ಬೆಂಗಳೂರು: ಚಾಮುಂಡೇಶ್ವರಿ ಕೇವಲ ಹಿಂದೂಗಳ ಆಸ್ತಿ ಅಲ್ಲ. ಐತಿಹಾಸಿಕ ಮೈಸೂರು ದಸರಾ ಧಾರ್ಮಿಕ ಆಚರಣೆ ಅಲ್ಲ. ಅದೊಂದು ಸಾಂಸ್ಕೃತಿಕ ಆಚರಣೆ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ಹಿರಿಯ ಸಾಹಿತಿ ಬಾನು ಮುಸ್ತಾಕ್ ದಸರಾ ಉದ್ಘಾಟನೆ ಮಾಡಿದರೆ ತಪ್ಪೇನು ಎಂದು ಪ್ರಶ್ನಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮುಂಡಿ ಬೆಟ್ಟ, ಚಾಮುಂಡಿ ದೇವರು ಎಲ್ಲಾ ಧರ್ಮದವರಿಗೂ ಇದೆ. ಚಾಮುಂಡೇಶ್ವರಿ ಹಿಂದೂಗಳ ಆಸ್ತಿಯಲ್ಲ. ಎಲ್ಲಾ ಸಮುದಾಯ ದವರು ಚಾಮುಂಡೇಶ್ವರಿ ದೇವಾಲಯಕ್ಕೆ ಹೋಗುತ್ತಾರೆ. ಅದು ಅವರ ನಂಬಿಕೆ. ನಾವು ಮಸೀದಿ, ಚರ್ಚ್ ಹೋಗುತ್ತೇವೆ, ಬಸ್ತಿ, ಜೈನ ದೇವಾಲಯ, ಗುರುದ್ವಾರಕ್ಕೂ ಹೋಗುತ್ತೇವೆ ಅದನ್ನು ತಪ್ಪಿಸಲು ಸಲು ಸಾಧ್ಯವೇ? ಹಿಂದೂ ದೇವಾಲಯಕ್ಕೆ ಅವರು ಬರುವುದಕ್ಕೂ ತಪ್ಪಿಸುವುದಕ್ಕೆ ಆಗುತ್ತದೆಯೇ ಎಂದಿದ್ದಾರೆ.
ಎಷ್ಟೋ ಜನ ಹಿಂದೂಗಳು ಮುಸ್ಲಿಂ ಆಗಿ ಮತಾಂತರ ಆಗಿಲ್ಲವೇ? ಅವರ ಧರ್ಮ ಪಡೆದಿಲ್ಲವೇ? ಕ್ರಿಶ್ಚಿಯನ್ ಧರ್ಮ ಸ್ವೀಕಾರ ಮಾಡಿಲ್ಲವೆ? ಇದೆಲ್ಲವೂ ರಾಜಕೀಯ. ಯಾಕೆ ಬೆಟ್ಟ ಹತ್ತಬಾರದು? ಯಾಕೆ ಉದ್ಘಾಟನೆ ಮಾಡಬಾರದು ಎಂದು ಪ್ರಶ್ನಿಸಿದ್ದಾರೆ. ಅಯೋಧ್ಯೆಗೆ ಹಿಂದೂಗಳು ಮಾತ್ರ ಬರಬೇಕು ಎಂದು ಏಕೆ ಬೋರ್ಡ್ ಹಾಕಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಮೈಸೂರು ದಸರಾ 2025: ಎರಡನೇ ತಂಡದ ಗಜಪಡೆಯ ತೂಕ ಪರೀಕ್ಷೆ; ಯಾರು ಹೆಚ್ಚು?
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


