ಮೆಲ್ಬೋರ್ನ್: ಇಲ್ಲಿನ ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್‌ನಲ್ಲಿ ನಡೆಯುತ್ತಿರುವ ಬಾರ್ಡರ್ – ಗವಾಸ್ಕರ್ ಟ್ರೋಫಿಯ ನಾಲ್ಕನೇ ಪಂದ್ಯದಲ್ಲಿ ಆಸ್ಟ್ರೇಲಿಯಾದ ಬ್ಯಾಟರ್ ಸ್ಯಾನ್ ಕೊನ್‍ಸ್ಟಾಸ್ ಅವರೊಂದಿಗೆ ಕಿರಿಕ್ ಮಾಡಿಕೊಂಡಿರುವ ಘಟನೆಯನ್ನು ಐಸಿಸಿ ಗಂಭೀರವಾಗಿ ಪರಿಗಣಿಸಿದ್ದು, ಕೊಹ್ಲಿ ಪಂದ್ಯಕ್ಕೆ ಪಡೆಯುವ ಸಂಭಾವನೆಯ ಮೇಲೆ 20% ದಂಡವನ್ನು ವಿಧಿಸಿದೆ.
ಈ ಪಂದ್ಯದ 10ನೇ ಓರ್ವ ಮುಕ್ತಾಯದ ವೇಳೆ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ಬ್ಯಾಟರ್ ಸ್ಯಾಮ್ ಕೊನ್‍ಸ್ಟಾಸ್ ಅವರನ್ನು ಭುಜಕ್ಕೆ ಭುಜ ನೀಡಿ ಕೆಣಕಿದ್ದರು. ಮೇಲ್ನೋಟಕ್ಕೆ ಕೊಹ್ಲಿ ಉದ್ದೇಶ ಪೂರ್ವಕವಾಗಿಯೇ ಆಸೀಸ್ ಆಟಗಾರನೊಂದಿಗೆ ಜಗಳಕ್ಕಿಳಿದಿರುವುದು ಸ್ಪಷ್ಟವಾಗಿ ಕಾಣುತ್ತಿತ್ತು.
ಈ ಜಗಳ ತಾರಕ್ಕೇರುತ್ತಿದ್ದಂತೆ ಅಂಪೈರ್ ಮತ್ತು ಸಹ ಆಟಗಾರರು ಮಧ್ಯ ಪ್ರವೇಶಿಸಿದ್ದರು. ಇದೀಗ ಈ ಭುಜಬಲದ ವಿಡಿಯೋ ವೈರಲ್ ಆಗಿದ್ದು, ಇದರ ಬೆನ್ನಲ್ಲೇ ಈ ಘಟನೆಯನ್ನು ಪರಿಶೀಲಿಸಲು ಐಸಿಸಿ ಅಧಿಕಾರಿಗಳು ನಿರ್ಧರಿಸಿದ್ದಾರೆ ಎಂದು ಆಸ್ಟ್ರೇಲಿಯಾ ಮಾಧ್ಯಮಗಳು ವರದಿ ಮಾಡಿದೆ.
ಇದಕ್ಕೂ ಮುನ್ನ ಅಡಿಲೇಡ್ ಟೆಸ್ಟ್‌ನಲ್ಲಿ ಟ್ರಾವಿಸ್ ಹೆಡ್ ಜೊತೆ ಕಿರಿಕ್ ಮಾಡಿಕೊಂಡಿದ್ದ ಮೊಹಮದ್ ಸಿರಾಜ್‍ಗೆ ಐಸಿಸಿ ಡಿಮೆರಿಟ್ ಪಾಯಿಂಟ್ ನೀಡಿ, ಪಂದ್ಯ ಶುಲ್ಕದ ಶೇ.20 ರಷ್ಟು ದಂಡ ವಿಧಿಸಿದ್ದರು. ಇದೀಗ ಮೆಲ್ಬೋರ್ನ್‍ನಲ್ಲಿ ವಿರಾಟ್ ಕೊಹ್ಲಿ ಮಾತಿನ ಚಕಮಕಿ ನಡೆಸಿರುವ ಕಾರಣ ಇದೇ ಪ್ರಮಾಣದ ದಂಡ ವಿಧಿಸಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


