Saturday, September 19, 2026
spot_img
More
    spot_img
    HomeLatest newsರಾಜ್ಯದಲ್ಲಿ ಅಬ್ಬರಿಸಿ ಬೊಬ್ಬಿರಿಯುತ್ತಿರುವ ಮುಂಗಾರು: ಭರ್ತಿ ಹಂತಕ್ಕೆ ತಲುಪಿದ ಜಲಾಶಯಗಳು

    ರಾಜ್ಯದಲ್ಲಿ ಅಬ್ಬರಿಸಿ ಬೊಬ್ಬಿರಿಯುತ್ತಿರುವ ಮುಂಗಾರು: ಭರ್ತಿ ಹಂತಕ್ಕೆ ತಲುಪಿದ ಜಲಾಶಯಗಳು

    ಬೆಂಗಳೂರು: ಕಳೆದ ಮೂರು ದಿನಗಳಿಂದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ನದಿ, ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಭಾರೀ ಮಳೆಯಿಂದ ಬಹುತೇಕ ಜಲಾಶಯಗಳು ಭರ್ತಿಯ ಹಂತಕ್ಕೆ ತಲುಪಿವೆ.

    Advertisement

    ಕೆಆರ್‍ಎಸ್, ನಾರಾಯಣಪುರ, ಹೇಮಾವತಿ, ವಾಟೆಹೊಳೆ, ಕಬಿನಿ ಸೇರಿದಂತೆ ಮತ್ತಿತರ ಜಲಾಶಯಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಭರ್ತಿಯ ಸನಿಹದಲ್ಲಿವೆ.

    ಕೃಷ್ಣಾ, ವೇದಗಂಗಾ ಹಾಗೂ ಹಿರಣ್ಯಕೇಶಿ ನದಿಗಳು ಉಕ್ಕಿ ಹರಿಯುತ್ತಿವೆ. ಕೃಷ್ಣಾ ನದಿಯ ಒಳಹರಿವು ಒಂದೇ ದಿನಕ್ಕೆ 23 ಸಾವಿರ ಕ್ಯೂಸೆಕ್ಸ್‌ಗೆ ಏರಿಕೆಯಾಗಿದೆ. ಚಿಕ್ಕೋಡಿಯ ಉಪವಿಭಾಗ ವ್ಯಾಪ್ತಿಯಲ್ಲಿ ವಿವಿಧ ಸೇತುವೆಗಳು ಜಲಾವೃತಗೊಂಡಿದ್ದು, ಗ್ರಾಮಸ್ಥರು ಪರದಾಡುವಂತಾಗಿದೆ.

    ಕೆಆರ್‍ಎಸ್ ಅಣೆಕಟ್ಟಿನಿಂದ ಕಾವೇರಿ ನದಿಗೆ 35 ಸಾವಿರ ಕ್ಯೂಸೆಕ್ಸ್ ನೀರು ಹರಿಬಿಡುತ್ತಿದ್ದು, ನದಿಪಾತ್ರದ ಜನತೆ ಎಚ್ಚರಿಕೆಯಿಂದಿರುವಂತೆ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಸಿದ್ಧ ರಂಗನತಿಟ್ಟು ಪಕ್ಷಿಧಾಮ ಸೇರಿ ಶ್ರೀರಂಗಪಟ್ಟಣ ತಾಲ್ಲೂಕಿನ ಪ್ರವಾಸಿ ಸ್ಥಳಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

    ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಶೃಂಗೇರಿ-ಮಂಗಳೂರು ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ-169 ರ ನೆಮಾರು ಸಾಲುಮರ ಬಳಿ ಗುಡ್ಡ ಕುಸಿತಗೊಂಡು ಸಂಚಾರದಲ್ಲಿ ವ್ಯತ್ಯಯವಾಗಿದೆ.

    ಹಾಸನ ಜಿಲ್ಲೆ ಸಕಲೇಶಪುರ ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ವಿದ್ಯುತ್ ಕಂಬಗಳ ಮೇಲೆ ಮರಗಳು ಉರುಳಿಬಿದ್ದಿದ್ದು, ಕಳೆದ ನಾಲ್ಕು ದಿನಗಳಿಂದ ಜನರು ಕತ್ತಲೆಯಲ್ಲಿ ಕಾಲ ಕಳೆಯುವಂತಾಗಿದೆ.

    ಚಿಕ್ಕಮಗಳೂರು ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಹೇಮಾವತಿ ಜಲಾಶಯದಲ್ಲಿ ಒಳಹರಿವಿನಲ್ಲಿ ಭಾರೀ ಏರಿಕೆಯಾಗಿದ್ದು, ಭದ್ರತಾ ದೃಷ್ಟಿಯಿಂದ ಆರು ಕ್ರಸ್ಟ್‌ ಗೇಟ್‌ಗಳ ಮೂಲಕ ನೀರನ್ನು ಹೊರಬಿಡಲಾಗುತ್ತಿದೆ.

    ನೂತನ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕಾತಿಯ ಸುಳಿವು ಬಿಟ್ಟುಕೊಟ್ಟ ವಿಜಯೇಂದ್ರ!

    ಎಐ ಅಡ್ವೋಕೇಟ್‌ ಅಸಿಸ್ಟೆಂಟ್‌ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading