Monday, March 30, 2026
spot_img
More
    spot_img
    HomeNational/ Internationalಒಳಮೀಸಲಾತಿ ಸಂಬಂಧ ತೆಲಂಗಾಣ ಸಿಎಂ ರೇವಂತ್‌ ರಡ್ಡಿ ಭೇಟಿಯಾದ ಸಚಿವ ಕೆಎಚ್‌ ಮುನಿಯಪ್ಪ

    ಒಳಮೀಸಲಾತಿ ಸಂಬಂಧ ತೆಲಂಗಾಣ ಸಿಎಂ ರೇವಂತ್‌ ರಡ್ಡಿ ಭೇಟಿಯಾದ ಸಚಿವ ಕೆಎಚ್‌ ಮುನಿಯಪ್ಪ

    ನವದೆಹಲಿ: ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಅವರಿಂದು ಒಳಮೀಸಲಾತಿ ಸಂಬಂಧ ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

    ನವದೆಹಲಿಯಲ್ಲಿಂದು ರೇವಂತ್‌ ರೆಡ್ಡಿಯನ್ನು ಭೇಟಿ ಮಾಡಿ ಸುದೀರ್ಘ ಚರ್ಚೆ ನಡೆಸಿದ ಆಹಾರ ಇಲಾಖೆ ಸಚಿವ ಮುನಿಯಪ್ಪ ಅವರು, ಸುಪ್ರೀಂಕೋರ್ಟ್‌ ಒಳ ಮೀಸಲಾತಿ ಕುರಿತು ಐತಿಹಾಸಿಕ ತೀರ್ಪು ನೀಡಿದೆ. ಈ ತೀರ್ಪಿನ ಅನ್ವಯ ಪರಿಶಿಷ್ಟ ಜಾತಿಯಲ್ಲಿ 101 ಉಪಜಾತಿಗಳಿವೆ. ಅವುಗಳನ್ನು ಸಮವಾಗಿ ಹಂಚುವುದು ನಮ್ಮ ಸರ್ಕಾರದ ಮೂಲ ಉದ್ದೇಶವಾಗಿದೆ. ಹೀಗಾಗಿ ರಾಜ್ಯ ಸರ್ಕಾರ ನಿವೃತ್ತ ನ್ಯಾಯಾಧೀಶ ನಾಗಮೋಹನ್‌ ದಾಸ್‌ ಅವರ ನೇತೃತ್ವದಲ್ಲಿ ಆಯೋಗವನ್ನು ರಚಿಸಿದ್ದು, ಮೂರು ತಿಂಗಳೊಳಗಾಗಿ ವರದಿ ಪಡೆದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಜಾರಿಗೊಳಿಸಲು ಬದ್ಧರಾಗಿದ್ದೇವೆ ಎಂದು ಹೇಳಿದರು.

    ಇದೇ ವೇಳೆ ಪ್ರತಿಕ್ರಿಯೆ ನೀಡಿದ ತೆಲಂಗಾಣ ಸಿಎಂ ರೇವಂತ್ ರೆಡ್ಡಿ, 75 ವರ್ಷಗಳಿಂದ ಶೋಷಿತರಲ್ಲಿ ಶೋಷಿತರಾಗಿರುವ ಸಮುದಾಯಗಳಿಗೆ ನ್ಯಾಯ ಸಿಗುವ ಕಾಲ ಈಗ ಬಂದಿದೆ. ಎಲ್ಲಾ ಜಾತಿಗಳಿಗೂ ಸಮವಾಗಿ ಒಳಮೀಸಲಾತಿ ಹಂಚಿಕೆ ಮಾಡುವ ಮೂಲಕ ಅವಕಾಶ ಕಲ್ಪಿಸಲಾಗಿದೆ. ಹಾಗಾಗಿ ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವುದು ಅತ್ಯವಶ್ಯಕ ಎಂದು ಸಂತಸ ವ್ಯಕ್ತಪಡಿಸಿದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಬ್ರೇಕಿಂಗ್ರಾ! ಮನವಮಿ ಹಬ್ಬಕ್ಕೆ ಮಾರುಕಟ್ಟೆ ಬಂದ್ ಆಗುತ್ತಾ? ಹೂಡಿಕೆದಾರರಿಗೆ ಕ್ಲಿಯರ್ ಮಾಹಿತಿ!

    “ಸ್ಟಾಕ್ ಮಾರ್ಕೆಟ್ ಹಾಲಿಡೇ 2026” ಇದೀಗ ಹೂಡಿಕೆದಾರರಲ್ಲಿ ದೊಡ್ಡ ಗೊಂದಲ ಮೂಡಿಸಿದೆ. ರಾಮನವಮಿ ಹಬ್ಬದ ಹಿನ್ನೆಲೆಯಲ್ಲಿ ಗುರುವಾರ ಅಥವಾ ಶುಕ್ರವಾರ ಷೇರು ಮಾರುಕಟ್ಟೆ ಬಂದ್ ಆಗುತ್ತದೆಯಾ? ಎಂಬ ಪ್ರಶ್ನೆ ಟ್ರೇಡರ್‌ಗಳ ನಡುವೆ ಭಾರೀ...

    ಬ್ರೇಕಿಂಗ್! ಮಾರುಕಟ್ಟೆ ರಾಕೆಟ್—ಸೆನ್ಸೆಕ್ಸ್ 1300 ಪಾಯಿಂಟ್ ಜಿಗಿತ! ರೂಪಾಯಿ ಕುಸಿತ, ಚಿನ್ನ ಏರಿಕೆ… ಏನಿದು ಮಿಶ್ರ ಸಿಗ್ನಲ್?

    “ಸ್ಟಾಕ್ ಮಾರ್ಕೆಟ್ 24 ಮಾರ್ಚ್ 2026” ಹೂಡಿಕೆದಾರರಿಗೆ ಒಂದೇ ದಿನದಲ್ಲಿ ರೋಲರ್ ಕೋಸ್ಟರ್ ಅನುಭವ ನೀಡಿದೆ! ಒಂದೆಡೆ ಷೇರು ಮಾರುಕಟ್ಟೆ ಭರ್ಜರಿ ಏರಿಕೆ ಕಂಡಿದ್ದರೆ, ಇನ್ನೊಂದೆಡೆ ರೂಪಾಯಿ ಕುಸಿತ ಮತ್ತು ಚಿನ್ನದ ಬೆಲೆ...

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading