ಬೆಂಗಳೂರು: ಸಾರ್ವಜನಿಕರ ಸುರಕ್ಷಿತವಾಗಿ ಮನೆ -ಮನೆಗೆ ಪೊಲೀಸ್ ಎಂಬ ವಿನೂತನ ಯೋಜನೆಯನ್ನು ಶುಕ್ರವಾರದಿಂದ ಗೃಹ ಇಲಾಖೆ ಜಾರಿಗೆ ತಂದಿದೆ.
ಈ ಉಪಕ್ರಮವು ಸಮಾಜದಲ್ಲಿ ಅಪರಾಧ ತಡೆಗೆ ಸಹಕಾರಿಯಾಗುವುದಲ್ಲದೇ ಶಾಂತಿ ಮತ್ತು ಭದ್ರತೆಯ ಸ್ಥಿರತೆಯನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ.
ಸರ್ವರನ್ನು ಸಮಾನವಾಗಿ ಒಳಗೊಂಡು ಸಾರ್ವಜನಿಕರು ಈ ಕಾರ್ಯದಲ್ಲಿ ನೇರವಾಗಿ ಪಾಲ್ಗೊಳ್ಳುವಿಕೆಯನ್ನು ಖಾತರಿ ಪಡಿಸಿ, ಸಾಮಾಜಿಕ ಪಿಡುಗುಗಳ ವಿರುದ್ಧ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಲ್ಲಿ ಈ ವ್ಯವಸ್ಥೆಯು ಒಂದು ಆಶಾಕಿರಣವಾಗಿದೆ.
ಮೂಲಕ ಪೊಲೀಸರ ಬಗ್ಗೆ ಇರುವ ಭಯದ ಭಾವದ ಬದಲು ವಿಶ್ವಾಸದ ಚಿಹ್ನೆಯಾಗಿ ಸಮಾಜದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗುತ್ತದೆ.ಶುಕ್ರವಾರ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ಪೊಲೀಸ್ ಇಲಾಖೆಯು ಜಾರಿಗೆ ತಂದಿರುವ ಮನೆ-ಮನೆಗೆ ಪೊಲೀಸ್ ಉಪಕ್ರಮದ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಲಾಯಿತು.
ಆಧುನಿಕ ಯುಗದಲ್ಲಿ ಪೊಲೀಸರ ಪಾತ್ರವು ಬಹುಮುಖ್ಯವಾಗಿದೆ. ಕೇವಲ ಕಾನೂನು ಮತ್ತು ಸುವ್ಯವಸ್ಥೆ ಕಾಯ್ದುಕೊಳ್ಳುವವರಾಗಿ ಮಾತ್ರವಲ್ಲದೇ, ಸಮಾಜದ ಶಾಂತಿ ಮತ್ತು ಭದ್ರತೆಯ ರೂವಾರಿಗಳಾಗಿದ್ದಾರೆ.ಅಪರಾಧಗಳ ತಡೆ, ಅಪರಾಧ ಪ್ರಕರಣಗಳ ತನಿಖೆ, ಸಾರ್ವಜನಿಕ ಸಮಾರಂಭಗಳಲ್ಲಿ ಭದ್ರತೆ ಏರ್ಪಡಿಸುವುದು, ಪ್ರವಾಹ, ಭೂಕಂಪ, ಮಹಾಮಾರಿ ಮುಂತಾದ ವಿಪತ್ತು ಸಂದರ್ಭಗಳಲ್ಲಿ ರಕ್ಷಣಾತಕ ಕಾರ್ಯಗಳಲ್ಲಿ ತೊಡಗುವುದು ಪೊಲೀಸ್ ಇಲಾಖೆಯ ಪ್ರಮುಖ ಕರ್ತವ್ಯಗಳಾಗಿವೆ.
ಕ್ಲಿಷ್ಟ ಪರಿಸ್ಥಿತಿಗಳಲ್ಲಿ ಶಾಂತಿಯುತವಾಗಿ ನಿಭಾಯಿಸುವ ಮೂಲಕ ಪೊಲೀಸರು ಸಾರ್ವಜನಿಕರಲ್ಲಿ ಭದ್ರತೆ ಮತ್ತು ವಿಶ್ವಾಸವನ್ನು ಉಂಟುಮಾಡುವುದು ಇಲಾಖೆಯ ಆಧ್ಯತೆಯಾಗಿದೆ.
ಸಾರ್ವಜನಿಕರಲ್ಲಿ ಕಾನೂನುಗಳ ಬಗ್ಗೆ ತಿಳುವಳಿಕೆ ಬೆಳೆಸುವುದು ಮತ್ತು ಪೌರ ಸಹಭಾಗಿತ್ವದ ಕಾರ್ಯಕ್ರಮಗಳನ್ನು ರೂಪಿಸುವಲ್ಲಿ ಇಲಾಖೆಯು ಪ್ರಗತಿಪರ ನಿಲುವುಗಳನ್ನು ತೆಗೆದುಕೊಳ್ಳುತ್ತಿದೆ.ಆಧುನಿಕ ತಂತ್ರಜ್ಞಾನಗಳ ಬಳಕೆಯಿಂದ ಪೊಲೀಸ್ ಇಲಾಖೆಯು ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕ ಸೇವಾ ದಿಟ್ಟ ನೋಟದೊಂದಿಗೆ ತನ್ನ ಕಾರ್ಯವ್ಯಾಪ್ತಿಯನ್ನು ವಿಸ್ತರಿಸುತ್ತಿದೆ.
ಕಾನೂನು ಜಾಗೃತಿ:ಶಾಲಾ-ಕಾಲೇಜುಗಳಲ್ಲಿ ಕಾನೂನು ಜಾಗೃತಿ ಕಾರ್ಯಕ್ರಮಗಳು, ಮಹಿಳಾ ಭದ್ರತೆ ಕುರಿತ ಕಾರ್ಯಾಗಾರಗಳು ಮತ್ತು ಯುವ ಜನರಿಗೆ ಪೊಲೀಸ್ ಸೇವೆಗಳ ಬಗ್ಗೆ ಅರಿವು ಮೂಡಿಸುವ ಸಭೆಗಳನ್ನು ಏರ್ಪಡಿಸಲಾಗುತ್ತದೆ.ಉಪಕ್ರಮದ ಪ್ರಯೋಜನ: ಅಪರಾಧ ತಡೆಗೆ ಸಹಕಾರಿ -ಸಾರ್ವಜನಿಕರ ಸಹಕಾರದಿಂದ ಪೊಲೀಸರು ಶಂಕಾಸ್ಪದ ಚಟುವಟಿಕೆಗಳನ್ನು ಬೇಗ ಗರುತಿಸಿ ತಡೆಗಟ್ಟುವುದು.
ಜನರಲ್ಲಿ ನಂಬಿಕೆ ಬೆಳೆಸುವುದು-ಸಮುದಾಯ ಪೊಲೀಸ್ ವ್ಯವಸ್ಥೆಯು ಪೊಲೀಸ್ ಮತ್ತು ಸಾರ್ವಜನಿಕರ ನಡುವೆ ವಿಶ್ವಾಸದ ಸಂಬಂಧವನ್ನು ನಿರ್ಮಿಸುವುದು.
ಯುವಜನತೆಗೆ ಮಾರ್ಗದರ್ಶನ- ಯುವ ಜನರನ್ನು ಸಕಾರಾತಕ ಚಟುವಟಿಗಳತ್ತ ತೊಡಗಿಸಲು ಇದು ಸಹಾಯ ಮಾಡುತ್ತದೆ.ಒಟ್ಟಾರೆ ಸಮಾಜದಲ್ಲಿ ಗಂಭೀರ ಸಮಸ್ಯೆ ಉದ್ಭವಿಸುವ ಮೊದಲೇ ಪರಿಹಾರೋಪಾಯಗೊಂದಿಗೆ ಸನ್ನದ್ಧರಾಗಿರುವಂತಹ ವಾತಾವರಣ ರೂಪುಗೊಂಡಿರುತ್ತದೆ.
ಅಹ್ಮದಾಬಾದ್: ಏಕಾಏಕಿ ಜನರ ಕಡೆ ನುಗ್ಗಿದ ರಥಯಾತ್ರೆ ಆನೆಗಳು; ಭಯಾನಕ ವಿಡಿಯೊ ಸೆರೆ
ಎಐ ಅಡ್ವೋಕೇಟ್ ಅಸಿಸ್ಟೆಂಟ್ ವೆಬ್‌ಸೈಟ್‌ಗೆ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


