ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಡಳಿತದಲ್ಲಿ ನಿಯಂತ್ರಣ ಕಳೆದುಕೊಂಡಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಆಡಳಿತದಲ್ಲಿ ನಿಯಂತ್ರಣ ಕಳೆದುಕೊಂಡಿದ್ದಾರೆ. ಶಾಸಕರು ಸಿಎಂ ಮಾತನ್ನೇ ಕೇಳುತ್ತಿಲ್ಲ ಎಂದು ವಿಪಕ್ಷಗಳು ಪದೇ ಪದೇ ಹೇಳಿಕೆ ನೀಡುತ್ತಿವೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿಯಂತ್ರಣ ಕಳೆದುಕೊಂಡಿದ್ದಾರೆ ಎಂದು ನಾನು ಎಲ್ಲೂ ಹೇಳಿಲ್ಲ. ನಮಗೆ ಹೈಕಮಾಂಡ್ ಇದೆ. ಅವರು ಎಲ್ಲವನ್ನೂ ನೋಡಿಕೊಳ್ಳುತ್ತಾರೆ ಎಂದರು.
ಇನ್ನು ನಾನು ಎಲ್ಲರ ಜೊತೆ ಮಾತನಾಡುತ್ತೇನೆ. ಪಕ್ಷದಲ್ಲಿ ಏನೂ ಸಮಸ್ಯೆಗಳಿಲ್ಲ. ಆಡಳಿತದ ಮೇಲೆ ಸಿಎಂ ಸಿದ್ದರಾಮಯ್ಯ ಕಂಟ್ರೋಲ್ ಕಳೆದುಕೊಂಡಿಲ್ಲ. ಆಡಳಿತದಲ್ಲಿ ಸಿದ್ದರಾಮಯ್ಯ ಹಿಡಿತ ಸಾಧಿಸಿದ್ದಾರೆ. ಅನಗತ್ಯವಾಗಿ ವಿಷಯ ದೊಡ್ಡದು ಮಾಡುವ ಕೆಲಸ ನಡೆಯುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಎತ್ತಿನಹೊಳೆ ಯೋಜನೆ ಕೆಲಸವಾಗಬೇಕು. ಇಂದು ಸಭೆ ಕರೆದಿದ್ದೆ. ಆದರೆ ಕೇಂದ್ರ ಸಚಿವ ಸೋಮಣ್ಣ ಮನವಿ ಮಾಡಿದ್ದು, ಸಭೆ ಮುಂದಕ್ಕೆ ಹಾಕಿದ್ದೇನೆ. ಏನು ಸಮಸ್ಯೆಯಾಗಿದೆ ಎಂಬುದನ್ನು ನೋಡಲು ತುಮಕೂರಿಗೆ ಭೇಟಿ ನೀಡುತ್ತಿದ್ದೇನೆ. ಬಳಿಕ ಸಭೆಯ ದಿನಾಂಕ ನಿಗದಿ ಮಾಡುತ್ತೇನೆ ಎಂದು ಹೇಳಿದರು.
ಎಐ ಅಡ್ವೋಕೇಟ್ ಅಸಿಸ್ಟೆಂಟ್ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
ಮುಂಚೆ ಇದ್ದ ಸಿದ್ದರಾಮಯ್ಯ ಬದಲಾಗಲು ಕಾರಣ ಯಾರೆಂದು ಬಿಚ್ಚಿಟ್ಟ ಕೆಎನ್ ರಾಜಣ್ಣ!
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


