ದುಬೈ: ನಿನ್ನೆ ( ಸೆಪ್ಟೆಂಬರ್ 25 ) ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಏಷ್ಯಾ ಕಪ್ 2025 ( Asia Cup 2025 ) ಟೂರ್ನಿಯ ಸೂಪರ್ 4 ಹಂತದ ಪಂದ್ಯದಲ್ಲಿ ಪಾಕಿಸ್ತಾನ ಬಾಂಗ್ಲಾದೇಶವನ್ನು ಮಣಿಸುವ ಮೂಲಕ ಫೈನಲ್ಗೆ ಅರ್ಹತೆ ಪಡೆದುಕೊಂಡಿದೆ.
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕ್ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು ಕೇವಲ 135 ರನ್ ಕಲೆಹಾಕಿ ಬಾಂಗ್ಲಾದೇಶಕ್ಕೆ 136 ರನ್ಗಳ ಗುರಿಯನ್ನು ನೀಡಿತ್ತು. ಆದರೆ ಈ ಅಲ್ಪ ಮೊತ್ತದ ಗುರಿಯನ್ನು ಬೆನ್ನತ್ತುವಲ್ಲಿ ಸಹ ವಿಫಲವಾದ ಬಾಂಗ್ಲಾದೇಶ 20 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 124 ರನ್ ಕಲೆಹಾಕಿತು. ಈ ಮೂಲಕ ಪಾಕಿಸ್ತಾನ 11 ರನ್ಗಳ ಗೆಲುವನ್ನು ದಾಖಲಿಸಿದೆ.
ಇನ್ನು ಸೂಪರ್ 4 ಹಂತದಲ್ಲಿ 3 ಪಂದ್ಯಗಳನ್ನಾಡಿ ಎರಡರಲ್ಲಿ ಗೆದ್ದು ಒಂದರಲ್ಲಿ ಸೋತಿರುವ ಪಾಕ್ ಹಾಗೂ ಆಡಿರುವ ಎಲ್ಲ ಎರಡು ಪಂದ್ಯಗಳನ್ನು ಗೆದ್ದಿರುವ ಭಾರತ ಫೈನಲ್ ಪ್ರವೇಶ ಮಾಡಿದ್ದು, ಭಾನುವಾರ ನಡೆಯಲಿರುವ ಫೈನಲ್ನಲ್ಲಿ ಟ್ರೋಫಿಗಾಗಿ ಸೆಣಸಾಡಲಿವೆ. ಈ ಮೂಲಕ ಟೂರ್ನಿಯಲ್ಲಿ ಮೂರನೇ ಬಾರಿಗೆ ಭಾರತ ಹಾಗೂ ಪಾಕ್ ಮುಖಾಮುಖಿಯಾಗಲಿವೆ.
ಲಡಾಖ್ನಲ್ಲಿ ರೊಚ್ಚಿಗೆದ್ದ ಜೆನ್ ಝಿ: ಬಿಜೆಪಿ ಬಾವುಟ ಹರಿದು, ಕಚೇರಿಗೆ ಬೆಂಕಿಯಿಟ್ಟ ಯುವ ಜನತೆ; ವಿಡಿಯೊ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


