Wednesday, August 12, 2026
spot_img
More
    spot_img
    HomeStateDistrictಬೆಂಗಳೂರಿಗರೇ ಗಮನಿಸಿ: ಇಂದು ನಗರದಾದ್ಯಂತ ಮಾಂಸ ಮಾರಾಟ ನಿಷೇಧ; ಕಾರಣವೇನು?

    ಬೆಂಗಳೂರಿಗರೇ ಗಮನಿಸಿ: ಇಂದು ನಗರದಾದ್ಯಂತ ಮಾಂಸ ಮಾರಾಟ ನಿಷೇಧ; ಕಾರಣವೇನು?

    ಇಂದು ( ನವೆಂಬರ್‌ 25 ) ಬೆಂಗಳೂರು ನಗರದಲ್ಲಿ ಮಾಂಸ ಮಾರಾಟ ನಿಷೇಧ ಮಾಡಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಆದೇಶ ಹೊರಡಿಸಿದೆ.

    Advertisement

    ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬರುವ ಎಲ್ಲ ಕಸಾಯಿಖಾನೆ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ನಿಷೇಧಿಸಿ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ.

    ಇಂದು ವಾಸವಾನಿ ಜಯಂತಿ ಇರುವ ಕಾರಣ ಅದರ ಆಚರಣೆಯಿಂದಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಭಾರತ ಕಂಡ ಶ್ರೇಷ್ಠ ಆಧ್ಯಾತ್ಮಿಕ ಗುರು ಹಾಗೂ ಕವಿಯೂ ಆಗಿದ್ದ ಸಾಧು ಥಾನ್ವರದಾಸ್‌ ಲೀಲಾರಾಮ್‌ ವಾಸವಾನಿ ಅವರು ತಮ್ಮ ಜೀವನವನ್ನು ಶಿಕ್ಷಣ, ಸಮಾಜ ಸೇವೆ ಹಾಗೂ ಮೂಕ ಪ್ರಾಣಿಗಳ ರಕ್ಷಣೆಗಾಗಿ ಮೀಸಲಿಟ್ಟಿದ್ದರು.

    ಈ ಕಾರಣಕ್ಕಾಗಿ ಅವರ ಜನ್ಮದಿನದಂದು ಅವರ ಅನುಯಾಯಿಗಳು ಮಾಂಸಹಾರ ತ್ಯಜಿಸುವ ಮೂಲಕ ಅವರ ಹುಟ್ಟುಹಬ್ಬವನ್ನು ಆಚರಣೆ ಮಾಡುತ್ತಾರೆ. ಇವರು 1879ರ ನವೆಂಬರ್‌ 25ರಂದು ಹೈದರಾಬಾದ್‌ ಪ್ರಾಂತ್ಯದಲ್ಲಿ ಜನಿಸಿದ್ದರು.

    ಕೇವಲ ಬೆಂಗಳೂರು ಮಾತ್ರವಲ್ಲದೇ ಮೈಸೂರು ಮಹಾನಗರ ಪಾಲಿಕೆಗೆ ಸೇರಿದ ಕಸಾಯಿಖಾನೆಗಳು ಹಾಗೂ ಇತರೆ ಮಾಂಸದ ಅಂಗಡಿಗಳನ್ನು ಸಹ ಈ ದಿನದಂದು ಮುಚ್ಚಲಾಗುತ್ತಿದ್ದು, ಮೈಸೂರಿನಲ್ಲೂ ಇದೇ ನಿಯಮ ಅನುಸರಿಸಲಾಗುತ್ತಿದೆ.

    ಕೊಡಗು: ಫುಟ್‌ಬಾಲ್‌ ಪಂದ್ಯದ ವೇಳೆ ಚೇರ್‌ನಲ್ಲಿ ಹೊಡೆದಾಡಿಕೊಂಡ ಅಭಿಮಾನಿಗಳು


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading