ನಾಯಕ ಆರ್.ಅಶೋಕ ಮಾತನಾಡಿ “ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬಣದ ಶಾಸಕರ ಸಂಖ್ಯೆಯು 70ಕ್ಕೆ ಏರಿಕೆಯಾಗಿದೆ. ಕಾಂಗ್ರೆಸ್‌ ಒಳಗಿನ ಪ್ರಸ್ತುತ ರಾಜಕೀಯ ಬೆಳವಣಿಗೆ ಗಮನಿಸಿದರೆ ಶಾಸಕರ ಖರೀದಿ ಶಂಕೆ ಮೂಡುತ್ತಿದೆ” ಎಂದು ಹೇಳಿದ್ದಾರೆ.

    “ಶಿವಕುಮಾರ್ ಜೊತೆ 10-12 ಶಾಸಕರು ಇದ್ದಾರೆ ಎಂದು ವರದಿ ಬಂದಿತ್ತು. ಆದರೆ ಅವರ ಶಾಸಕರ ಬಲ ದಿಢೀರ್ ಹೆಚ್ಚಳವಾಗಿದೆ. ಪರಪ್ಪನ ಅಗ್ರಹಾರದಲ್ಲಿರುವ ಶಾಸಕರ ಸಹಿಯನ್ನು ಪಡೆದಿದ್ದಾರೆ. ವ್ಯವಹಾರ ಜೋರಾಗಿಯೇ ನಡೆಯುತ್ತಿರುವ ಸಾಧ್ಯತೆ ಇದೆ” ಎಂದು ಅಶೋಕ ಆರೋಪ ಮಾಡಿದ್ದಾರೆ.

    ಸಿದ್ದರಾಮಯ್ಯ ಬೆಂಬಲಿಗರು ಸಹ ನಾಯಕತ್ವ ಬದಲಾವಣೆ ವಿಚಾರ ಬಂದರೆ ಮೊದಲು ಶಾಸಕರ ಅಭಿಪ್ರಾಯ ಸಂಗ್ರಹ ಮಾಡಬೇಕು. ಶಾಸಕಾಂಗ ಪಕ್ಷದ ಸಭೆ ಕರೆಯಬೇಕು ಎಂದು ಹೈಕಮಾಂಡ್ ಮುಂದೆ ಬೇಡಿಕೆ ಇಡಲು ಮುಂದಾಗಿದ್ದಾರೆ. ಇದೇ ವಿಚಾರ ಡಿ.ಕೆ.ಶಿವಕುಮಾರ್ ಹಿನ್ನಡೆಗೆ ಕಾರಣವಾಗಲಿದೆ ಎಂದು ಅಂದಾಜಿಸಲಾಗಿದೆ.

    2023ರ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬಂದಿದೆ. ಆದರೆ ಸಿದ್ದರಾಮಯ್ಯ ಪರವಾಗಿ ಅಧಿಕ ಶಾಸಕರಿದ್ದಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವಾಗಿದೆ. ಆದ್ದರಿಂದ ಸಿಎಲ್‌ಪಿ ಸಭೆ ಮೂಲಕ ಬಲಾಬಲ ತೋರಿಸಲು ಹೋದರೆ ಸಿದ್ದರಾಮಯ್ಯ ಕೈ ಮೇಲಾಗುತ್ತದೆ.

    ಆದ್ದರಿಂದ ಡಿ.ಕೆ.ಶಿವಕುಮಾರ್ ಒಕ್ಕಲಿಗ ಮಾತ್ರವಲ್ಲ ಎಲ್ಲಾ ಸಮುದಾಯದ ಶಾಸಕರ ಬೆಂಬಲ ಪಡೆಯಲು ಮುಂದಾಗಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಇಬ್ಬರು ಕಾಂಗ್ರೆಸ್ ಶಾಸಕರನ್ನು ಭೇಟಿ ಮಾಡಲು ಅವರು ಜೈಲಿಗೆ ಸಹ ಭೇಟಿ ನೀಡಿದ್ದರು.

    ಸದ್ಯದ ಮಾಹಿತಿ ಪ್ರಕಾರ ರಾಜ್ಯ ರಾಜಕೀಯ ದೆಹಲಿಗೆ ಶಿಫ್ಟ್ ಆಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಗೆ ಮರಳಿದ್ದಾರೆ. ರಾಜ್ಯದಲ್ಲಿ 4 ದಿನ ಇದ್ದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರನ್ನು ಭೇಟಿಯಾಗಿದ್ದರು. ಆದರೆ ಡಿ.ಕೆ.ಶಿವಕುಮಾರ್ ಖರ್ಗೆ ಭೇಟಿ ಮಾಡಿಲ್ಲ.

    ಎಲ್ಲವನ್ನೂ ಹೈಕಮಾಂಡ್ ನೋಡಿಕೊಳ್ಳುತ್ತದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳುವ ಮೂಲಕ ರಾಜ್ಯ ರಾಜಕೀಯವನ್ನು ಹೈಕಮಾಂಡ್ ಅಂಗಳಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಮುಂದೇನು? ಎಂದು ಎಲ್ಲರೂ ಕಾದು ನೋಡುತ್ತಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search