ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 1 ರಿಂದ 20 ರವರೆಗೆ ಹಾಗೂ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 21 ರಿಂದ 04 ರವರೆಗೆ ನಡೆಯಲಿದೆ.
ಈ ನಿಟ್ಟಿನಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಲು ಅನುಕೂಲವಾಗುಂತೆ ಕೆಎಸ್‌ಆರ್‌ಟಿಸಿ ಎಲ್ಲಾ ವಿದ್ಯಾರ್ಥಿಗಳಿಗೆ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯ ಕಲ್ಪಿಸಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು, ದ್ವಿತೀಯ ಪಿಯುಸಿ ಹಾಗೂ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ, ಹೋಗುವಾಗ ಮತ್ತು ಹಿಂದಿರುಗುವಾಗ, “ದ್ವಿತೀಯ ಪಿಯುಸಿ ಹಾಗೂ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆ ಪ್ರವೇಶ ಪತ್ರವನ್ನು” ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿ ವರ್ಗದವರು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


