Wednesday, November 4, 2026
spot_img
More
    spot_img
    HomeStateDistrict4 ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದೂ ಫೇಲ್;‌ ಯುವತಿ ಆತ್ಮಹತ್ಯೆ

    4 ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದೂ ಫೇಲ್;‌ ಯುವತಿ ಆತ್ಮಹತ್ಯೆ

    ನೆಲಮಂಗಲ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ನಾಲ್ಕು ಬಾರಿ ಬರೆದರೂ ಸಹ ತನ್ನಿಂದ ಉತ್ತೀರ್ಣ ಆಗಲು ಸಾಧ್ಯವಿಲ್ಲ ಎಂಬ ಕಾರಣವೊಡ್ಡಿ ಯುವತಿ ತನುಶ್ರೀ (17) ನೇಣಿಗೆ ಶರಣಾಗಿರುವ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಬೆಂಗಳೂರು ಉತ್ತರ ತಾಲ್ಲೂಕಿನ ಕಾಚೋಹಳ್ಳಿ ಗ್ರಾಮದಲ್ಲಿ ಘಟಿಸಿದೆ.

    ಮಾಗಡಿ ರಸ್ತೆಯ ಬ್ಯಾಡರಹಳ್ಳಿ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯಾಗಿದ್ದ ತನುಶ್ರೀ ಸತತ ನಾಲ್ಕು ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಬರೆದಿದ್ದರೂ ಉತ್ತೀರ್ಣ ಆಗದಿರುವ ಹಿನ್ನೆಯಲ್ಲಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದು ಮಗಳ ಈ ನಿರ್ಧಾರದಿಂದ ಪೋಷಕರ ಆಕ್ರಂಧನ ಮುಗಿಲು ಮುಟ್ಟಿದೆ. ನೆಲಮಂಗಲದ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಯಿತು.

    ಮಾದನಾಯಕನಹಳ್ಳಿ ಪೋಲೀಸರು ಪ್ರಕರಣವನ್ನು ದಾಖಲಿಸಿಕೊಂಡು ಮುಂದಿನ ಕ್ರಮಕ್ಕೆ ಮುಂದಾಗಿದ್ದಾರೆ.

    Disclaimer: ಯಾವುದೇ ಸಮಸ್ಯೆಗೂ ಸಾವೊಂದೇ ಪರಿಹಾರವಲ್ಲ. ಆತ್ಮಹತ್ಯೆಯ ಯೋಚನೆ ಬಂದರೆ ನಿಮ್ಮ ನೆಚ್ಚಿನ ವ್ಯಕ್ತಿ ಜೊತೆ ಮಾತನಾಡಿ ಪರಿಹಾರ ಕಂಡುಕೊಳ್ಳಿ. ಇಲ್ಲವೇ ಈ ಸಹಾಯವಾಣಿಗೆ ಕರೆಮಾಡಿ: 9152987821

    ಕರ್ನಾಟಕದಲ್ಲಿ ಎದ್ದಿದೆ ʼಸು ಫ್ರಮ್‌ ಸೋʼ ಸುನಾಮಿ; ಮಿತಿಮೀರಿದ ಬೇಡಿಕೆಗೆ ನಾಳೆ ಮುಂಜಾನೆಯೂ ಪ್ರದರ್ಶನ, ಸೋಲ್ಡ್ಔಟ್!

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search