Saturday, September 19, 2026
spot_img
More
    spot_img
    HomeLatest newsಕ್ಷಮೆಯಾಚನೆ ಮಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌! ಕಾರಣವೇನು ?

    ಕ್ಷಮೆಯಾಚನೆ ಮಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌! ಕಾರಣವೇನು ?

    ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಗುರುವಾರ ವಿಧಾನಸಭೆಯನ್ನುದ್ದೇಶಿಸಿ ಮಾತನಾಡುವಾಗ ಆರ್‌ಎಸ್‌ಎಸ್ (RSS) ಗೀತೆಯನ್ನು ಹಾಡಿದ್ದರು. ವಿಧಾನಸಭೆಯಲ್ಲಿ ನಿಂತು ಸದನವನ್ನು ಉದ್ದೇಶಿಸಿ ಮಾತನಾಡುತ್ತಾ ‘ನಮಸ್ತೆ ಸದಾ ವತ್ಸಲೇ ಮಾತೃಭೂಮಿ’ ಗೀತೆ ಪಠಿಸಿದ್ದರು.

    Advertisement

    ಇದಕ್ಕೆ ಕಾಂಗ್ರೆಸ್ ನಾಯಕರಿಂದ ವಿರೋಧ ವ್ಯಕ್ತವಾದರಿಂದ ಅವರು ಡಿಕೆ ಶಿವಕುಮಾರ್ ಅವರು ಕ್ಷಮೆಯಾಚಿಸುವಂತೆ ಕಾಂಗ್ರೆಸ್ ಎಂಎಲ್ ಸಿ ಬಿಕೆ ಹರಿಪ್ರಸಾದ್ ಆಗ್ರಹಿಸಿದ್ದರು.’RSS’ ಗೀತೆ ಹಾಡಿದ ಡಿ.ಕೆ ಶಿವಕುಮಾರ್ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ಎಂಲ್ ಸಿ ಬಿ.ಕೆ ಹರಿಪ್ರಸಾದ್ ಆಗ್ರಹಿಸಿದ್ದರು. ದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಅವರು ಆರ್ ಎಸ್ ಎಸ್ ಗೀತೆ ಹಾಡಿದ್ದು ತಪ್ಪು, ಅದು ಸರಿಯಲ್ಲ. ಅವರು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದರು.ಅವರು ಉಪಮುಖ್ಯಮಂತ್ರಿಯಾಗಿ ಹೇಳಿದ್ದರೆ ತಪ್ಪಿಲ್ಲ, ಆದರೆ ಅವರು ಕೆಪಿಸಿಸಿ ಪಕ್ಷದ ಅಧ್ಯಕ್ಷರಾಗಿ ಆರ್ ಎಸ್ ಎಸ್ ಗೀತೆ ಹೇಳಿದ್ದಾರೆ. ಇದು ತಪ್ಪು ಎಂದರು.

    ಹಾಗಾಗಿ ಡಿಕೆ ಶಿವಕುಮಾರ್ ಕ್ಷಮೆಯಾಚಿಸಿದ್ದಾರೆ. ”ಡಿಕೆ ಶಿವಕುಮಾರ್ ಏನು ಎಂದು ಕಾಂಗ್ರೆಸ್ ಗೆ ಗೊತ್ತಿದೆ. ನನಗೆ ನನ್ನ ಧರ್ಮದ ಬಗ್ಗೆ ಗೌರವವಿದೆ. ಹಿಂದೂ, ಕ್ರೈಸ್ತ, ಮುಸಲ್ಮಾನ ಈ ಮೂರು ಧರ್ಮದ ಬಗ್ಗೆ ನನಗೆ ಗೌರವವಿದೆ. ನಾನು ಹರಿಪ್ರಸಾದ್ ಗೋಸ್ಕರ ಕ್ಷಮೆ ಕೇಳುತ್ತೇನೆ ಎಂದು ಡಿಕೆಶಿ ಹೇಳಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading