ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಮತ್ತೆ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿರುವ ಇಲಾಖೆ, ಸೆ.1ರವರೆಗೂ ಮಳೆ ಬೀಳುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಉಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಹಾಸನ, ದಾವಣಗೆರೆ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಚಾಮರಾಜನಗರ, ವಿಜಯನಗರ, ವಿಜಯಪುರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.
ಗಣೇಶ ಚತುರ್ಥಿಯಂದು ಚಂದ್ರನನ್ನು ನೋಡಿದರೆ ಶಾಪ ತಟ್ಟುತ್ತಾ? ಇಲ್ಲಿದೆ ಪುರಾಣ ಕಥೆ ಮತ್ತು ಪರಿಹಾರ
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


