Tuesday, November 3, 2026
spot_img
More
    spot_img
    HomeStateDistrictಹೈಕೋರ್ಟ್ ಮೆಟ್ಟಿಲೇರಿದ ಬೆಂಗಳೂರಿನ ಸುರಂಗ ರಸ್ತೆ ಯೋಜನೆ

    ಹೈಕೋರ್ಟ್ ಮೆಟ್ಟಿಲೇರಿದ ಬೆಂಗಳೂರಿನ ಸುರಂಗ ರಸ್ತೆ ಯೋಜನೆ

    ಪ್ರಸ್ತಾಪವಾದ ದಿನದಿಂದಲೂ ಬೆಂಗಳೂರು ನಗರದ ಸುರಂಗ ರಸ್ತೆ ಯೋಜನೆಗೆ ವಿರೋಧ ವ್ಯಕ್ತವಾಗುತ್ತಲೇ ಇದೆ. ಈ ಯೋಜನೆಯಿಂದ ಈಗ ಲಾಲ್‌ಬಾಗ್‌ಗೆ ಧಕ್ಕೆ ಆಗಲಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಸುರಂಗ ರಸ್ತೆ ವಿವಾದ ಈಗ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದೆ.

    ಬೆಂಗಳೂರು ನಗರದ ಸಂಚಾರ ದಟ್ಟಣೆ ಕಡಿಮೆ ಮಾಡುವ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕನಸಿನ ಯೋಜನೆ ಇದು. ಟೋಲ್ ಶುಲ್ಕ ವಸೂಲಿ ಮಾಡುವ ಮಾದರಿಯ ಸುರಂಗ ಮಾರ್ಗದ ರಸ್ತೆ ಯೋಜನೆಗೆ ಟೆಂಡರ್ ಕರೆಯಲು ಕರ್ನಾಟಕ ಸರ್ಕಾರ ತಯಾರಿ ನಡೆಸುತ್ತಿದೆ.

    ಈಗ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಯೋಜನೆ ವಿರುದ್ಧ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ. ಅರ್ಜಿಯ ವಿಚಾರಣೆ ಕೋರ್ಟ್‌ನಲ್ಲಿ ಆರಂಭವಾಗಿದ್ದು, ಸ್ವತಃ ವಕೀಲರು ಆಗಿರುವ ತೇಜಸ್ವಿ ಸೂರ್ಯ ವಾದ ಮಂಡಿಸಿದರು.

    ಸುರಂಗ ಮಾರ್ಗ ವಿರೋಧಿಸಿ ನಟ ಪ್ರಕಾಶ್ ಬೆಳವಾಡಿ ಮತ್ತು ಸಂಸದ ತೇಜಸ್ವಿ ಸೂರ್ಯ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಯೋಜನೆ ಜಾರಿಯಾಗುವಾಗ ಆಗುವ ಪರಿಸರ ಪರಿಣಾಮ ಮೌಲ್ಯ ಮಾಪನ ಮಾಡಿಲ್ಲ. ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧಿಕಾರದೊಂದಿಗೆ ಸಮಾಲೋಚನೆ ನಡೆಸಿಲ್ಲ. ಡಿಪಿಆರ್ ಕುರಿತು ಹಲವು ತಕರಾರುಗಳನ್ನು ಎತ್ತಿದ್ದಾರೆ.

    ಅಲ್ಲದೇ ಈ ಯೋಜನೆಯಿಂದ ಐತಿಹಾಸಿ ಲಾಲ್‌ಬಾಗ್ ಬಂಡೆಯ ಕೆಳಗೆ ಸುರಂಗ ಹಾದು ಹೋಗುವ ಕಾರಣ ಕಳವಳ ವ್ಯಕ್ತಪಡಿಸಲಾಗಿದೆ. ಈ ಕುರಿತು ಅರ್ಜಿಯಲ್ಲಿ ಹಲವು ಆಕ್ಷೇಪಗಳನ್ನು ಎತ್ತಲಾಗಿದೆ.

    ವಾದ ಮಂಡನೆ: ತೇಜಸ್ವಿ ಸೂರ್ಯ ಹೈಕೋರ್ಟ್‌ನಲ್ಲಿ ವಾದ ಮಂಡನೆ ಮಾಡಿ, ಈ ಯೋಜನೆಯಿಂದ ಸುಮಾರು 6.5 ಎಕರೆ ಲಾಲ್‌ಬಾಗ್ ಭೂಮಿ ಮೇಲೆ ಪರಿಣಾಮ ಉಂಟಾಗಲಿದೆ. ಲಾಲ್‌ಬಾಗ್ ಬಂಡೆಗೆ ಈ ಯೋಜನೆಯಿಂದ ತೊಂದರೆ ಆಗಲಿದೆ. ಬಂಡೆಯ ಅಡಿ ಸುರಂಗ ನಿರ್ಮಾಣ ಮಾಡುವುದರಿಂದ ಗಂಭೀರ ಪರಿಣಾಮ ಉಂಟಾಗಲಿದೆ. ಹಲವು ಮರಗಳಿಗೆ ಸಹ ಹಾನಿಯಾಗಲಿದೆ ಎಂದರು.

    ಕೋರ್ಟ್ ಯೋಜನೆ ಮರಗಳನ್ನು ಕಡಿಯುವ ಕುರಿತು ಮಾಹಿತಿ ನೀಡುವಂತೆ ರಾಜ್ಯ ಸರ್ಕಾರದ ಪರವಾಗಿ ಹಾಜರಿದ್ದ ವಕೀಲರಿಗೆ ಸೂಚನೆ ನೀಡಿತು. ಪರಿಸರ ಪರಿಣಾಮ ಮೌಲ್ಯ ಮಾಪನದ ಕುರಿತು ಭಾರತೀಯ ಭೂವೈಜ್ಞಾನಿಕ ಸರ್ವೇಕ್ಷಣಾ ಇಲಾಖೆಯಿಂದಲೂ ಅಭಿಪ್ರಾಯವನ್ನು ಕೇಳಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search