ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಹೊಗೆಯಾಡುತ್ತಿದೆ. ಬಿವೈ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷನಾಗಿ ಆಯ್ಕೆಯಾದಾಗಿನಿಂದಲೂ ಪಕ್ಷದೊಳಗೆ ಎಲ್ಲವೂ ಸರಿಯಿಲ್ಲ ಎನ್ನುವುದು ಕೇಳಿಬರುತ್ತಿದ್ದು, ಹೈಕಮಾಂಡ್ ಕೆಲ ಶಾಸಕರನ್ನು ಉಚ್ಚಾಟನೆ ಮಾಡಿದ್ದು ಇದಕ್ಕೆ ಸಾಕ್ಷಿಯಾಗಿದೆ.
ಆದರೂ ಸಹ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಮಾತುಗಳು ಕೇಳಿಬರುತ್ತಿದ್ದು, ಇಂದು ( ಜೂನ್ 26 ) ವಿಜಯೇಂದ್ರ ಸಹ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಗೆ ರಾಜ್ಯಾಧ್ಯಕ್ಷರ ನೇಮಕವಾಗಲಿದೆ ಎಂದು ಹೇಳಿಕೆ ನೀಡಿದ್ದಾರೆ.
ಅತ್ತ ಬಿಜೆಪಿ ಮುಖಂಡ, ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಸಹ ಈ ಕುರಿತು ಪ್ರತಿಕ್ರಿಯಿಸಿದ್ದು, ವಿಜಯೇಂದ್ರ ಅವರ ಸಾಮರ್ಥ್ಯವನ್ನು ನೋಡಿ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದು ನರೇಂದ್ರ ಮೋದಿಯವರು, ಅಮಿತ್ ಶಾರವರು, ನಡ್ಡಾ ಜೀಯವರು, ಸಂತೋಷ್ ಜೀಯವರು ಎಂದರು.
ಅವರು ಅಧ್ಯಕ್ಷರಾದ ಮೇಲೆ ಮುಡಾ ಹಗರಣ, ವಾಲ್ಮೀಕಿ ಹಗರಣ ಹಾಗೂ ಇನ್ನಿತರೆ ಭ್ರಷ್ಟಾಚಾರದ ವಿಷಯಗಳನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ, ವಿಜಯೇಂದ್ರ ಅವರೇ ರಾಜ್ಯಾಧ್ಯಕ್ಷರಾಗಿ ಮುಂದುವರಿಯುತ್ತಾರೆ ಎನ್ನುವ ವಿಶ್ವಾಸ ನನಗಿದೆ, ಮುಂದುವರಿಯಬೇಕು ಎಂದು ರೇಣುಕಾಚಾರ್ಯ ತಿಳಿಸಿದರು.
ರಾಜ್ಯದಲ್ಲಿ ಅಬ್ಬರಿಸಿ ಬೊಬ್ಬಿರಿಯುತ್ತಿರುವ ಮುಂಗಾರು: ಭರ್ತಿ ಹಂತಕ್ಕೆ ತಲುಪಿದ ಜಲಾಶಯಗಳು
ಎಐ ಅಡ್ವೋಕೇಟ್ ಅಸಿಸ್ಟೆಂಟ್ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


