ಚಿತ್ರದುರ್ಗದ ಚಳ್ಳೆಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಕೆಪಿ ವಿರೇಂದ್ರ ಪಪ್ಪಿ ಅವರೊಂದಿಗೆ ವ್ಯಾಪಾರ ವಹಿವಾಟು ನಡೆಸುತ್ತಿದ್ದ ಕಾಂಗ್ರೆಸ್ ನಾಯಕಿ ಕುಸುಮ ಹನುಮಂತರಾಯಪ್ಪ ಅವರ ಮನೆ, ಮತ್ತು ಕಚೇರಿಯ ಮೇಲೆ ಇಂದು ಬೆಳ್ಳಂಬೆಳಗ್ಗೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದೆ.
ಬೆಳಗ್ಗೆ ಸುಮಾರು 5 ಗಂಟೆಯ ಸುಮಾರಿಗೆ ರಾಜರಾಜೇಶ್ವರಿನಗರದಲ್ಲಿರುವ ಕುಸುಮಾ ಅವರ ಮನೆಗೆ ತೆರಳಿದ ಇಡಿ ಅಧಿಕಾರಿಗಳು ಸಾಕಷ್ಟು ದಾಖಲಾತಿಗಳನ್ನು ಪರಿಶೀಲನೆ ನಡೆಸಿದ್ದಾರೆ.
ಕುಸುಮಾ ಹನುಮಂತರಾಯಪ್ಪ ಅವರು ಕಾಂಗ್ರೆಸ್ ಪಕ್ಷದಿಂದ ಕಳೆದ ರಾಜರಾಜೇಶ್ವರಿ ನಗರ ವಿಧಾನ ಸಭಾ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದರು. ಹನುಮಂತರಾಯಪ್ಪ ಅವರ ಪುತ್ರ ಅನಿಲ್ ಮತ್ತು ಕುಸುಮಾ ಅವರು ಕೆಪಿ ವಿರೇಂದ್ರ ಪಪ್ಪಿ ಅವರ ವ್ಯವಹಾರದಲ್ಲಿ ಪಾಲುದಾರರಾಗಿದ್ದರು, ಈ ಹಿನ್ನೆಲೆಯಲ್ಲಿ ಅವರ ಮನೆ ಮತ್ತು ಕಚೇರಿಯ ಮೇಲೆ ದಾಳಿ ನಡೆಸಲಾಗಿದೆ.
ವೀರೇಂದ್ರ ಪಪ್ಪಿ ಅವರು ಚಿತ್ರದುರ್ಗದಲ್ಲಿ ಶಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದರೂ, ತಮ್ಮ ಎಲ್ಲಾ ವ್ಯವಹಾರಗಳನ್ನು ಬೆಂಗಳೂರಿನ ವಸಂತನಗರದಲ್ಲಿರುವ ತಮ್ಮ ಫ್ಲಾಟ್‌ನಿಂದಲೇ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ. ಈ ಫ್ಲಾಟ್‌ನಲ್ಲಿ ವ್ಯವಹಾರಕ್ಕೆ ಸಂಬಂಧಿಸಿದ ಕೆಲವು ದಾಖಲೆಗಳು ದೊರಕಿದ್ದು, ಅದರ ಮುಂದುವರಿದ ಭಾಗವಾಗಿ ಕುಸುಮ ಅವರ ಮನೆಯ ಮೇಲೆ ದಾಳಿ ಮಾಡಲಾಗಿದೆ.
,https://karunadasuddi.in/26/08/2025/top-story/sit-vantara/
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


