ಬೆಂಗಳೂರು: ಸಹಕಾರ ಸಚಿವ ಕೆಎನ್ ರಾಜಣ್ಣ ನೀಡಿರುವ ರಾಜಕೀಯ ಬದಲಾವಣೆ ಹೇಳಿಕೆ ಸದ್ಯ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಎಬ್ಬಿಸಿದೆ. ವಿವಿಧ ಪಕ್ಷಗಳ ರಾಜಕಾರಣಿಗಳು ಈ ಕುರಿತು ಪ್ರತಿಕ್ರಿಯಿಸುತ್ತಿದ್ದು, ಕಾಂಗ್ರೆಸ್‌ನಲ್ಲಿ ಸಿಎಂ ಸೇರಿದಂತೆ ಪ್ರಮುಖ ಸ್ಥಾನಗಳ ಬದಲಾವಣೆಯಾಗುವುದರ ಕುರಿತು ಕೆಎನ್ ರಾಜಣ್ಣ ಸುಳಿವು ಕೊಟ್ಟಿದ್ದಾರೆ ಎಂದು ಕಾಲೆಳೆಯುತ್ತಿದ್ದಾರೆ.
ಇತ್ತ ಕಾಂಗ್ರೆಸ್‌ನಲ್ಲಿ ರಾಜಣ್ಣ ಹೇಳಿಕೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಎಂಬಿ ಪಾಟೀಲ್ ಈ ಹೇಳಿಕೆಗೆ ಬಿಜೆಪಿ ಹಾಗೂ ಜನತಾ ದಳ ಶಾಸಕರನ್ನು ಎಳೆತಂದು ವಿಭಿನ್ನ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.
ಮೊದಲಿಗೆ ಕೆಎನ್ ರಾಜಣ್ಣ ಅವರ ರಾಜಕೀಯ ಕ್ರಾಂತಿ ನಡೆಯಲಿದೆ ಎನ್ನುವುದಕ್ಕೆ ಪ್ರತಿಕ್ರಿಯಿಸಿದ ಎಂಬಿ ಪಾಟೀಲ್ ನಮ್ಮ ಕಾಂಗ್ರೆಸ್ ಪಕ್ಷದಲ್ಲಿ ಕ್ರಾಂತಿ ಎನ್ನುವುದು ಯಾವುದು ನಡೆಯುವುದಿಲ್ಲ, ಸ್ವಾತಂತ್ರ ಕ್ರಾಂತಿಯನ್ನು ಮಾಡಿದಂತಹ ಪಕ್ಷ ಎಂದು ಹೇಳಿಕೊಂಡರು. ಪಕ್ಷದ ಹೈಕಮಾಂಡ್ ಇದೆ, ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಅಧ್ಯಕ್ಷರು ಇದ್ದು, ಏನೇ ಇದ್ದರೂ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದರು.
ಇನ್ನು ರಾಜಕೀಯ ಬದಲಾವಣೆ ಕಾಂಗ್ರೆಸ್‌ನಲ್ಲೇ ಆಗಬೇಕೆಂದೇನಿಲ್ಲ ಬಿಜೆಪಿ ಹಾಗೂ ಜನತಾ ದಳ ಪಕ್ಷದ ಶಾಸಕರು ಕಾಂಗ್ರೆಸ್ ಸೇರುವುದೂ ಸಹ ರಾಜಕೀಯ ಬೆಳವಣಿಗೆ ಅಲ್ವೇ ಎಂದು ನಗುತ್ತಾ ಪ್ರತಿಕ್ರಿಯೆ ನೀಡಿದರು.
ಭಾರತದೊಂದಿಗೆ ಬಹಳ ದೊಡ್ಡ ವ್ಯಾಪಾರ ಒಪ್ಪಂದ ನಡೆಯುತ್ತಿದೆ: ಡೊನಾಲ್ಡ್ ಟ್ರಂಪ್
ಎಐ ಅಡ್ವೋಕೇಟ್ ಅಸಿಸ್ಟೆಂಟ್ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


