ದಕ್ಷಿಣ ಕನ್ನಡ: ಧರ್ಮಸ್ಥಳದಲ್ಲಿ ಸರಣಿ ಕೊಲೆ ಹಾಗೂ ಅತ್ಯಾಚಾರ ಕೊಲೆಗಳು ನಡೆದಿವೆ ಎಂದು ಆರೋಪಿಸಿದ್ದ ಚಿನ್ನಯ್ಯ ಸದ್ಯ ಎಸ್ಐಟಿ ವಶದಲ್ಲಿದ್ದು, ದೂರಿನ ಕುರಿತು ಅಧಿಕಾರಿಗಳ ಮುಂದೆ ಮಾಹಿತಿಗಳನ್ನು ಹೊರಹಾಕಿದ್ದಾನೆ.
ಪ್ರಕರಣದ ಕೇಂದ್ರ ಬಿಂದುವಾಗಿರುವ ಚಿನ್ನಯ್ಯ ಹೇಳಿದ ಕಡೆಯೆಲ್ಲ ಗುಂಡಿ ಅಗೆದ ಎಸ್ಐಟಿ ಅಧಿಕಾರಿಗಳು ಇದೀಗ ಎಲ್ಲ ಆಯಾಮದಿಂದಲೂ ತನಿಖೆಯನ್ನು ನಡೆಸುತ್ತಿದ್ದು, ಧರ್ಮಸ್ಥಳ ಗ್ರಾಮ ಪಂಚಾಯಿತಿಯಿಂದಲೂ ಸಹ 1996ರಿಂದ 2014ರವರೆಗಿನ ಕುರಿತ ದಾಖಲೆಗಳನ್ನು ಸಂಗ್ರಹಿಸಿದ್ದಾರೆ.
ಆ ದಾಖಲೆಗಳನ್ನು ಪರಿಶೀಲಿಸಿರುವ ಎಸ್ಐಟಿ ಅಧಿಕಾರಿಗಳು ಇದೀಗ ಆ ಅವಧಿಯಲ್ಲಿ ಧರ್ಮಸ್ಘಳ ಗ್ರಾಮ ಪಂಚಾಯಿತಿಯಲ್ಲಿ ಕೆಲಸ ನಿರ್ವಹಿಸಿದ್ದ ಎಲ್ಲ ಪಿಡಿಒಗಳನ್ನೂ ಸಹ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ನೋಟಿಸ್ ನೀಡಿದೆ. ಈ ಮೂಲಕ ಪ್ರಕರಣದಲ್ಲಿ ಯಾವುದೇ ಲೋಪದೋಷ ಇರಬಾರದು ಎಂಬ ಕಾರಣದಿಂದ ಎಸ್ಐಟಿ ಅಧಿಕಾರಿಗಳು ಜಾಗರೂಕತೆಯಿಂದ ತನಿಖೆ ನಡೆಸುತ್ತಿದ್ದಾರೆ.
ಮೈಸೂರು ದಸರಾ 2025: ಎರಡನೇ ತಂಡದ ಗಜಪಡೆಯ ತೂಕ ಪರೀಕ್ಷೆ; ಯಾರು ಹೆಚ್ಚು?
ಎಐ ಕನ್ನಡ ಕೃಷಿ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


