ಲಾಹೋರ್: ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಪಾಕಿಸ್ತಾನ ಆತಿಥ್ಯ ವಹಿಸಿಕೊಂಡಿದ್ದು, ಭಾರತ ಹೊರತುಪಡಿಸಿ ಉಳಿದೆಲ್ಲಾ ಪಂದ್ಯಗಳೂ ಪಾಕ್ ಸ್ಟೇಡಿಯಂಗಳಲ್ಲಿ ನಡೆಯುತ್ತಿವೆ.
ಇನ್ನು ಟೂರ್ನಿಯ ಲೀಗ್ ಹಂತದ ಮೊದಲ ಏಳು ಪಂದ್ಯಗಳು ಮುಗಿದಿದ್ದು, ಇಂದು (ಫೆಬ್ರವರಿ 26) ಲಾಹೋರ್‌ನ ಗಡ್ಡಾಫಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ಹಾಗೂ ಅಫ್ಘಾನಿಸ್ತಾನ ತಂಡಗಳು ಮುಖಾಮುಖಿಯಾಗಿವೆ.
ಇನ್ನು ಈ ಪಂದ್ಯದ ವೇಳೆ ಲಾಹೋರ್ ಸ್ಟೇಡಿಯಂನಲ್ಲಿ ಕ್ರಿಕೆಟ್ ಪ್ರೇಮಿಯೊಬ್ಬ ಆರ್‌ಸಿಬಿ ಜೆರ್ಸಿ ತೊಟ್ಟು ಪಂದ್ಯ ವೀಕ್ಷಿಸಲು ಬಂದಿರುವುದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ಯಾನ್‌ಬೇಸ್ ಬಾರ್ಡರ್ ಅನ್ನೂ ಸಹ ದಾಟಿದ್ದು ಎಂದು ಆರ್‌ಸಿಬಿ ಅಭಿಮಾನಿಗಳು ಮೀಮ್‌ಗಳನ್ನು ಹಂಚಿಕೊಳ್ಳುತ್ತಿದ್ದಾರೆ.
ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 325 ರನ್ ಕಲೆಹಾಕಿ ಇಂಗ್ಲೆಂಡ್‌ಗೆ ಬರೋಬ್ಬರಿ 326 ರನ್‌ಗಳ ಗುರಿಯನ್ನು ನೀಡಿದೆ
ಟೂರ್ನಿಯಲ್ಲಿ ತನ್ನ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತ ಇಂಗ್ಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧ ಸೋತಿರುವ ಅಫ್ಘಾನಿಸ್ತಾನ ತಂಡಗಳು ಸೆಮಿಫೈನಲ್ ಆಸೆ ಜೀವಂತವಾಗಿರಿಸಿಕೊಳ್ಳಬೇಕೆಂದರೆ ಈ ಪಂದ್ಯವ್ನನು ಗೆಲ್ಲಲೇಬೇಕಿದೆ. ಸೋತ ತಂಡ ಟೂರ್ನಿಯಿಂದ ಅಧಿಕೃತವಾಗಿ ಹೊರಬೀಳಲಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


