Thursday, September 3, 2026
spot_img
More
    spot_img
    HomeTop Storyಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ವಿಧಿವಶ

    ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ವಿಧಿವಶ

    Advertisement

    ನವದೆಹಲಿ: ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು

    ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಮನಮೋಹನ್‌ ಸಿಂಗ್‌ ಅವರನ್ನು ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮನಮೋಹನ್‌ ಸಿಂಗ್‌ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ.

    2004 ರಿಂದ 2014ರವರೆಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಮನಮೋಹನ್‌ ಸಿಂಗ್‌ ಅವರು ಈ ವರ್ಷದ ಆರಂಭದಲ್ಲಿ ರಾಜ್ಯಸಭೆಯಿಂದ ನಿವೃತ್ತರಾಗಿದ್ದರು.

    ಅವರು ಈ ಹಿಂದೆ 1998 ರಿಂದ 2004ರವರೆಗೆ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಹೊಂದಿದ್ದರು. ಸಿಂಗ್‌ ಅವರು ಮೇ22, 2004ರಂದು ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. 2009ರಲ್ಲಿ ಅದೇ ದಿನಾಂಕದಂದು ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸಿದ್ದರು.

    ಮನಮೋಹನ್‌ ಸಿಂಗ್‌ ಅವರ ರಾಜಕೀಯ ಜೀವನವು 1991ರಲ್ಲಿ ಅವರು ರಾಜ್ಯಸಭೆಗೆ ಪ್ರವೇಶಿಸಿದಾಗ ಪ್ರಾರಂಭವಾಯಿತು. ಕೇವಲ ನಾಲ್ಕು ತಿಂಗಳ ನಂತರ ಅವರು ಜೂನ್‌ನಲ್ಲಿ ಪಿವಿ ನರಸಿಂಹರಾವ್‌ ಸರ್ಕಾರದಲ್ಲಿ ಕೇಂದ್ರ ಹಣಕಾಸು ಸಚಿವರಾಗಿ ನೇಮಕಗೊಂಡರು. ಇದು ಭಾರತದ ಆರ್ಥಿಕತೆಯಲ್ಲಿ ಪರಿವರ್ತನೆಗೆ ಕಾರಣವಾಗಿತ್ತು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading