ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಬಂದಾಗಿನಿಂದಲೂ ಈ ಬಾರಿ ಮುಖ್ಯಮಂತ್ರಿ ಪದವಿ ತಲಾ ಎರಡೂವರೆ ವರ್ಷಕ್ಕೆ ಹಂಚಿಕೆಯಾಗಲಿದೆ ಎನ್ನಲಾಗುತ್ತಿದೆ.
ಈ ಬಗ್ಗೆ ಆಗಾಗ ರಾಜಕೀಯ ವಲಯಗಳಲ್ಲಿ ಚರ್ಚೆಗಳು ಕೇಳಿಬರುತ್ತಲೇ ಇದ್ದು, ಕಾಂಗ್ರೆಸ್ ನಾಯಕರು ಇದೆಲ್ಲ ಊಹಾಪೋಹ ಎಂದು ಆರೋಪಗಳನ್ನು ತಿರಸ್ಕರಿಸುತ್ತಲೇ ಬಂದಿದ್ದಾರೆ. ಸದ್ಯ ತಮ್ಮದೇ ಪಕ್ಷದ ಸಚಿವರೊಬ್ಬರು ರಾಜಕೀಯ ಬದಲಾವಣೆ ಕುರಿತು ಹೇಳಿಕೆ ನೀಡಿರುವುದು ಮತ್ತೆ ಅಧಿಕಾರ ಹಂಚಿಕೆ ಚರ್ಚೆಯನ್ನು ಮುನ್ನೆಲೆಗೆ ತಂದಿದೆ.
ಹೌದು, ಸಹಕಾರ ಸಚಿವ ಕೆಎನ್ ರಾಜಣ್ಣ ಆಗಸ್ಟ್ ಅಥವಾ ಸೆಪ್ಟೆಂಬರ್ ತಿಂಗಳಿನಲ್ಲಿ ರಾಜಕೀಯ ಬದಲಾವಣೆಯಾಗಲಿದೆ ಎಂದು ಹೇಳುವ ಮೂಲಕ ರಾಜ್ಯ ಕಾಂಗ್ರೆಸ್‌ನಲ್ಲಿ ದೊಡ್ಡ ಬದಲಾವಣೆಯಾಗಲಿದೆ ಎಂಬ ಸೂಚನೆ ಕೊಟ್ಟಿದ್ದಾರೆ.
ಇದರ ಕುರಿತು ಇದೀಗ ಸ್ವತಃ ಸಿದ್ದರಾಮಯ್ಯ ಸಹ ಪ್ರತಿಕ್ರಿಯಿಸಿದ್ದು, ರಾಜಣ್ಣ ಹೇಳಿರುವುದು ಬೆಳವಣಿಗೆ ಆಗಬಹುದು ಅಂತ, ಇದೇ ಆಗುತ್ತೆ ಎಂದು ನಿರ್ದಿಷ್ಟವಾಗಿ ಏನೂ ಹೇಳಿಲ್ಲ, ಹಾಗಾಗಿ ಅದನ್ನು ನಿರ್ಲಕ್ಷಿಸುವುದು ಉತ್ತಮ ಎಂದು ಹೇಳಿದರು.
ಚಾಮುಂಡಿ ಬೆಟ್ಟದಲ್ಲಿ ಮೊದಲ ಆಷಾಢ ಶುಕ್ರವಾರ: 3 ರೀತಿಯ ದರ್ಶನ ವ್ಯವಸ್ಥೆ; ಇಲ್ಲಿದೆ ಸಂಪೂರ್ಣ ಮಾಹಿತಿ
ಎಐ ಅಡ್ವೋಕೇಟ್ ಅಸಿಸ್ಟೆಂಟ್ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


