ಬೆಂಗಳೂರು: ದೇಶಾದ್ಯಂತ ಮುಂಗಾರು ಮಳೆ ( monsoon rain ) ಅಬ್ಬರಿಸುತ್ತಿದ್ದು, ರಾಜ್ಯದಲ್ಲೂ ಸಹ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಉತ್ತರ ಕರ್ನಾಟಕ, ಕರಾವಳಿ, ಮೈಸೂರು ಭಾಗಗಳಲ್ಲಿ ಕಳೆದೊಂದು ವಾರದಿಂದ ವಿಪರೀತ ಮಳೆಯಾಗುತ್ತಿದ್ದು, ನದಿಗಳು ಮೈದುಂಬಿ ಹರಿಯಲಾರಂಭಿಸಿವೆ.
ಇನ್ನು ರಾಜ್ಯದ ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ವಿದ್ಯಾರ್ಥಿಗಳಿಗೆ ಶಾಲೆ ಕಾಲೇಜುಗಳಿಗೆ ತೆರಳಲು ಅಡ್ಡಿಯುಂಟಾಗಿದ್ದು, ಆರು ಜಿಲ್ಲೆಗಳಲ್ಲಿ ಇಂದು ( ಜೂನ್ 26 ) ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಹಾಸನ ಜಿಲ್ಲೆಯ ಐದು ತಾಲೂಕಿನ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ಇಂದು ರಜೆ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ, ಚಿಕ್ಕಮಗಳೂರು ಜಿಲ್ಲೆಯ ಕಳಸ, ಮೂಡಿಗೆರೆ, ಶೃಂಗೇರಿ, ಎನ್‌ಆರ್‌ಪುರ, ಕೊಪ್ಪ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ, ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ, ದಾಂಡೇಲಿ ತಾಲೂಕಿನ ಶಾಲೆಗಳಿಗೆ, ಕೊಡಗು ಜಿಲ್ಲೆಯಾದ್ಯಂತ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಅವರ ಸಹವಾಸದಿಂದ ಮೂಲೆಗುಂಪಾದೆ; ಸತ್ಯ ಒಪ್ಪಿಕೊಂಡ ʼಮುಂದಿನ ಸಚಿನ್ʼ ಪೃಥ್ವಿ ಶಾ
ಎಐ ಅಡ್ವೋಕೇಟ್ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


