Tuesday, November 3, 2026
spot_img
More
    spot_img
    HomeBreaking Newsತುಟ್ಟಿಭತ್ಯೆ ಹೆಚ್ಚಳ: ಕರ್ನಾಟಕದ ಸರ್ಕಾರಿ ನೌಕರರ ತುರ್ತು ಗಮನಕ್ಕೆ

    ತುಟ್ಟಿಭತ್ಯೆ ಹೆಚ್ಚಳ: ಕರ್ನಾಟಕದ ಸರ್ಕಾರಿ ನೌಕರರ ತುರ್ತು ಗಮನಕ್ಕೆ

    ಕರ್ನಾಟಕ ಸರ್ಕಾರ ದೀಪಾವಳಿ ಹಬ್ಬದ ಉಡುಗೊರೆ ಎಂಬಂತೆ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ (ಡಿಎ) ಹೆಚ್ಚಳ ಮಾಡಿತ್ತು. ಕೇಂದ್ರ ಸರ್ಕಾರ ಡಿಎ ಹೆಚ್ಚಳದ ಬಳಿಕ ಕರ್ನಾಟಕ ಸರ್ಕಾರ ರಾಜ್ಯ ಸರ್ಕಾರಿ ನೌಕರರ ಡಿಎ ಶೇಕಡ 12.25 ರಿಂದ ಶೇಕಡ 14.25 ಗೆ ಪರಿಷ್ಕರಿಸಿ ಆದೇಶವನ್ನು ಹೊರಡಿಸಿತ್ತು.

    ಆದರೆ ಈಗ ಸರ್ಕಾರಿ ನೌಕರರ ತುರ್ತು ಗಮನಕ್ಕೆ ಮಾಹಿತಿಯೊಂದಿದೆ. ಈ ತಿಂಗಳ ವೇತನದಲ್ಲಿ ಡಿಎ ಹೆಚ್ಚಳ ಸೇರಿರಲಿದೆ ಎಂದು ಅಂದಾಜಿಸಿದ್ದ ನೌಕರರಿಗೆ ನಿರಾಸೆಯಾಗಿದೆ. ಈ ಕುರಿತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮಾಹಿತಿ ನೀಡಿದೆ.

    ಹೌದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಈ ಕುರಿತು ಮಾಹಿತಿ ನೀಡಿದ್ದಾರೆ. ಸರ್ಕಾರ ಬಿಡುಗಡೆ ಮಾಡಿರುವ ತುಟ್ಟಿಭತ್ಯೆ ದರವು ಈ ತಿಂಗಳ ವೇತನದಲ್ಲಿ ಸೇರಿರುವುದಿಲ್ಲ. ಮುಂದಿನ ತಿಂಗಳ ವೇತನದಲ್ಲಿ ಸೇರ್ಪಡೆಗೊಳ್ಳಲಿದೆ.

    ಈ ತಿಂಗಳು ಸೇರಿದಂತೆ ಹಿಂದಿನ ತುಟ್ಟಿಭತ್ಯೆ ವ್ಯತ್ಯಾಸದ ಮೊತ್ತವನ್ನು 1ನೇ ತಾರೀಕಿನ ನಂತರ ಡ್ರಾ ಮಾಡಬಹುದಾಗಿದೆ. K2 ಸಮಸ್ಯೆ ಬಗೆಹರಿದಿದೆ ಎಂದು ಸರ್ಕಾರಿ ನೌಕರರಿಗೆ ಮಾಹಿತಿ ನೀಡಲಾಗಿದೆ.

    ಡಿಎ ಹೆಚ್ಚಳ ಆದೇಶ: ಸರ್ಕಾರಿ ನೌಕರರ ಡಿಎ ಹೆಚ್ಚಳ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಉಮಾ.ಕೆ. ಸರ್ಕಾರದ ಜಂಟಿ ಕಾರ್ಯದರ್ಶಿ, ಆರ್ಥಿಕ ಇಲಾಖೆ (ಸೇವೆಗಳು-2) ಆದೇಶವನ್ನು ಹೊರಡಿಸಿದ್ದರು. 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜುಲೈ 2025 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 12.25 ರಿಂದ ಶೇಕಡ 14.25 ಗೆ ಪರಿಷ್ಕರಿಸಿ ಮಂಜೂರು ಮಾಡಲು ಸರ್ಕಾರವು ಹರ್ಷಿಸುತ್ತದೆ ಎಂದು ಹೇಳಿದ್ದರು.

    ತುಟ್ಟಿಭತ್ಯೆಯ ಉದ್ದೇಶಕ್ಕಾಗಿ ಮೂಲ ವೇತನ ಎಂದರೆ ಸರ್ಕಾರಿ ನೌಕರನು ಧಾರಣ ಮಾಡಿರುವ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಯಲ್ಲಿ ಪಡೆಯುತ್ತಿರುವ ವೇತನ ಮತ್ತು ಅದರಲ್ಲಿ, 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಸ್ಥಗಿತ ವೇತನ ಬಡ್ತಿಯನ್ನು ನೀಡಲಾಗಿದ್ದರೆ, ಆ ಸ್ಥಗಿತ ವೇತನ ಬಡ್ತಿ.

    2024ರ ಕರ್ನಾಟಕ ನಾಗರಿಕ ಸೇವಾ (ಪರಿಷ್ಕೃತ ವೇತನ) ನಿಯಮಗಳ ನಿಯಮ (3)ಸಿಯನ್ನು ಓದಿಕೊಂಡು 7ನೇ ನಿಯಮದ (3)ನೇ ಉಪನಿಯಮದ ಮೇರೆಗೆ ಅವನಿಗೆ ನೀಡಲಾದ ವೈಯಕ್ತಿಕ ವೇತನ ಯಾವುದಾದರೂ ಇದ್ದರೆ, ಆ ವೈಯಕ್ತಿಕ ವೇತನ. ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಮಂಜೂರು ಮಾಡಲಾಗಿರುವ ಹೆಚ್ಚುವರಿ ವೇತನ ಬಡ್ತಿ ಯಾವುದಾದರೂ ಇದ್ದಲ್ಲಿ, ಅವುಗಳು ಸೇರುತ್ತವೆ. ತುಟ್ಟಿ ಭತ್ಯೆಯ ಮಂಜೂರಾತಿಯ ಉದ್ದೇಶಕ್ಕಾಗಿ ಮೂಲ ವೇತನಕ್ಕೆ ಮೇಲೆ ಸೂಚಿಸಿರುವುದನ್ನು ಹೊರತುಪಡಿಸಿ ಇತರ ಯಾವುದೇ ಉಪಲಬ್ಧಗಳನ್ನು ಸೇರಿಸತಕ್ಕದ್ದಲ್ಲ ಎಂದು ತಿಳಿಸಲಾಗಿತ್ತು.

    ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು/ ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು/ ಕುಟುಂಬ ನಿವೃತ್ತಿ ವೇತನದಾರರಿಗೂ ಸಹ ದಿನಾಂಕ 1ನೇ ಜುಲೈ 2025 ರಿಂದ ಜಾರಿಗೆ ಬರುವಂತೆ ಹಾಲಿ ಲಭ್ಯವಿರುವ ತುಟ್ಟಿಭತ್ಯೆಯ ದರಗಳನ್ನು ಮೂಲ ನಿವೃತ್ತಿ ವೇತನ/ ಕುಟುಂಬ ನಿವೃತ್ತಿ ವೇತನದ ಪ್ರಸಕ್ತ ಶೇಕಡ 12.25 ರಿಂದ ಶೇಕಡ 14.25ಕ್ಕೆ ಹೆಚ್ಚಿಸಿ ಮಂಜೂರು ಮಾಡಲು ಸಹ ಸರ್ಕಾರವು ಹರ್ಷಿಸುತ್ತದೆ ಎಂದು ಆದೇಶ ಹೇಳಿತ್ತು.

    ತುಟ್ಟಿ ಭತ್ಯೆಯ ಮಂಜೂರಾತಿಯ ಉದ್ದೇಶಕ್ಕಾಗಿ ಕ.ನಾ.ಸೇ(ಪ.ವೇ) ನಿಯಮಗಳು, 2024ರ ನಿಯಮ 3ರಲ್ಲಿ ಸೂಚಿಸಿರುವ ಮತ್ತು ಸದರಿ ನಿಯಮದಡಿ ಹೊರಡಿಸಿರುವ ಆದೇಶಗಳಲ್ಲಿ ಸೂಚಿಸಿರುವ ಮೂಲ ನಿವೃತ್ತಿ ವೇತನ/ ಕುಟುಂಬ ನಿವೃತ್ತಿ ವೇತನವನ್ನು ಹೊರತುಪಡಿಸಿ ಇತರೆ ಯಾವುದೇ ಉಪಲಬ್ಧಗಳನ್ನು ಸೇರಿಸತಕ್ಕದ್ದಲ್ಲ.

    ಯುಜಿಸಿ/ ಎಐಸಿಟಿಇ/ ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ನೌಕರರುಗಳಿಗೂ ಸಹ ಈ ಆದೇಶಗಳು ಅನ್ವಯಿಸುತ್ತವೆ. ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್‌ಗಳ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‌ಚಾರ್ಜ್ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರುಗಳಿಗೆ ಈ ಆದೇಶ ಅನ್ವಯಿಸುತ್ತದೆ.

    ಯುಜಿಸಿ/ ಎಐಸಿಟಿಇ/ ಐಸಿಎಆರ್ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‌ಜೆಪಿಸಿ ವೇತನ ಶ್ರೇಣಿಗಳ ನ್ಯಾಯಾಂಗ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶಗಳನ್ನು ಹೊರಡಿಸಲಾಗುವುದು. ಈ ಆದೇಶದ ಮೇರೆಗೆ ಲಭ್ಯವಿರುವ ತುಟ್ಟಿ ಭತ್ಯೆಯನ್ನು ಮುಂದಿನ ಆದೇಶದವರೆಗೆ ನಗದಾಗಿ ಪಾವತಿ ಮಾಡುವುದು.

    ತುಟ್ಟಿಭತ್ಯೆಯ ಕಾರಣದಿಂದ ಸಂದಾಯ ಮಾಡಬೇಕಾಗಿರುವ ಐವತ್ತು ಪೈಸೆ ಹಾಗೂ ಅದಕ್ಕಿಂತ ಹೆಚ್ಚಿನ ಭಿನ್ನಾಂಕಗಳನ್ನು ಮುಂದಿನ ರೂಪಾಯಿಗೆ ಪೂರ್ಣಗೊಳಿಸತಕ್ಕದ್ದು ಮತ್ತು ಐವತ್ತು ಪೈಸೆಗಿಂತ ಕಡಿಮೆ ಇರುವ ಭಿನ್ನಾಂಕಗಳನ್ನು ಕಡೆಗಣಿಸತಕ್ಕದ್ದು. ತುಟ್ಟಿ ಭತ್ಯೆ ಬಾಕಿ ಮೊತ್ತವನ್ನು, 2025ರ ಅಕ್ಟೋಬರ್ ಮಾಹೆಯ ವೇತನ ಬಟವಾಡೆಗೂ ಮೊದಲು ಪಾವತಿ ಮಾಡತಕ್ಕದ್ದಲ್ಲ. ತುಟ್ಟಿಭತ್ಯೆಯನ್ನು ಸಂಭಾವನೆಯ ವಿಶಿಷ್ಟ ಅಂಶವಾಗಿ ತೋರಿಸುವುದು ಮತ್ತು ಯಾವುದೇ ಉದ್ದೇಶಕ್ಕಾಗಿ ಇದನ್ನು ವೇತನ ಎಂದು ಪರಿಗಣಿಸಲಾಗುವುದಿಲ್ಲ ಎಂದು ಆದೇಶ ತಿಳಿಸಿತ್ತು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search