Sunday, September 20, 2026
spot_img
More
    spot_img
    HomeLatest newsಧರ್ಮಸ್ಥಳ ಪ್ರಕರಣ: ತಿಮರೋಡಿ ಮನೆ ಮೇಲೆ ಎಸ್.ಐ.ಟಿ. ದಾಳಿ

    ಧರ್ಮಸ್ಥಳ ಪ್ರಕರಣ: ತಿಮರೋಡಿ ಮನೆ ಮೇಲೆ ಎಸ್.ಐ.ಟಿ. ದಾಳಿ

    ಧರ್ಮಸ್ಥಳ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ವಿವಾದ ಸೃಷ್ಟಿಸಿದ್ದ ‘ಬುರುಡೆ ಪ್ರಕರಣ’ದಲ್ಲಿ ಇದೀಗ ಮಹತ್ವದ ಬೆಳವಣಿಗೆಯಾಗಿದೆ. ಪ್ರಕರಣದ ಮಾಸ್ಟರ್‌ಮೈಂಡ್ ಎಂದು ಹೇಳಲಾಗುತ್ತಿರುವ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರ ನಿವಾಸದ ಮೇಲೆ ವಿಶೇಷ ತನಿಖಾ ತಂಡ (SIT) ಇಂದು ಮುಂಜಾನೆ ದಿಢೀರ್ ದಾಳಿ ನಡೆಸಿದೆ.ಧರ್ಮಸ್ಥಳದಲ್ಲಿ ಶವ ಹೂತಿದ್ದ ಬಗ್ಗೆ ದೂರು ನೀಡಿದ್ದ ‘ಮಾಸ್ಕ್​ಮ್ಯಾನ್’ ಚಿನ್ನಯ್ಯನಿಗೆ ಆಶ್ರಯ ನೀಡಿದ ಆರೋಪದ ಮೇಲೆ ವಿಶೇಷ ತನಿಖಾ ತಂಡ (SIT) ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಅವರ ಸಹೋದರನ ಮನೆಗಳ ಮೇಲೆ ಶೋಧ ನಡೆಸಿದೆ.

    Advertisement


    ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿರುವ ತಿಮರೋಡಿ ನಿವಾಸದ ಪರಿಶೀಲನೆ ನಡೆಸಿದಾಗ, ಚಿನ್ನಯ್ಯ ಬಳಸುತ್ತಿದ್ದ ಮೊಬೈಲ್ ಫೋನ್ ಪತ್ತೆಯಾಗಿದೆ. ಈ ಮೊಬೈಲ್‌ನಿಂದ ಚಿನ್ನಯ್ಯ ಹಲವು ವಿಡಿಯೋಗಳನ್ನು ಮಾಡಿರುವುದಾಗಿ ಈ ಹಿಂದೆ ಹೇಳಿಕೆ ನೀಡಿದ್ದನು. ಈ ದಾಳಿಯಿಂದ ಪ್ರಕರಣದ ತನಿಖೆಗೆ ಹೊಸ ತಿರುವು ಸಿಕ್ಕಿದೆ.

    ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಚಿನ್ನಯ್ಯ (ಅಲಿಯಾಸ್ ‘ಮಾಸ್ಕ್ ಮ್ಯಾನ್’) ನೀಡಿದ ಹೇಳಿಕೆಯ ಆಧಾರದ ಮೇಲೆ ಎಸ್.ಐ.ಟಿ. ಈ ಕ್ರಮ ಕೈಗೊಂಡಿದೆ. ಚಿನ್ನಯ್ಯ ವಿಚಾರಣೆ ವೇಳೆ, ಧರ್ಮಸ್ಥಳದ ವಿರುದ್ಧ ಸುಳ್ಳು ವಿಡಿಯೋಗಳನ್ನು ಸಿದ್ಧಪಡಿಸುವಾಗ ತಾನು ತಿಮರೋಡಿಯ ಮನೆಯಲ್ಲೇ ಆಶ್ರಯ ಪಡೆದಿದ್ದೆ ಎಂದು ಒಪ್ಪಿಕೊಂಡಿದ್ದನು. ಅಲ್ಲದೆ, ತನ್ನ ಬಟ್ಟೆ ಮತ್ತು ವಿಡಿಯೋಗಳಿಗೆ ಬಳಸಿದ್ದ ಮೊಬೈಲ್ ಫೋನ್ ಕೂಡ ಅಲ್ಲಿಯೇ ಇದೆ ಎಂದು ತಿಳಿಸಿದ್ದ. ಈ ಹಿನ್ನೆಲೆಯಲ್ಲಿ, ನ್ಯಾಯಾಲಯದ ಸರ್ಚ್ ವಾರಂಟ್ ಪಡೆದು, ಚಿನ್ನಯ್ಯನನ್ನು ಕರೆದುಕೊಂಡು ಎಸ್.ಐ.ಟಿ. ತಂಡವು ತಿಮರೋಡಿ ಮನೆಗೆ ಆಗಮಿಸಿ ಪರಿಶೀಲನೆ ನಡೆಸಿದೆ.

    ಬೆಳಗ್ಗೆ 9:30 ರ ಸುಮಾರಿಗೆ ಜಿತೇಂದ್ರ ದಯಾಮ ಸೇರಿದಂತೆ ಹಲವು ಅಧಿಕಾರಿಗಳ ತಂಡವು ತಿಮರೋಡಿಯ ಮನೆಗೆ ಎಂಟ್ರಿಕೊಟ್ಟಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮಂಗಳೂರು, ಪುತ್ತೂರು ಮತ್ತು ಬಂಟ್ವಾಳ ಪೊಲೀಸರನ್ನು ಕರೆಸಿ ಬಿಗಿ ಭದ್ರತೆ ಒದಗಿಸಲಾಗಿದೆ. ಈ ದಾಳಿ ವೇಳೆ, ಚಿನ್ನಯ್ಯ ಉಳಿದುಕೊಂಡಿದ್ದ ಕೊಠಡಿಯಲ್ಲಿ ತನಿಖೆ ನಡೆಸಿದಾಗ, ಆತನ ಮೊಬೈಲ್ ಪತ್ತೆಯಾಗಿದೆ. ತಿಮರೋಡಿಯ ಸಹೋದರ ಮೋಹನ್ ಕುಮಾರ್ ಶೆಟ್ಟಿ ಅವರ ಮನೆಯ ಮೇಲೂ ಶೋಧ ನಡೆಸಲಾಗಿದೆ.

    ಭಾರತದ ರಫ್ತುಗಳಿಗೆ ಟ್ರಂಪ್ ಶಾಕ್: ಇಂದು ಮಧ್ಯರಾತ್ರಿಯಿಂದಲೇ 25% ಹೆಚ್ಚುವರಿ ಸುಂಕ ಜಾರಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading