Tuesday, November 3, 2026
spot_img
More
    spot_img
    HomeChampions Trophy 2025Champions Trophy 2025: ಬಲಿಷ್ಠ ಇಂಗ್ಲೆಂಡ್ ಮಣಿಸಿ ಟೂರ್ನಿಯಿಂದ ಹೊರದಬ್ಬಿದ ಅಫ್ಘಾನಿಸ್ತಾನಕ್ಕೆ ಸೆಮಿಫೈನಲ್ ತಲುಪುವ ಅವಕಾಶ...

    Champions Trophy 2025: ಬಲಿಷ್ಠ ಇಂಗ್ಲೆಂಡ್ ಮಣಿಸಿ ಟೂರ್ನಿಯಿಂದ ಹೊರದಬ್ಬಿದ ಅಫ್ಘಾನಿಸ್ತಾನಕ್ಕೆ ಸೆಮಿಫೈನಲ್ ತಲುಪುವ ಅವಕಾಶ ಎಷ್ಟಿದೆ?

    ಲಾಹೋರ್: ಇಲ್ಲಿನ ಗಡ್ಡಾಫಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಿನ್ನೆ (ಫೆಬ್ರವರಿ 26) ಅಫ್ಘಾನಿಸ್ತಾನ ಹಾಗೂ ಇಂಗ್ಲೆಂಡ್ ತಂಡಗಳ ನಡುವೆ ರೋಚಕ ಹಣಾಹಣಿ ನಡೆಯಿತು.

    ಕೊನೆಯ ಓವರ್‌ವರೆಗೂ ನಡೆದ ಈ ಸೆಣಸಾಟದಲ್ಲಿ ಇಂಗ್ಲೆಂಡ್ ಅಫ್ಘಾನಿಸ್ತಾನ ನೀಡಿದ್ದ ರನ್‌ ಗುರಿಯನ್ನು ಬೆನ್ನಟ್ಟಲಾಗದೇ ಹೀನಾಯ ಸೋಲನ್ನು ಅನುಭವಿಸಿದೆ.

    ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ 50 ಓವರ್‌ಗಳಲ್ಲಿ ಇಬ್ರಾಹಿಂ ಜದ್ರಾನ್ ಅಬ್ಬರದ 177 ರನ್‌ಗಳ ಭರ್ಜರಿ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 325 ರನ್ ಕಲೆಹಾಕಿ ಇಂಗ್ಲೆಂಡ್‌ಗೆ 326 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಲು ತಿಣುಕಾಡಿದ ಇಂಗ್ಲೆಂಡ್ ಅಂತಿಮ ಓವರ್‌ವರೆಗೂ ಬಂದು 49.5 ಓವರ್‌ಗಳಲ್ಲಿ 317 ರನ್‌ಗಳಿಗೆ ಆಲ್‌ಔಟ್ ಆಯಿತು.

    ಈ ಸೋಲಿನೊಂದಿಗೆ ಇಂಗ್ಲೆಂಡ್ ಟೂರ್ನಿಯಿಂದ ಎಲಿಮಿನೇಟ್ ಆಗಿದ್ದು ಭಾರೀ ಮುಖಭಂಗಕ್ಕೊಳಗಾಗಿದೆ. ಅತ್ತ ದೈತ್ಯ ಇಂಗ್ಲೆಂಡ್ ಮಣಿಸಿರುವ ಅಫ್ಘಾನಿಸ್ತಾನ ಗ್ರೂಪ್ ‘ಬಿ’ನಿಂದ ಸೆಮಿಫೈನಲ್ ಪ್ರವೇಶಿಸುವ ತವಕದಲ್ಲಿದೆ.

    ಹೌದು, ಈ ಪಂದ್ಯದಲ್ಲಿ ಗೆದ್ದಿರುವ ಅಫ್ಘಾನಿಸ್ತಾನ ಇದಕ್ಕೂ ಮುನ್ನ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಪಂದ್ಯದಲ್ಲಿ ಸೋಲನ್ನು ಅನುಭವಿಸಿದ್ದು, ಸದ್ಯ ಎರಡು ಅಂಕಗಳನ್ನು ತನ್ನ ಬಳಿ ಹೊಂದಿದೆ.

    ಅಫ್ಘಾನಿಸ್ತಾನ ಸೆಮಿಫೈನಲ್ ತಲುಪಬೇಕೆಂದರೆ ನಾಳೆ (ಫೆಬ್ರವರಿ 28) ನಡೆಯಲಿರುವ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಕಡ್ಡಾಯವಾಗಿ ಮಣಿಸಬೇಕಿದೆ. ಒಂದುವೇಳೆ ಸೋತರೆ ಅಪ್ಘಾನಿಸ್ತಾನಕ್ಕೆ ಯಾವುದೇ ಅವಕಾಶವಿರುವುದಿಲ್ಲ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search