ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನವೆಂಬರ್.28ಕ್ಕೆ ಮುಂದೂಡಿಕೆ ಮಾಡಿದೆ.
ಈ ಕುರಿತು ಇಂದು ಹೈಕೋರ್ಟ್‌ನ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕ ಸದಸ್ಯ ಪೀಠವೂ ಜಾಮೀನು ಅರ್ಜಿ ವಿಚಾರಣೆ ನಡೆಸಿ, ಕೋರ್ಟ್‌ನ ಸಮಯ ಮುಗಿದ ಕಾರಣ ನ.28ಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಿದೆ
ನ್ಯಾಯಾಲಯದಲ್ಲಿ ದರ್ಶನ್ ಪರ ವಕೀಲ ಸಿ.ವಿ.ನಾಗೇಶ್ ಅವರು ಸುದೀರ್ಘವಾಗಿ ವಾದ ಮಂಡಿಸಿದ್ದರು. ಹೀಗಾಗಿ ಸಮಯದ ಅಭಾವ ಉಂಟಾಗಿದ್ದ ಕಾರಣ ವಿಚಾರಣೆಯನ್ನು ಮುಂದೂಡಿದೆ.
ಇನ್ನು ಮಾಹಿತಿಯ ಪ್ರಕಾರ ನಟ ದರ್ಶನ್‌ಗೆ ಜಾಮೀನು ಸಿಗುವುದು ಬಹುತೇಕ ಅನುಮಾನ ಎನ್ನಲಾಗಿದ್ದು, ಈ ಬಗ್ಗೆ ಪೊಲೀಸರಿಂದಲೇ ಮಾಹಿತಿ ಲಭ್ಯವಾಗಿದೆ ಎನ್ನಲಾಗಿದೆ.
ಪ್ರಕರಣ ಸಂಬಂಧ ರೇಣುಕಾಸ್ವಾಮಿ ಕೊಲೆಯಾದ ಸ್ಥಳದಲ್ಲಿ ನಟ ದರ್ಶನ್ ಆಪ್ತರೊಂದಿಗೆ ಕ್ಲಿಕ್ಕಿಸಿಕೊಂಡಿರುವ ಫೋಟೋ ಪೊಲೀಸರಿಗೆ ಸಿಕ್ಕಿದೆ. ಹೀಗಾಗಿ ನಟ ದರ್ಶನ್‌ಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ಪೊಲೀಸರೇ ಖುದ್ದಾಗಿ ನ್ಯಾಯಾಲಯಕ್ಕೆ ಮನವಿ ಮಾಡುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ ಸುದೀರ್ಘ ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ಇಂದು ಜಾಮೀನು ಅರ್ಜಿಯನ್ನು ಮುಂದೂಡಿಕೆ ಮಾಡಿದ್ದು, ನವೆಂಬರ್.28ರಂದು ದರ್ಶನ್ ಜಾಮೀನು ಭವಿಷ್ಯ ತಿಳಿಯಲಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


