ದಕ್ಷಿಣ ಕನ್ನಡ: ಜಿಲ್ಲೆಯ ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ರಾವ್ ವಿರುದ್ಧ ಅತ್ಯಾಚಾರದ ಗಂಭೀರ ಆರೋಪ ಕೇಳಿಬಂದಿದೆ.
ಮಂಗಳೂರಿನ ಖಾಸಗಿ ಕಾಲೇಜಿಲ್ಲಿ ಬಿಎಸ್‌ಸಿ ಮಾಡುತ್ತಿರುವ ಕೃಷ್ಣ ರಾವ್ ಅದೇ ತರಗತಿಯ ವಿದ್ಯಾರ್ಥಿನಿಗೆ ಪ್ರೀತಿ ಹೆಸರಿನಲ್ಲಿ ವಂಚಿಸಿದ್ದಾನೆಂದು ಆರೋಪಿಸಲಾಗಿದೆ. ಕೃಷ್ಣ ರಾವ್ ತಮ್ಮ ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಯುವತಿಯನ್ನು ಮನೆಗೆ ಕರೆತಂದು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದಾನೆ.
ಯುವತಿ ಸಹ ಪುತ್ತೂರಿನವರೇ ಆಗಿದ್ದು, ಹೈಸ್ಕೂಲ್ ಸಮಯದಿಂದಲೂ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದಾರೆ. ಕಳೆದ 2024ರ ಅಕ್ಟೋಬರ್ 11ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಆಕೆಯನ್ನು ಮನೆಗೆ ಕರೆತಂದ ಕೃಷ್ಣ ರಾವ್ ಮದುವೆಯಾಗುತ್ತೇನೆಂದು ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಅಲ್ಲದೇ 2025ರ ಜನವರಿಯಲ್ಲೂ ಸಹ ಮತ್ತೆ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಬಳಿಕ ಯುವತಿ ಗರ್ಭಿಣಿಯೆಂದು ತಿಳಿದು ಮದುವೆಗೆ ನಿರಾಕರಿದ್ದಾನೆ ಎಂದು ಯುವತಿ ಆರೋಪಿಸಿ ಜೂನ್ 24ರಂದು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಹೆಚ್ಚು ಗೆಲುವು ಕಂಡ ನಾಯಕರ ಪಟ್ಟಿ; ನಂಬರ್ 1 ಯಾರು?
ಎಐ ಅಡ್ವೋಕೇಟ್ ಅಸಿಸ್ಟೆಂಟ್ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


