ಮೈಸೂರು: ಜಾನುವಾರುಗಳನ್ನು ರಕ್ಷಣೆ ಮಾಡುತ್ತೇವೆ ಎಂದು ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದ ಗ್ಯಾಂಗ್‌ನ್ನು ಹುಣಸೂರು ( hunsur ) ಪೊಲೀಸರು ಬಂಧಿಸಿದ್ದಾರೆ.
ಓರ್ವ ಮಹಿಳೆ ಸೇರಿದಂತೆ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರಿಂದ ಎರಡು ಕಾರುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಕಾರಿನ ಮೇಲೆ ʼಹಿಂದೂ ರಾಷ್ಟ್ರ ರಕ್ಷಣಾ ಪಡೆʼಎಂದು ಬರೆಯಲಾಗಿದೆ.
ಹಿಂದೂ ಸಂಘಟನೆ ಹೆಸರಿನಲ್ಲಿ ಜಾನುವಾರುಗಳನ್ನು ರಕ್ಷಣೆ ಮಾಡುವ ನೆಪ ಹೇಳಿ ಜಾನುವಾರು ಸಾಗಿಸುವ ವಾಹನಗಳನ್ನು ತಡೆದು ಹಣ ವಸೂಲಿ ಮಾಡುತ್ತಿತ್ತು ಎಂಬ ಆರೋಪ ಕೇಳಿಬಂದಿದೆ.
ರತ್ನಪುರಿಯ ಕಿರಣ್ ಎಂಬುವವರು ಸಾಲಿಗ್ರಾಮ ತಾಲ್ಲೂಕಿನ ಚುಂಚನಕಟ್ಟೆ ಸಂತೆಯಲ್ಲಿ ಮೂರು ಜಾನುವಾರುಗಳನ್ನು ಖರೀದಿಸಿ ವಾಹನದಲ್ಲಿ ಸಾಗಿಸುತ್ತಿದ್ದರು.
ಈ ವೇಳೆ ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದು ಹುಣಸೂರಿನ ಕಟ್ಟೆಮಳಲವಾಡಿ ಬಳಿ ವಾಹನ ಅಡ್ಡಗಟ್ಟಿ ಕಸಾಯಿಖಾನೆಗೆ ಜಾನುವಾರು ಸಾಗಿಸುತ್ತಿದ್ದೀಯಾ? ಎಂದು ಕಿರಣ್‌ನನ್ನು ಬೆದರಿಸಿ ಹಣ ಕೊಡುವಂತೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
25 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದ ಖದೀಮರು, ಹಣ ಕೊಟ್ಟರೆ ಬಿಡುವುದಾಗಿ ಧಮ್ಕಿ ಹಾಕಿದ್ದರು. ಈ ವೇಳೆ ರಸ್ತೆಯಲ್ಲಿ ಸಾರ್ವಜನಿಕರು ಕೂಡ ಸೇರಿದ್ದು, ಆರೋಪಿಗಳನ್ನು ಪ್ರಶ್ನಿಸಿ ಗೂಸಾ ನೀಡಿದ್ದರು.
ಕಿರಣ್ ನೀಡಿದ ದೂರಿನ ಮೇರೆಗೆ ಈಗ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ವಿದ್ಯುತ್ ಕನಿಷ್ಠ ಶುಲ್ಕದ ತೆರಿಗೆ ಅಸಾಂವಿಧಾನಿಕ: ಹೈಕೋರ್ಟ್‌ನ ಮಹತ್ವದ ತೀರ್ಪು
ಎಐ ಅಡ್ವೋಕೇಟ್ ಅಸಿಸ್ಟೆಂಟ್ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


