ಮೈಸೂರು: ಈಗಾಗಲೇ ನಮ್ಮ ಕೇಂದ್ರ ಸರ್ಕಾರ ಜನಗಣತಿಯ ಜೊತೆ ಜಾತಿಗಣತಿ ಮಾಡಲು ನಿರ್ಧಾರ ಮಾಡಿದೆ. ಆದ್ದರಿಂದ ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಜಾತಿಗಣತಿ ಮಾಡುವ ಅವಶ್ಯಕತೆಯಿಲ್ಲ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕಿಡಿಕಾಡಿದ್ದಾರೆ.
ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ನಾಯಕರು ಬಹಳ ಸ್ಪಷ್ಟವಾಗಿ ಹೇಳಿದ್ದಾರೆ. ಜಾತಿಗಣತಿ ವಿಚಾರವಾಗಿ ಯಾರಿಗೂ ತೃಪ್ತಿ ಸಿಕ್ಕಿಲ್ಲ. ತೆರಿಗೆ ಹಣ ಬಳಸಿ ಗಣತಿ ಮಾಡಿದ್ದಾರೆ. ಅದನ್ನು ಬಿಡುಗಡೆ ಮಾಡದೆ ತಮಾಷೆ ಮಾಡಿದ್ದಾರೆ. ಅವರ ಹೈಕಮಾಂಡ್ ಹೇಳಿದೆ ಎಂದು ಕಸದ ಬುಟ್ಟಿಗೆ ಹಾಕಿದ್ರು. ಈಗ ಮತ್ತೆ ಹಣ ಖರ್ಚು ಮಾಡಿ ಜಾತಿಗಣತಿ ಮಾಡಲು ಹೊರಟಿದ್ದಾರೆ. ಈಗಾಗಲೇ ನಮ್ಮ ಕೇಂದ್ರ ಸರ್ಕಾರ ಗಣತಿ ಮಾಡಲು ನಿರ್ಧಾರ ಮಾಡಿದೆ. ಕೇಂದ್ರ ಸರ್ಕಾರ ಒಳ್ಳೆಯ ಗಣತಿ ಮಾಡುತ್ತದೆ. ಕಾಂಗ್ರೆಸ್ ಕೇಂದ್ರದಲ್ಲಿ ಅವಕಾಶ ಸಿಕ್ಕಾಗ ಗಣತಿ ಮಾಡಿಲ್ಲ. ಕರ್ನಾಟಕದಲ್ಲಿ ಜಾತಿಗಣತಿ ಸಂಪೂರ್ಣ ವಿಫಲವಾಗಿದೆ ಎಂದು ಕಿಡಿಕಾರಿದರು.
ಇನ್ನು ಸಾಧನಾ ಸಮಾವೇಶದಲ್ಲಿ ಅಭಿವೃದ್ಧಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅಭಿವೃದ್ಧಿ ವಿಚಾರವಾಗಿ ಸವಾಲು ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈ ಬಗ್ಗೆ ಸಿದ್ದರಾಮಯ್ಯ ಮಾತನಾಡುವುದನ್ನು ಬಿಟ್ಟು ಒಂದು ಪತ್ರ ಹೊರಡಿಸಲಿ. ಅದಕ್ಕೆ ನಾವು ಉತ್ತರ ಕೊಡುತ್ತೇವೆ ಎಂದು ಹೇಳಿದರು.
ಕರ್ನಾಟಕದ ಈ ಲೋಕಸಭಾ ಕ್ಷೇತ್ರದಲ್ಲಿ ಮತಗಳ್ಳತನವಾಗಿರುವುದಕ್ಕೆ ಸಾಕ್ಷಿ ಇದೆ: ಸಿದ್ದರಾಮಯ್ಯ
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


