Tuesday, September 1, 2026
spot_img
More
    spot_img
    HomeTop Storyವಿಶ್ವ ಬಾಲದಿನದ ಅಂಗವಾಗಿ 17 ಮಕ್ಕಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ

    ವಿಶ್ವ ಬಾಲದಿನದ ಅಂಗವಾಗಿ 17 ಮಕ್ಕಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ

    ನವದೆಹಲಿ: ವಿಶ್ವ ಬಾಲ ದಿನದ ಅಂಗವಾಗಿ ದೇಶದ ವಿವಿಧ ರಾಜ್ಯಗಳ 17 ಮಕ್ಕಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

    Advertisement

    ದೆಹಲಿಯ ಭಾರತ ಮಂಟಪ ಸಭಾಂಗಣದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ 10 ಬಾಲಕಿಯರು ಹಾಗೂ 7 ಬಾಲಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

    ನಂತರ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಸಮಾಜಕ್ಕೆ ಉತ್ತಮ ಕೊಡುಗೆ ನೀಡುವ ಸಲುವಾಗಿ ಮುಂದಿನ ಪೀಳಿಗೆಗಳು ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತೊಡಗಿಕೊಳ್ಳಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ. ಈ ಬಾಲ ಪುರಸ್ಕಾರ ಪ್ರಶಸ್ತಿ ಸ್ವೀಕರಿಸುವ ಬಾಲ ಮಕ್ಕಳ ಸಾಧನೆ ಮಹತ್ವದ್ದಾಗಿರುತ್ತದೆ ಎಂದರು.

    ಅಸಾಧಾರಣ ಧೈರ್ಯ ಮತ್ತು ಕಲೆ, ಸಂಸ್ಕೃತಿ, ವಿಜ್ಞಾನ ಮತ್ತು ತಂತ್ರಜ್ಞಾನ, ಕ್ರೀಡೆ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಕ್ಕಳನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತದೆ ಎಂದು ಸಂತಸ ವ್ಯಕ್ತಪಡಿಸಿದರು.

    ಈ ಪ್ರಶಸ್ತಿಯು ಪದಕ, ಪ್ರಮಾಣಪತ್ರ ಹಾಗೂ ಹೊತ್ತಗೆಯನ್ನು ಒಳಗೊಂಡಿರುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಮಾಹಿತಿ ನೀಡಿದೆ.

    ಈ ಮೂಲಕ ಚಿಕ್ಕವಯಸ್ಸಿನಲ್ಲೇ ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮಕ್ಕಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಿರುವುದು ವಿಶೇಷವೆನಿಸಿದ್ದು, ಮಕ್ಕಳ ಮುಂದಿನ ಶ್ರೇಯೋಭಿವೃದ್ಧಿಯ ವತಿಯಿಂದ ಈ ಕಾರ್ಯಕ್ರಮ ಜಾರಿಗೆ ತರಲಾಗಿದೆ ಎನ್ನಲಾಗುತ್ತಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading