Sunday, September 20, 2026
spot_img
More
    spot_img
    HomeStateDistrictBREAKING: ಮಹದೇಶ್ವರ ಬೆಟ್ಟ ಹುಲಿಗಳ ಸಾವಿಗೆ ಮರಣೋತ್ತರ ಪರೀಕ್ಷೆಯಲ್ಲಿ ಕಾರಣ ಬಹಿರಂಗ

    BREAKING: ಮಹದೇಶ್ವರ ಬೆಟ್ಟ ಹುಲಿಗಳ ಸಾವಿಗೆ ಮರಣೋತ್ತರ ಪರೀಕ್ಷೆಯಲ್ಲಿ ಕಾರಣ ಬಹಿರಂಗ

    ಚಾಮರಾಜನಗರ : ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವಲಯದಲ್ಲಿ ನಿನ್ನೆ(ಜೂ.26)ಸಿಕ್ಕಿದ್ದ ಐದು ಹುಲಿಗಳ ಕಳೇಬರದ ಮರಣೋತ್ತರ ಪರೀಕ್ಷೆ ಪೂರ್ಣಗೊಂಡಿದ್ದು, ಐದು ಹುಲಿಗಳು ವಿಷ ಪ್ರಾಷನದಿಂದಲೇ ಸಾವನ್ನಪ್ಪಿರುವ ಬಗ್ಗೆ ದೃಢವಾಗಿದೆ ಎಂದು ಚಾಮರಾಜನಗರ ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಟಿ.ಹೀರಾಲಾಲ್‌ ತಿಳಿಸಿದರು.

    Advertisement

    ಹುಲಿ ಹಾಗೂ ಅಣತಿ ದೂರದಲ್ಲೇ ಸಿಕ್ಕಿದ್ದ ಹಸುವಿನ ಅಂಗಾಂಗಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಹುಲಿಗಳ ದೇಹ ಸೇರಿರುವ ವಿಷ ಯಾವುದು, ಪ್ರಮಾಣ ಎಷ್ಟು ಎಂಬ ಮಾಹಿತಿ ವರದಿ ಬಂದ ಬಳಿಕ ತಿಳಿಯಲಿದೆ ಎಂದು ಹುಲಿಗಳ ಮರಣೋತ್ತರ ಪರೀಕ್ಷೆಯ ಬಳಿಕ ಮಾಹಿತಿ ನೀಡಿದರು.

    ಐದು ಹುಲಿಗಳು ಮೂರು ದಿನಗಳ ಹಿಂದೆಯೇ ಮೃತಪಟ್ಟಿವೆ. ತಾಯಿ ಹುಲಿಗೆ 10 ವರ್ಷ ಹಾಗೂ ಮರಿಗಳಿಗೆ 8 ರಿಂದ 10 ತಿಂಗಳಾಗಿದೆ. ಸದ್ಯ ಘಟನೆ ಬಗ್ಗೆ ತನಿಖೆ ನಡೆಯುತ್ತದೆ, ಹುಲಿ ಬೇಟೆಯಾಡಿದ ಬಳಿಕ ಹಸುವಿನ ಕಳೇಬರಕ್ಕೆ ವಿಷ ಹಾಕಲಾಯಿತೇ ಅಥವಾ ವಿಷಪ್ರಾಶನದ ಹಸುವನ್ನು ಕಾಡಿನೊಳಗೆ ಇರಿಸಲಾಗಿತ್ತೇ ಎಂಬ ಮಾಹಿತಿ ಕಲೆ ಹಾಕುತ್ತಿದೆ. ಇತ್ತ ಮೃತ ಜಾನುವಾರ ಮಾಲೀಕನ ಪತ್ತೆ ಕಾರ್ಯವು ನಡೆಯುತ್ತಿದೆ ಎಂದು ತಿಳಿಸಿದರು.

    ಘಟನಾ ಸ್ಥಳಕ್ಕೆ ಖಂಡ್ರೆ ಭೇಟಿ
    ಹುಲಿ ಮೃತದೇಹ ಸಿಕ್ಕ ಮೀಣ್ಯಂ ಗ್ರಾಮಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ. ಹಸುವಿನ ಕಳೇಬರಕ್ಕೆ ವಿಷ ಹಾಕಿದ್ದು ಯಾರು ಎಂಬ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ. ಅರಣ್ಯ ಸಚಿವ ಈಶ್ವರ ಖಂಡ್ರೆ ಘಟನಾ ಸ್ಥಳಕ್ಕೆ ತೆರಳಿದ್ದು ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದಾರೆ.

    ಧರ್ಮಸ್ಥಳ ಕೊಲೆಗಳ ಹೆಣ ತೋರಿಸುತ್ತೇನೆಂದಿದ್ದ ವ್ಯಕ್ತಿ; ಎಸ್‌ಪಿ – ಪತ್ರ ಬರೆದಿದ್ದ ವಕೀಲರ ಭೇಟಿ!

    ಎಐ ಅಡ್ವೋಕೇಟ್‌ ಅಸಿಸ್ಟೆಂಟ್‌ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading