Wednesday, November 4, 2026
spot_img
More
    spot_img
    HomeLatest newsಚಾಮುಂಡಿ ತಾಯಿಯನ್ನು ಕೆಣಕಲು ಹೋದರೆ ಭಸ್ಮವಾಗುತ್ತೀರಿ; ಡಿಕೆಶಿ ವಿರುದ್ಧ ವಿಜಯೇಂದ್ರ ಆಕ್ರೋಶ

    ಚಾಮುಂಡಿ ತಾಯಿಯನ್ನು ಕೆಣಕಲು ಹೋದರೆ ಭಸ್ಮವಾಗುತ್ತೀರಿ; ಡಿಕೆಶಿ ವಿರುದ್ಧ ವಿಜಯೇಂದ್ರ ಆಕ್ರೋಶ

    ಬೆಂಗಳೂರು: ಚಾಮುಂಡಿ ತಾಯಿಯನ್ನು ಕೆಣಕಲು ಹೋದರೆ ರಾಜಕೀಯವಾಗಿ ಭಸ್ಮವಾಗಿ ಹೋಗುವಿರಿ ಎಚ್ಚರ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

    ಈ ಕುರಿತು ಸಾಮಾಜಿಜ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಡಿಸಿಎಂ ಡಿಕೆಶಿ ಅವರೇ ನಿಮ್ಮ ಪಕ್ಷದಲ್ಲಿ ನಿಮಗೆ ಎದುರಾಗಿರುವ ಕಂಟಕದಿಂದ ಪಾರಾಗಲು ಚಾಮುಂಡಿಬೆಟ್ಟ ಹಾಗೂ ಸಂಪ್ರದಾಯದ ದಸರಾವನ್ನು ಬಳಸಿಕೊಳ್ಳಬೇಡಿ. ಬಂಡೆಯೆಂದು ಬೀಗುತ್ತಿದ್ದ ನೀವು ಈಗಾಗಲೇ ಮುದ್ದೆಯಾಗಿ ಹೋಗಿದ್ದೀರಿ. ಚಾಮುಂಡಿ ತಾಯಿಯನ್ನು ಕೆಣಕಲು ಹೋದರೆ ರಾಜಕೀಯವಾಗಿ ಭಸ್ಮವಾಗಿ ಹೋಗುವಿರಿ ಎಚ್ಚರ. ಹಿಂದೂ ಪರಂಪರೆಯ ವಿಜಯದಶಮಿ ಹಬ್ಬವನ್ನು ಮಲಿನ ಮಾಡಲು ಹೊರಟಿದ್ದೀರಿ. ಮಹಿಷಾಸುರ ಮರ್ದಿನಿ ನಿಮ್ಮನ್ನು ಮರ್ದನ ಮಾಡುವ ಕಾಲ ದೂರವಿಲ್ಲ. ಚಾಮುಂಡಿ ತಾಯಿ ಶ್ರದ್ಧೆಯ ಭಕ್ತರ ಸ್ವತ್ತು. ಅದನ್ನು ಮುಟ್ಟಲು ಹೋದರೆ ಕಾದಿದೆ ನಿಮಗೆ ಆಪತ್ತು ಎಂದು ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಧರ್ಮಸ್ಥಳ: ಆ ಇಬ್ಬರ ಭಯಕ್ಕೆ ಮಾಸ್ಕ್‌ಮ್ಯಾನ್‌ ಹೆಣ ಹೂತಿರುವ ನಿಜವಾದ ಜಾಗಗಳನ್ನು ತೋರಿಸಿಲ್ಲ; ಮಟ್ಟೆಣ್ಣವರ್‌ ಹೊಸ ಬಾಂಬ್!

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search