ಗೌರಿ ಹಬ್ಬದ ದಿನವಾದ ಇಂದು (ಆಗಸ್ಟ್ 26, ಮಂಗಳವಾರ), ಚಿನ್ನದ ಬೆಲೆಯಲ್ಲಿ ಕೊಂಚ ಏರಿಕೆ ಕಂಡುಬಂದರೆ, ಬೆಳ್ಳಿ ಬೆಲೆಯಲ್ಲಿ ಸಣ್ಣ ಇಳಿಕೆಯಾಗಿದೆ. ಮೊನ್ನೆ ಹೆಚ್ಚಾಗಿ, ನಿನ್ನೆ ಕಡಿಮೆಯಾಗಿದ್ದ ಚಿನ್ನದ ಬೆಲೆ ಇಂದು ಮತ್ತೆ ಏರಿಕೆಯಾಗಿದ್ದು, ಅಪರಂಜಿ ಚಿನ್ನದ ಬೆಲೆ ₹1,02,000 ಗಡಿ ದಾಟಿದೆ.ಅಪರಂಜಿ ಚಿನ್ನದ ಬೆಲೆ ಮತ್ತೊಮ್ಮೆ 10,200 ರೂ ಗಡಿ ದಾಟಿದೆ. ಬೆಳ್ಳಿ ಬೆಲೆ ಒಂದು ರೂ ಕಡಿಮೆಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 93,550 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,02,060 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 12,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 93,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 12,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 13,000 ರೂ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 26ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 93,550 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,02,060 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 76,550 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,200 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 93,550 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,02,060 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,200 ರೂ
ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ
ನಗರ 22 ಕ್ಯಾರಟ್ (1 ಗ್ರಾಂ) 24 ಕ್ಯಾರಟ್ (1 ಗ್ರಾಂ)
ಚೆನ್ನೈ 9,355 ರೂ. 10,206 ರೂ.
ಮುಂಬೈ 9,355 ರೂ. 10,206 ರೂ.
ದಿಲ್ಲಿ 9,370 ರೂ. 10,221 ರೂ.
ಕೋಲ್ಕತಾ 9,355 ರೂ. 10,206 ರೂ.
ಹೈದರಾಬಾದ್ 9,355 ರೂ. 10,206 ರೂ.
ಧರ್ಮಸ್ಥಳ ಪ್ರಕರಣ: ತಿಮರೋಡಿ ಮನೆ ಮೇಲೆ ಎಸ್.ಐ.ಟಿ. ದಾಳಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


