Thursday, November 5, 2026
spot_img
More
    spot_img
    HomeLatest newsಕಾಂಗ್ರೆಸ್‌ನಲ್ಲಿದ್ರೂ ನೀವು ಸಿಎಂ ಆಗಿಲ್ಲ ಎಂದು ಡಿಕೆಶಿಗೆ ಹೇಳಿದ್ರಲ್ಲ ಎಂದಿದ್ದಕ್ಕೆ ನಕ್ಕ ಯಡಿಯೂರಪ್ಪ

    ಕಾಂಗ್ರೆಸ್‌ನಲ್ಲಿದ್ರೂ ನೀವು ಸಿಎಂ ಆಗಿಲ್ಲ ಎಂದು ಡಿಕೆಶಿಗೆ ಹೇಳಿದ್ರಲ್ಲ ಎಂದಿದ್ದಕ್ಕೆ ನಕ್ಕ ಯಡಿಯೂರಪ್ಪ

    ಶಿವಮೊಗ್ಗ (ನವೆಂಬರ್‌ 27,2025): ಸದ್ಯ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯ ಕುರಿತ ಚರ್ಚೆಗಳೇ ಹೆಚ್ಚಾಗಿ ನಡೆಯುತ್ತಿದೆ. ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಅಧಿಕಾರ ಹಂಚಿಕೆ ಬಗ್ಗೆ ಡಿಕೆ ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಬಣಗಳ ನಡುವೆ ಪೈಪೋಟಿ ಏರ್ಪಟ್ಟಿದೆ.

    ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎನ್ನುತ್ತಿದ್ದ ಕಾಂಗ್ರೆಸ್ಸಿಗರೇ ಇದೀಗ ನಾಯಕತ್ವದ ಬದಲಾವಣೆ ಕುರಿತು ಬಹಿರಂಗವಾಗಿ ಮಾತನಾಡುತ್ತಿದ್ದು, ಹೈಕಮಾಂಡ್‌ ಸಹ ಈ ಕುರಿತು ಪ್ರತಿಕ್ರಿಯೆ ನೀಡಿದೆ.

    ಬೆಂಗಳೂರಿಗೆ ಆಗಮಿಸಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ಇಬ್ಬರನ್ನೂ ದೆಹಲಿಗೆ ಕರೆಸಿಕೊಂಡು ಚರ್ಚಿಸಿ ಗೊಂದಲಗಳಿಗೆ ತೆರೆ ಎಳೆಯಲಿದ್ದೇವೆ ಎಂದು ಹೇಳಿಕೆ ನೀಡಿದ್ದು, ಅಧಿಕಾರ ಹಂಚಿಕೆ ಕುರಿತು ಎದ್ದಿರುವ ಚರ್ಚೆಗಳು ಸತ್ಯ ಎಂಬುದನ್ನು ತಿಳಿಸಿದ್ದಾರೆ.

    ಹೀಗೆ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ವಿಪಕ್ಷಗಳ ನಾಯಕರೂ ಸಹ ಪ್ರತಿಕ್ರಿಯಿಸಿದ್ದು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕಾಂಗ್ರೆಸ್‌ನವರು ಕಳೆದ ಆರೇಳು ತಿಂಗಳುಗಳಿಂದ ಅಧಿಕಾರ ಹಂಚಿಕೆ ವಿಷಯದಿಂದಾಗಿ ಕೆಲಸವನ್ನು ನಿರ್ವಹಿಸಿಲ್ಲ ಎಂದು ಟೀಕಿಸಿದ್ದಾರೆ.

    ಇನ್ನು ನಿರ್ಮಲಾನಂದ ಸ್ವಾಮೀಜಿಗಳು ಡಿಕೆ ಶಿವಕುಮಾರ್‌ ಸಿಎಂ ಆಗಬೇಕು ಎಂದು ಹೇಳಿಕೆ ನೀಡಿದ್ದಾರೆ ಎಂಬುದರ ಕುರಿತು ಪ್ರತಿಕ್ರಿಯಿಸಿದ ಯಡಿಯೂರಪ್ಪ ನಿರ್ಮಲಾನಂದ ಸ್ವಾಮೀಜಿಗಳು ವಾಸ್ತವವನ್ನು ಅರಿತು ಮಾತನಾಡಿರುತ್ತಾರೆ, ಅವರ ಹೇಳಿಕೆ ವಿರುದ್ಧ ಮಾತನಾಡಲು ಸಾಧ್ಯವಿಲ್ಲ ಎಂದರು. ಈ ವೇಳೆ ನೀವು ಈ ಹಿಂದೆ ಸದನದಲ್ಲಿ ಡಿಕೆ ಶಿವಕುಮಾರ್‌ಗೆ ಕಾಂಗ್ರೆಸ್‌ನಲ್ಲಿದ್ದರೂ ಮುಖ್ಯಮಂತ್ರಿಯಾಗುವುದಿಲ್ಲ ಎಂದು ಹೇಳಿದ್ರಲ್ಲ ಎಂದು ಮಾಧ್ಯಮದವರು ನೆನಪಿಸಿದರು. ಈ ಪ್ರಶ್ನೆ ಕೇಳುತ್ತಿದ್ದಂತೆ ನಗುತ್ತಾ ಯಡಿಯೂರಪ್ಪ ಸ್ಥಳದಿಂದ ತೆರಳಿದರು.

    ರಾಜ್ಯದ ಶಾಲೆಗಳಲ್ಲಿ ವಾಟರ್‌ ಬೆಲ್‌; ಏನಿದು ಹೊಸ ನಿಯಮ?


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search