ಬೆಂಗಳೂರು: ಪ್ರಸ್ತುತ ನಡೆಯುತ್ತಿರುವ 2025 ಮಹಿಳಾ ವಿಶ್ವಕಪ್ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯವಾಗಿದ್ದು, ಸೆಮಿಫೈನಲ್ ಪಂದ್ಯಗಳತ್ತ ಎಲ್ಲರ ಚಿತ್ತ ನೆಟ್ಟಿದೆ.
ಟೂರ್ನಿಯ ಲೀಗ್ ಹಂತದಲ್ಲಿ ನೀಡಿದ ಉತ್ತಮ ಪ್ರದರ್ಶನದಿಂದ ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ಇಂಗ್ಲೆಂಡ್ ಹಾಗೂ ಭಾರತ ವನಿತೆಯರ ತಂಡಗಳು ಸೆಮಿಫೈನಲ್ ಅರ್ಹತೆ ಗಿಟ್ಟಿಸಿಕೊಂಡಿವೆ.
ಭಾರತ ವನಿತೆಯರ ತಂಡ ಅಕ್ಟೋಬರ್ 30ರಂದು ನಡೆಯಲಿರುವ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದ್ದು, ಈ ಮಹತ್ವದ ಪಂದ್ಯ ಆರಂಭಕ್ಕೂ ಮುನ್ನವೇ ಭಾರತ ತಂಡಕ್ಕೆ ಹಿನ್ನಡೆಯುಂಟಾಗಿತ್ತು. ತಂಡದ ಆರಂಭಿಕ ಆಟಗಾರ್ತಿ ಪ್ರತೀಕಾ ರಾವಲ್ ಬಾಂಗ್ಲಾದೇಶ ವಿರುದ್ಧ ನಡೆದ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಬೌಂಡರಿ ಲೈನ್ ಬಳಿ ಚೆಂಡನ್ನು ತಡೆಯಲು ಹೋಗಿ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದರು.
ಹೀಗಾಗಿ ಪ್ರತೀಕಾ ರಾವಲ್ ಟೂರ್ನಿಯಿಂದ ಹೊರಬಿದ್ದಿದ್ದರು. ಪ್ರತೀಕಾ ರಾವಲ್ ಟೂರ್ನಿಯಿಂದ ಹೊರಬಿದ್ದ ಕೂಡಲೇ ಬಿಸಿಸಿಐ ಬದಲಿ ಆಟಗಾರ್ತಿಯನ್ನು ನೇಮಿಸಿದ್ದು, ಇದು ಭಾರತ ಕ್ರಿಕೆಟ್ ತಂಡದ ಅಭಿಮಾನಿಗಳ ಪಾಲಿಗೆ ಸಂತಸವನ್ನುಂಟುಮಾಡಿದೆ.
ಟಿ20 ಕ್ರಿಕೆಟ್‌ನಲ್ಲಿ ತನ್ನ ಹೊಡಿಬಡಿ ಆಟದಿಂದ ಮಾನ್‌ಸ್ಟರ್ ಎಂದೇ ಖ್ಯಾತಿಯನ್ನು ಪಡೆದಿರುವ ಶೆಫಾಲಿ ವರ್ಮಾ ಪ್ರತೀಕಾ ರಾವಲ್ ಬದಲಿಗೆ ತಂಡ ಸೇರಿಕೊಂಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹಲವು ಟ್ವೀಟ್‌ಗಳು ಹರಿದಾಡುತ್ತಿದ್ದು, ಬಲಿಷ್ಟ ಆಸ್ಟ್ರೇಲಿಯಾ ತಂಡವನ್ನು ಎದುರಿಸಲು ಈ ರೀತಿಯ ಸ್ಪೋಟಕ ಆಟಗಾರ್ತಿಯ ಅಗತ್ಯವಿತ್ತು ಎಂದು ಹೊಗಳುತ್ತಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


