Thursday, September 3, 2026
spot_img
More
    spot_img
    HomeTop Storyಇನ್ಮುಂದೆ ಈ ವಾಹನಗಳಿಗೆ ರಾಷ್ಟ್ರೀಯ ಹೆದ್ದಾರಿ ಟೋಲ್‌ಗಳಲ್ಲಿ ಉಚಿತ ಪ್ರವೇಶ; ಶೂನ್ಯ ಫಾಸ್ಟ್‌ಟ್ಯಾಗ್

    ಇನ್ಮುಂದೆ ಈ ವಾಹನಗಳಿಗೆ ರಾಷ್ಟ್ರೀಯ ಹೆದ್ದಾರಿ ಟೋಲ್‌ಗಳಲ್ಲಿ ಉಚಿತ ಪ್ರವೇಶ; ಶೂನ್ಯ ಫಾಸ್ಟ್‌ಟ್ಯಾಗ್

    ಬೆಂಗಳೂರು: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ರಾಷ್ಟ್ರೀಯ ಹೆದ್ದಾರಿಗಳ ಟೋಲ್‍ಗಳಲ್ಲಿ ಶಾಸಕರ ವಾಹನಗಳಿಗೆ ಶೂನ್ಯ ಫಾಸ್ಟ್ಯಾಗ್ ಒದಗಿಸಲಿದೆ.

    Advertisement

    ವಿಧಾನಸಭಾ ಹಾಗೂ ವಿಧಾನ ಪರಿಷತ್ತಿನ ಸದಸ್ಯರು ಈ ಸೌಲಭ್ಯ ಪಡೆಯಲು ಭಾರತೀಯ ರಾಷ್ಟ್ರೀಯ ಹೆz?ದÁರಿ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಬೇಕಾಗಿದೆ. ಶೂನ್ಯ ಫಾಸ್ಟ್‍ಟ್ಯಾಗ್ ಹೊಂದಲು ಪ್ರಾಧಿಕಾರದ ವೆಬ್‍ಸೈಟ್ ನಲ್ಲಿ ಅರ್ಜಿಯ ನಮೂನೆಯನ್ನು ಭರ್ತಿ ಮಾಡಿ, ಅದರ ಪ್ರತಿಯನ್ನು ಬೆಂಗಳೂರಿನಲ್ಲಿರುವ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿಗಳಿಗೆ ಕಳುಹಿಸಬೇಕು. ಈ ಅವಕಾಶವನ್ನು ಶಾಸಕರು ಉಪಯೋಗಿಸಿಕೊಳ್ಳಬೇಕೆಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಕರ್ನಾಟಕ ವಿಧಾನಸಭೆಯ ಅಂದಾಜುಗಳ ಸಮಿತಿಯು ಜ.24 ರಂದು ಲೋಕೋಪಯೋಗಿ ಇಲಾಖೆಯ ಅಧೀನದಲ್ಲಿ ಬರುವ ಭಾರತೀಯ ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರ ವತಿಯಿಂದ ನಿರ್ವಹಿಸಲಾಗುವ ರಾಷ್ಟ್ರೀಯ ಹೆದ್ದಾರಿಯ ಟೋಲ್ ಪ್ಲಾಜಾಗಳಲ್ಲಿ ಸುಗಮ ಸಂಚಾರ ಸರಳೀಕರಣಗೊಳಿಸುವ ಕುರಿತು ಸಭೆ ನಡೆಸಿತ್ತು.

    ಸಮಿತಿ ಸಭೆಯಲ್ಲಿ ಟೋಲ್ ಪ್ಲಾಜಾಗಳಲ್ಲಿ ಅಡೆತಡೆಯಿಂದ ಶಾಸಕರಿಗೆ ಆಗುತ್ತಿರುವ ತೊಂದರೆ ಕುರಿತು ವಿಸ್ತೃತವಾಗಿ ಚರ್ಚಿಸುವ ಸಂದರ್ಭದಲ್ಲಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ಮಾತನಾಡಿ, ವಿಧಾನಸಭಾ ಸದಸ್ಯರು ಹಾಗೂ ವಿಧಾನ ಪರಿಷತ್ತಿನ ಸದಸ್ಯರು ಸುಗಮವಾಗಿ ಸಂಚರಿಸಲು ಅನುಕೂಲವಾಗುವಂತೆ ಶೂನ್ಯ ಫಾಸ್ಟ್ಯಾಗ್ ಒದಗಿಸಲು ಅವಕಾಶವಿದೆ. ಕೋರಿಕೆಗಳನ್ನು ಸಲ್ಲಿಸಿದರೆ, ಈ ಸೌಲಭ್ಯವನ್ನು ಒದಗಿಸುವುದಾಗಿ ತಿಳಿಸಿರುತ್ತಾರೆ ಎಂದು ಅವರು ಹೇಳಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading