ಬೆಂಗಳೂರು: ಇಲ್ಲಿನ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಮೈದಾನದಲ್ಲಿ ಗಣರಾಜ್ಯೋತ್ಸವ ಪ್ರಯುಕ್ತ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಭಾನುವಾರ ಧ್ವಜಾರೋಹಣ ನೆರವೇರಿಸಿದರು.
ಭಾರತೀಯ ರಕ್ಷಣ ಪಡೆಯ ಮೂವರು ಹಿರಿಯ ಅಧಿಕಾರಿಗಳನ್ನು ರಾಜ್ಯಪಾಲರಿಗೆ ಪರಿಚಯಿಸಲಾಯಿತು.
ಪೊಲೀಸ್, ಗೃಹರಕ್ಷಕ, ಎನ್ಸಿಸಿ, ಸಹಿತ ವಿವಿಧ ತಂಡಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಪೊಲೀಸ್ ಬ್ಯಾಂಡ್ ಸಾತ್ ನೀಡಿತು.
ಬಳಿಕ ವಿವಿಧ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.
ಎಕ್ಸ್ ಖಾತೆಯಲ್ಲಿ ಶುಭ ಕೋರಿದ ಗೆಹ್ಲೋಟ್
ಸರ್ವರಿಗೂ 76ನೇ ಗಣರಾಜ್ಯೋತ್ಸವದ ಶುಭಾಶಯಗಳು! ಇಂದು, ನಾವು ನಮ್ಮ ಸಂವಿಧಾನದ ಅಂಗೀಕಾರ ಮತ್ತು ನಮ್ಮನ್ನು ಒಂದುಗೂಡಿಸುವ ಪ್ರಜಾಪ್ರಭುತ್ವದ ಚೈತನ್ಯವನ್ನು ಆಚರಿಸುತ್ತಿದ್ದೇವೆ. ನ್ಯಾಯ, ಸಮಾನತೆ ಮತ್ತು ಭ್ರಾತೃತ್ವಕ್ಕೆ ನಮ್ಮ ಬದ್ಧತೆಯನ್ನು ಪುನರುಚ್ಚರಿಸೋಣ. ನಮ್ಮ ಸ್ಥಾಪಕ ಪಿತಾಮಹರ ದೃಷ್ಟಿಕೋನವನ್ನು ಗೌರವಿಸೋಣ. ಜೈ ಹಿಂದ್!
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


