Saturday, September 19, 2026
spot_img
More
    spot_img
    HomeTop Storyಸಿ.ಟಿ ರವಿ ತಮ್ಮ ತಪ್ಪನ್ನು ಮರೆಮಾಚಲು ರಾಜ್ಯಪಾಲರಿಗೆ ದೂರು ನೀಡಿದ್ದಾರೆ: ಸಿದ್ದರಾಮಯ್ಯ

    ಸಿ.ಟಿ ರವಿ ತಮ್ಮ ತಪ್ಪನ್ನು ಮರೆಮಾಚಲು ರಾಜ್ಯಪಾಲರಿಗೆ ದೂರು ನೀಡಿದ್ದಾರೆ: ಸಿದ್ದರಾಮಯ್ಯ

    ಬೆಳಗಾವಿ: ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವರು ತಮ್ಮ ತಪ್ಪನ್ನು ಮರೆಮಾಚಲು ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ದೂರು ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

    Advertisement

    ಸರ್ಕಾರದ ವಿರುದ್ದ ರಾಜ್ಯಪಾಲರಿಗೆ ಶಾಸಕ ಸಿ.ಟಿ.ರವಿಯವರು ದೂರು ನೀಡಿರುವ ಬಗ್ಗೆ ಬೆಳಗಾವಿಯಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿ.ಟಿ.ರವಿಯವರು ತಮ್ಮ ತಪ್ಪನ್ನು ಮರೆಮಾಚಲು ಈ ರೀತಿ ಮಾಡುತ್ತಿದ್ದು, ಅವರ ಪ್ರಕರಣವನ್ನು ಸಿಐಡಿ ತನಿಖೆ ಮಾಡುತ್ತಿದೆ. ತನಿಖೆಯ ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

    ಇನ್ನು ಸಿ.ಟಿ.ರವಿ ಪ್ರಕರಣ ಸಂಬಂಧ ಒಬ್ಬ ಪೊಲೀಸ್ ಅಧಿಕಾರಿಯನ್ನು ಅಮಾನತ್ತು ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಪೊಲೀಸ್ ಠಾಣೆಯಲ್ಲಿ ಬಿಜೆಪಿ ಪಕ್ಷದ ಸಭೆ ನಡೆಸಲು ಅವಕಾಶ ಕೊಟ್ಟ ಕಾರಣಕ್ಕಾಗಿ ಅಧಿಕಾರಿಯನ್ನು ಅಮಾನತ್ತುಗೊಳಿಸಲಾಗಿದೆ. ಪೊಲೀಸ್ ಠಾಣೆಯೊಂದರಲ್ಲಿ ರಾಜಕೀಯ ಪಕ್ಷದ ಸಭೆ ನಡೆಸಲು ಅವಕಾಶ ನೀಡಿದ್ದು ತಪ್ಪು. ಸಿ.ಟಿ.ರವಿಯವರಿಗೆ ರಕ್ಷಣೆ ನೀಡುವ ಉದ್ದೇಶದಿಂದ ಅವರನ್ನು ಬೇರೆಡೆಗಳಿಗೆ ಕರೆದೊಯ್ಯಲಾಗಿತ್ತು ಎಂದು ಬೆಳಗಾವಿಯ ಪೊಲೀಸ್ ಕಮೀಷನರ್ ಸಹ ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದರು.

    ಇನ್ನು ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಶಾಸಕರಿಗೆ ಮೊಟ್ಟೆ ಎಸದವರು ಯಾರು ಹಾಗೂ ಯಾವ ಪಕ್ಷಕ್ಕೆ ಸೇರಿದವರು ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಈ ಬಗ್ಗೆ ಪೊಲೀಸರು ತನಿಖೆ ಮಾಡಲಿದ್ದಾರೆ. ತನಿಖೆಯ ಬಳಿಕವೇ ಎಲ್ಲಾ ಸತ್ಯಾಸತ್ಯತೆ ಹೊರಬರಲಿದೆ ಎಂದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading