Saturday, August 8, 2026
spot_img
More
    spot_img
    HomeStateಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಮತ್ತೊಂದು ಸಂಕಷ್ಟ

    ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಮತ್ತೊಂದು ಸಂಕಷ್ಟ

    ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ತಿರುವು ಸಿಕ್ಕಿದ್ದು, ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ದ ಮತ್ತೊಂದು ಕೇಸ್ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

    Advertisement

    ಮುಡಾ ಪ್ರಕರಣದಲ್ಲಿ ಈಗಾಗಲೇ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿ ತನಿಖಾ ವರದಿ ಸಲ್ಲಿಸಿದ್ದಾರೆ. ಅಲ್ಲದೇ ಸಿಬಿಐ ತನಿಖೆಗೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಡಿಸೆಂಬರ್.10ಕ್ಕೆ ಮುಂದೂಡಿದೆ. ಈ ಮಧ್ಯೆ ಜಮುನಾ ಎಂಬುವವರು ಸಿಎಂ ಕುಟುಂಬದ ವಿರುದ್ಧ ದೂರು ನೀಡಿ ಪ್ರಕರಣ ಮತ್ತೊಂದು ತಿರುವು ಪಡೆಯುವಂತೆ ಮಾಡಿದ್ದಾರೆ.

    ಮುಡಾ ಪ್ರಕರಣದ 50:50 ಅನುಪಾತದ ಬದಲಿ ನಿವೇಶನಗಳ ಸಂಬಂಧ ತಮ್ಮ ಗಮನಕ್ಕೆ ತರದೆ ಭೂಮಿಯನ್ನು ಮಾರಾಟ ಮಾಡಲಾಗಿದೆ ಎಂದು ಆರೋಪಿಸಿ A4 ಆರೋಪಿಯಾಗಿರುವ ಜೆ.ದೇವರಾಜು ಅವರ ಅಣ್ಣ ಮೈಲಾರಯ್ಯ ಅವರ ಮಗಳು ಜಮುನಾ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ವಿರುದ್ಧ ಮೈಸೂರಿನ 7ನೇ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ.

    ಕೆಸರೆ ಗ್ರಾಮದ ಸರ್ವೆ ನಂಬರ್ ಸರ್ವೆ ನಂ.464ರ 3.16 ಎಕರೆ ಭೂಮಿ ಇದಾಗಿದ್ದು, ಸಿಎಂ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ವಿರುದ್ಧ ಕೂಡ ಪ್ರಕರಣ ದಾಖಲಿಸಿದ್ದಾರೆ. ಜಮೀನಿನಲ್ಲಿ ನಮಗೂ ಭಾಗ ಬರಬೇಕು. ಪಿತ್ರಾರ್ಜಿತ ಆಸ್ತಿಯಲ್ಲಿ ನನಗೂ ಪಾಲು ಕೊಡಿ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ಈ ಮೂಲಕ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮುಡಾ ಪ್ರಕರಣದಲ್ಲಿ ಕುಟುಂಬ ಬಹುತೇಕ ಬಂಧಿಯಾಗುವ ಎಲ್ಲಾ ಸಾಧ್ಯತೆಗಳು ಕಾಣಿಸುತ್ತಿವೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading