Friday, September 18, 2026
spot_img
More
    spot_img
    HomeLatest newsಚಾಮುಂಡಿಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂದ ಡಿಕೆಶಿಗೆ ಯದುವೀರ್ ಒಡೆಯರ್‌ ತಿರುಗೇಟು

    ಚಾಮುಂಡಿಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂದ ಡಿಕೆಶಿಗೆ ಯದುವೀರ್ ಒಡೆಯರ್‌ ತಿರುಗೇಟು

    ಮೈಸೂರು: ಚಾಮುಂಡಿಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ಹಾಸ್ಪಾಸ್ಪದವಾಗಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    Advertisement

    ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿನಾಯಕ, ಗೌರಿ ಹಬ್ಬ ಆಚರಿಸುವ ವೇಳೆ ಡಿಕೆಶಿ ಹೇಳಿಕೆಯಿಂದ ಹಿಂದೂ‌ ಭಾವನೆಗೆ ಧಕ್ಕೆ ತರುವ ಕೆಲಸವಾಗುತ್ತಿದೆ. ಸಾವಿರಾರು ವರ್ಷಗಳ ಹಿಂದೆ ಮಾರ್ಕಂಡೇಯ ತಪಸ್ಸು ಮಾಡಿದ್ದ ಸ್ಥಳ ಅದು. ಸಾವಿರಾರು ವರ್ಷಗಳಿಂದ ಚಾಮುಂಡಿ ಇರುವುದು ಕೂಡ ಉಲ್ಲೇಖ ಇದೆ. ಚಾಮುಂಡಿಬೆಟ್ಟಕ್ಕೆ ಎಲ್ಲರಿಗೂ ಪ್ರವೇಶವಿದೆ. ಅದು ಧಾರ್ಮಿಕ ಸ್ಥಳವಾಗಿರುವ ಕಾರಣ ಎಲ್ಲರೂ ಹೋಗಬಹುದು. ಆಧುನಿಕ‌ ಕಾಲಘಟ್ಟದಲ್ಲಿ ಜಾತ್ಯಾತೀತ ದೃಷ್ಟಿಕೋನದಿಂದ ನೋಡಬಹುದು
    ಲಕ್ಷಾಂತರ ಜನರ ಭಾವನೆಗೆ ಧಕ್ಕೆ ಉಂಟಾಗಿದೆ ಎಂದು ಡಿಕೆಶಿ ಹೇಳಿಕೆಗೆ ಅಸಮಾಧಾನ ಹೊರಹಾಕಿದರು.

    ಇನ್ನು ಚಾಮುಂಡಿಬೆಟ್ಟ ಟಾರ್ಗೆಟ್ ಆಗಿದೆಯಾ? ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರಾಧಿಕಾರ ಸೃಷ್ಠಿಸುವುದು ಇದೇ ಕಾಂಗ್ರೆಸ್ ಸರ್ಕಾರ. ಬೆಟ್ಟವನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವುದು ಅವರ ಹುನ್ನಾರ. ಬರೀ ಹಿಂದೂ ದೇವಾಲಯಗಳನ್ನು ತೆಗೆದುಕೊಳ್ತಿದ್ದಾರೆ. ಬೆಂಗಳೂರಿನ ಆಂಜನೇಯ ದೇವಸ್ಥಾನವನ್ನೂ‌ ಹಾಗೆ ಮಾಡಿದ್ರು. ಯಾವಾಗಲೂ ಹಿಂದುಗಳ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ. ಕೋಟ್ಯಾಂತರ ಜನರ ಭಾವನೆಗೆ ಧಕ್ಕೆ ತರುತ್ತಿದ್ದಾರೆ. ಕಾಂಗ್ರೆಸ್ ಹಿಂದೂ ಸ್ಥಳಗಳನ್ನ ಟಾರ್ಗೆಟ್ ಮಾಡ್ತಿದೆ. ಕಾಂಗ್ರೆಸ್‌ನಿಂದ ಧಾರ್ಮಿಕ‌ ಭಾವನೆಗೆ ಧಕ್ಕೆ ಉಂಟಾಗಿದೆ. ಡಿಕೆಶಿ ಅವರು ಆರ್‌ಎಸ್‌ಎಸ್ ಹಾಡು ಹಾಡಿ ಜಾಗೃತಿ ಎಂದಿದ್ದರು. ಅವರ ಬೆಂಬಲಿಗರ ವಿರೋಧಕ್ಕೆ ಗುರಿಯಾಗಿದ್ದರು. ಅದನ್ನ ಸಮತೋಲನಕ್ಕೆ ತರಲು, ಪಕ್ಷಕ್ಕಾಗಿ, ಕಾರ್ಯಕರ್ತರಿಗಾಗಿ ಇಂತಹ ಹೇಳಿಕೆ ನೀಡಿರಬಹುದು. ನಾವು ಧರ್ಮ ಉಳಿಸುವ ನಿಟ್ಟಿನಲ್ಲಿ ಕಾನೂನು ಚೌಕಟ್ಟಿನಲ್ಲೂ ನಾವು ಹೋರಾಡುತ್ತೇವೆ. ನಾವು ಎಲ್ಲ ಧರ್ಮ ಒಪ್ಪಿಕೊಳ್ತೀವಿ. ಆಗಂತ ಒಂದು ಧರ್ಮದ ಓಲೈಕೆಗೆ ಮುಂದಾಗಬಾರದು. ರಾಜ್ಯದಲ್ಲಿ ‌ಹಲವು ಸಮಸ್ಯೆಗಳಿವೆ. ಅವುಗಳನ್ನು ಮುಚ್ಚಿ‌ ಹಾಕಲು ಇಂತಹ ಹೇಳಿಕೆ ಕೊಡುವುದು ಬೇಡ. ಭವಿಷ್ಯದಲ್ಲಿ ನಿಮಗೆ ಒಳಿತಾಗಲ್ಲ ಎಂದು ಹೇಳಿದರು.

    ಇನ್ನು ಮುಂದುವರಿದು ಮಾತನಾಡಿದ ಅವರು, ಈ‌ ಹಿಂದೆ ಡ್ರಗ್ಸ್ ಪ್ರಕರಣ‌ ಮುಚ್ಚಿ ಹಾಕಲು ಟಿಪ್ಪು ವಿಚಾರ ತಂದ್ರು. ಹಾಗೆಯೇ ಯಾವುದಾದರೂ ವಿಷಯ ಇದ್ದಾಗ ಡೈವರ್ಟ್ ಮಾಡಲು‌ ಹೇಳಿಕೆ ನೀಡ್ತಾರೆ. ದೇವಾಲಯಗಳನ್ನು ನಿಯಂತ್ರಣಕ್ಕೆ ತರುತ್ತಿದ್ದಾರೆ. ಪ್ರಥಮವಾಗಿ ಇದೊಂದು‌ ಧಾರ್ಮಿಕ ಸ್ಥಳ. ಬೆಟ್ಟ ಹಿಂದುಗಳ ಆಸ್ತಿ. ಅದು ಎಂದೆಂದಿಗೂ ಹಿಂದುಗಳ ಆಸ್ತಿ ಆಗಿರುತ್ತೆ. ಉಪಮುಖ್ಯಮಂತ್ರಿಗಳ ಹೇಳಿಕೆಯಿಂದ ಏನೂ ಆಗಲ್ಲ ಎಂದರು.

    ಗಣಪನ ಅಚ್ಚುಮೆಚ್ಚಿನ ‘ಕ್ರಿಸ್ಪಿ’ ಮೋದಕ: ಮಾಡುವುದು ಹೇಗೆ? ಇಲ್ಲಿದೆ ಸರಳ ವಿಧಾನ

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading