Monday, November 2, 2026
spot_img
More
    spot_img
    HomeBreaking Newsಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕುಟುಂಬ ಸದಸ್ಯರಿಗೆ ಸರ್ಕಾರಿ ಉದ್ಯೋಗ

    ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕುಟುಂಬ ಸದಸ್ಯರಿಗೆ ಸರ್ಕಾರಿ ಉದ್ಯೋಗ

    ಕರ್ನಾಟಕದ ಹಿರಿಯ ಐಎಎಸ್ ಅಧಿಕಾರಿ ಹಾಗೂ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಹಾಂತೇಶ್ ಬೀಳಗಿ ರಸ್ತೆ ಅಪಘಾತದಲ್ಲಿ ಮಂಗಳವಾರ ಸಂಜೆ ಮೃತಪಟ್ಟಿದ್ದಾರೆ. ಬುಧವಾರ ಅವರ ಅಂತ್ಯಕ್ರಿಯೆ ನಡೆದಿದ್ದು, ಅಪಾರ ಅಭಿಮಾನಿಗಳು ಸರಳ ವ್ಯಕ್ತಿತ್ವದ ಅಧಿಕಾರಿ ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ.

    ಮಹಾಂತೇಶ್ ಬೀಳಗಿ 2012ರ ಕರ್ನಾಟಕ ಕೇಡರ್​ನ ಐಎಎಸ್ ಅಧಿಕಾರಿ. ಅವರ ಸರ್ಕಾರಿ ಸೇವೆ ಇನ್ನೂ ಸಹ ಬಾಕಿ ಇತ್ತು. ಅವರ ಅಕಾಲಿನ ಸಾವಿನ ಹಿನ್ನಲೆಯಲ್ಲಿ ಅವರ ಕುಟುಂಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರವನ್ನು ಬರೆಯಲಾಗಿದೆ.

    ಈ ಕುರಿತು ಕರ್ನಾಟಕ ಬಿಜೆಪಿ ಅಧ್ಯಕ್ಷ, ಶಿಕಾರಿಪುರ ಕ್ಷೇತ್ರದ ಶಾಸಕ ಬಿ.ವೈ.ವಿಜಯೇಂದ್ರ ಪತ್ರವನ್ನು ಬರೆದಿದ್ದಾರೆ. ಹಿರಿಯ ಐಎಎಸ್ ಅಧಿಕಾರಿ ದಿ. ಶ್ರೀ ಮಹಾಂತೇಶ್ ಬೀಳಗಿಯವರ ಅಕಾಲಿಕ ನಿಧನದಿಂದ ನೊಂದಿರುವ ಕುಟುಂಬದ ಕಣ್ಣೀರು ಒರೆಸಿ, ಸಾಂತ್ವನ ಹೇಳುವುದು ರಾಜ್ಯ ಸರ್ಕಾರದ ಜವಾಬ್ದಾರಿ.

    ಈ ಹಿಂದೆ ಇಂತಹ ಸಂದರ್ಭಗಳಲ್ಲಿ ಅಗಲಿದ ಅಧಿಕಾರಿಗಳ ಕುಟುಂಬ ವರ್ಗದವರಿಗೆ ಅಧಿಕಾರಿ ಹುದ್ದೆಯನ್ನು ನೀಡಿದ ಹಲವು ನಿದರ್ಶನಗಳಿದ್ದು, ಅದಕ್ಕೆ ಅನುಗುಣವಾಗಿ ಶ್ರೀಯುತ ಬೀಳಗಿಯವರ ಕುಟುಂಬದ ಸದಸ್ಯರೊಬ್ಬರಿಗೆ ಕ್ಲಾಸ್-1 ಅಧಿಕಾರಿ ಹುದ್ದೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರದ ಮೂಲಕ ಮನವಿ ಸಲ್ಲಿಸಿದ್ದೇನೆ ಎಂದು ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

    ದಿ. ಮಹಾಂತೇಶ್ ಬೀಳಗಿಯವರ ಆದರ್ಶಪ್ರಾಯ ಕಾರ್ಯನಿರ್ವಹಣೆ, ಸೇವೆಗಳ ಹಿನ್ನಲೆಯಲ್ಲಿ, ಇದನ್ನು ವಿಶೇಷ ಪ್ರಕರಣವೆಂದು ರಾಜ್ಯ ಸರ್ಕಾರ ಪರಿಗಣಿಸಬೇಕು. ರಾಜ್ಯ ಸರ್ಕಾರ ಶೀಘ್ರದಲ್ಲಿ ಪೂರಕವಾಗಿ ಮಾನವೀಯ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎಂದು ನಿರೀಕ್ಷಿಸುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ ಹಾಕಿದ್ದಾರೆ.

    ವಿಜಯೇಂದ್ರ ಪತ್ರದ ವಿವರ: ಬಿ.ವೈ.ವಿಜಯೇಂದ್ರ ಬರೆದಿರುವ ಪತ್ರವು ದಿ. ಶ್ರೀ ಮಹಾಂತೇಶ ಬೀಳಗಿ, ಐಎಎಸ್ ಅಧಿಕಾರಿಯವರ ಕುಟುಂಬಕ್ಕೆ ಅನುಕಂಪದ ಆಧಾರದ ಮೇಲೆ ಕ್ಲಾಸ್ -1 ಅಧಿಕಾರಿ ಹುದ್ದೆಯನ್ನು ನೀಡುವ ಕುರಿತು ಎಂಬ ವಿಷಯವನ್ನು ಒಳಗೊಂಡಿದೆ.

    ಕರ್ನಾಟಕ ಸರ್ಕಾರದ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ರಸ್ತೆ ಅಪಘಾತದಲ್ಲಿ ನಿಧನ ಹೊಂದಿರುವುದು ತಮಗೆ ಗೊತ್ತಿರುವ ವಿಚಾರ.

    ಒಬ್ಬ ಸರ್ಕಾರಿ ಅಧಿಕಾರಿಯಾಗಿ ಕೇವಲ ಸರಕಾರಿ ಕೆಲಸ ಎಂದು ಪರಿಗಣಿಸದೆ ಬಡವರ ಅಶಕ್ತರ ಅಭಿವೃದ್ಧಿಗಾಗಿ ಅಂತಕರಣದಿಂದ ಕೆಲಸ ಮಾಡಿದ ಬಸವಾದಿ ಶರಣರಲ್ಲಿ ನಂಬಿಕೆ ಇಟ್ಟು ಜನಸೇವೆಗೈದ ಮಹಾಂತೇಶ್ ಬೀಳಗಿಯವರು ಒಬ್ಬ ಆದರ್ಶ ಅಧಿಕಾರಿಯಾಗಿದ್ದರು. ಅವರ ಆಕಾಲಿಕ ನಿಧನವು ಕೇವಲ ಅವರ ಕುಟುಂಬಕ್ಕೆ ಮಾತ್ರವಲ್ಲದೆ ಇಡೀ ಸಮಾಜಕ್ಕೆ ನಷ್ಟವನ್ನುಂಟು ಮಾಡಿದೆ.

    ಈ ಹಿಂದೆ ಅಧಿಕಾರಿಗಳು ಅಕಾಲಿಕವಾಗಿ ಮರಣ ಹೊಂದಿದ ಸಂದರ್ಭದಲ್ಲಿ ಅವರ ಕುಟುಂಬ ವರ್ಗದವರಿಗೆ ಕ್ಲಾಸ್-1 ಅಧಿಕಾರಿ ಹುದ್ದೆಯನ್ನು ನೀಡಿದ ಹಲವು ನಿದರ್ಶನಗಳಿವೆ. ಅದರಂತೆ ಶ್ರೀ ಮಹಾಂತೇಶ್ ಬೀಳಗಿ ಅವರ ಅಕಾಲಿಕ ನಿಧನವನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ, ಅವರ ಪತ್ನಿ ಅಥವಾ ಪುತ್ರಿಗೆ ಅನುಕಂಪದ ಆಧಾರದ ಮೇಲೆ ಕ್ಲಾಸ್ -1 ಅಧಿಕಾರಿ ಹುದ್ದೆಯನ್ನು ನೀಡುವಂತೆ ತಮ್ಮನ್ನು ಕೋರುತ್ತೇನೆ ಎಂದು ಪತ್ರದಲ್ಲಿ ವಿಯಜೇಂದ್ರ ಮನವಿ ಮಾಡಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search