Saturday, September 19, 2026
spot_img
More
    spot_img
    HomeStateDistrictಧರ್ಮಸ್ಥಳ: ಮಾಸ್ಕ್‌ಮ್ಯಾನ್‌ಗೆ ಆಶ್ರಯ ನೀಡಿದ್ದ ತಿಮರೋಡಿ, ಮಟ್ಟೆಣ್ಣವರ್ ಬಂಧನ? ಜಯಂತ್‌ ಪ್ರತಿಕ್ರಿಯೆ

    ಧರ್ಮಸ್ಥಳ: ಮಾಸ್ಕ್‌ಮ್ಯಾನ್‌ಗೆ ಆಶ್ರಯ ನೀಡಿದ್ದ ತಿಮರೋಡಿ, ಮಟ್ಟೆಣ್ಣವರ್ ಬಂಧನ? ಜಯಂತ್‌ ಪ್ರತಿಕ್ರಿಯೆ

    ದಕ್ಷಿಣ ಕನ್ನಡ: ಧರ್ಮಸ್ಥಳದಲ್ಲಿ ಸರಣಿ ಕೊಲೆ ಹಾಗೂ ಅತ್ಯಾಚಾರ ಕೊಲೆಗಳು ನಡೆದಿವೆ ಎಂದು ದೂರು ನೀಡಿರುವ ಚಿನ್ನಯ್ಯನನ್ನು ಇದೀಗ ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದು, ಇಂದು ( ಆಗಸ್ಟ್‌ 26 ) ಮಹತ್ವದ ಬೆಳವಣಿಗೆಯಲ್ಲಿ ಆತನನ್ನು ಮಹೇಶ್‌ ತಿಮರೋಡಿ ಮನೆಗೆ ಎಸ್‌ಐಟಿ ಅಧಿಕಾರಿಗಳು ಕರೆದೊಯ್ದಿದ್ದರು.

    Advertisement

    ಈ ವೇಳೆ ಮಹೇಶ್‌ ತಿಮರೋಡಿ ಮನೆಯಲ್ಲಿ ಚಿನ್ನಯ್ಯನ ಮೊಬೈಲ್‌ ಪತ್ತೆಯಾಗಿದೆ ಎನ್ನಲಾಗಿದ್ದು, ಅದನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇನ್ನು ಈ ಸುದ್ದಿ ಹೊರಬಂದ ಬೆನ್ನಲ್ಲೇ ಮಹೇಶ್‌ ಶೆಟ್ಟಿ ತಿಮರೋಡಿ, ಜಯಂತ್‌ ಹಾಗೂ ಗಿರೀಶ್‌ ಮಟ್ಟೆಣ್ಣವರ್‌ ಅವರನ್ನು ಬಂಧಿಸಲಾಗಿದೆ, ಸರ್ಚ್‌ ವಾರೆಂಟ್‌ ನೀಡಲಾಗಿದೆ ಎಂಬ ಸುದ್ದಿಗಳು ಸಹ ಹರಿದಾಡಿದವು.

    ಈ ಸುದ್ದಿ ಕುರಿತು ಸ್ವತಃ ಸೌಜನ್ಯ ಪರ ಹೋರಾಟಗಾರ ಜಯಂತ್‌ ಮಾತನಾಡಿದ್ದು ಇದೆಲ್ಲ ಸತ್ಯಕ್ಕೆ ದೂರವಾದದ್ದು ಎಂದಿದ್ದಾರೆ. ಚಿನ್ನಯ್ಯನನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆಯುವ ಮುನ್ನ ಕೋರ್ಟ್‌ ಅನುಮತಿ ಮೇರೆಗೆ ಆತ ತಿಮರೋಡಿ ಅವರ ಮನೆಯಲ್ಲಿದ್ದ. ಆ ಸಮಯದಲ್ಲಿ ಆತನ ವಸ್ತುಗಳು ಇಲ್ಲಿಯೇ ಉಳಿದುಕೊಂಡಿದ್ದವು. ಅವುಗಳನ್ನು ಸಂಗ್ರಹಿಸಲು ಎಸ್‌ಐಟಿ ಅಧಿಕಾರಿಗಳು ಬಂದಿದ್ದು, ನಾವೆಲ್ಲ ಅದಕ್ಕೆ ಸಹಕಾರ ನೀಡುತ್ತಿದ್ದೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.

    ಮೈಸೂರು ದಸರಾ 2025: ಎರಡನೇ ತಂಡದ ಗಜಪಡೆಯ ತೂಕ ಪರೀಕ್ಷೆ; ಯಾರು ಹೆಚ್ಚು?

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading