Thursday, November 5, 2026
spot_img
More
    spot_img
    HomeLatest newsಕೊಟ್ಟ ಮಾತು ಉಳಿಸಿಕೊಳ್ಳಿ; ಮುಖ್ಯಮಂತ್ರಿ ಸ್ಥಾನಕ್ಕಾಗಿ ಹೈಕಮಾಂಡ್‌ಗೆ ಡಿಕೆಶಿ ಮೆಸೇಜ್!

    ಕೊಟ್ಟ ಮಾತು ಉಳಿಸಿಕೊಳ್ಳಿ; ಮುಖ್ಯಮಂತ್ರಿ ಸ್ಥಾನಕ್ಕಾಗಿ ಹೈಕಮಾಂಡ್‌ಗೆ ಡಿಕೆಶಿ ಮೆಸೇಜ್!

    ಬೆಂಗಳೂರು (ನವೆಂಬರ್‌ 27, 2025): ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ ಎದ್ದಿರುವ ಬದಲಾವಣೆಯ ಗಾಳಿ ಬಿರುಗಾಳಿಯಾಗಿ ಪರಿವರ್ತನೆಯಾಗುತ್ತಿದೆ. ಸರ್ಕಾರ ಯಶಸ್ವಿ ಎರಡೂವರೆ ವರ್ಷಗಳ ಅಧಿಕಾರದ ಅವಧಿಯನ್ನು ಪೂರೈಸಿದ ಬೆನ್ನಲ್ಲೇ ಅಧಿಕಾರ ಹಂಚಿಕೆ ಚರ್ಚೆ ಮುನ್ನೆಲೆಗೆ ಬಂದಿದ್ದು, ಈ ಬಾರಿ ಶಾಸಕರು ಹೈಕಮಾಂಡ್‌ಗೆ ಮನವಿ ಸಲ್ಲಿಸುವ ಮಟ್ಟಕ್ಕೆ ಬಂದು ನಿಂತಿದೆ.

    ಹೌದು, ಡಿಕೆ ಶಿವಕುಮಾರ್‌ ಬಣದ ಶಾಸಕರು ಎಂದೇ ಗುರುತಿಸಿಕೊಂಡಿರುವ ಕೆಲ ಶಾಸಕರು ದೆಹಲಿಗೆ ತೆರಳಿ ತಮ್ಮ ನಾಯಕನನ್ನು ಸಿಎಂ ಮಾಡಬೇಕೆಂದು ಮನವಿ ಇಟ್ಟಿದ್ದಾರೆ ಎನ್ನಲಾಗಿದೆ. ಇತ್ತ ಐದು ವರ್ಷ ನಾನೇ ಸಿಎಂ ಎನ್ನುತ್ತಿದ್ದ ಸಿದ್ದರಾಮಯ್ಯ ಹೈಕಮಾಂಡ್‌ ನಿರ್ಧಾರಕ್ಕೆ ಬದ್ಧ ಎಂದಿದ್ದಾರೆ.

    ಇತ್ತ ಡಿಕೆ ಶಿವಕುಮಾರ್‌ ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ಜತೆ ನಿರಂತರ ಸಂಪರ್ಕದಲ್ಲಿದ್ದು, ಪಕ್ಷದ ಮತ್ತೋರ್ವ ದಿಗ್ಗಜ ಸತೀಶ್‌ ಜಾರಕಿಹೊಳಿ ಜತೆ ಗೌಪ್ಯ ಸಭೆ ನಡೆಸಿದ್ದಾರೆ. ಇಷ್ಟೆಲ್ಲ ಬೆಳವಣಿಗೆಗಳ ನಡುವೆ ಡಿಕೆ ಶಿವಕುಮಾರ್‌ ಇಂದು ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ʼಪವರ್ʼ ಬಗ್ಗೆ ಟ್ವೀಟ್‌ ಒಂದನ್ನು ಮಾಡಿದ್ದಾರೆ.

    ʼಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ!ʼ ಎಂದು ಕ್ಯಾಪ್ಷನ್‌ ಬರೆದುಕೊಂಡಿರುವ ಡಿಕೆ ತಾವೇ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುತ್ತಿರುವ ಫೋಟೊವೊಂದರ ಮೇಲೆ ʼಮಾತಿನ ಶಕ್ತಿಯು ವಿಶ್ವದ ಶಕ್ತಿಯಾಗಿದೆʼ ಎಂದು ಬರೆದಿದ್ದಾರೆ. ಅಲ್ಲದೇ ವ್ಯಕ್ತಿಯೊಬ್ಬರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುವುದು ವಿಶ್ವದ ಅತಿದೊಡ್ಡ ಶಕ್ತಿ. ಅದು ನ್ಯಾಯಾಧೀಶರಾಗಿರಲಿ, ಅಧ್ಯಕ್ಷರಾಗಿರಲಿ, ನನ್ನೂ ಸೇರಿದಂತೆ ಯಾರೇ ಆಗಿರಲಿ ಕೊಟ್ಟ ಮಾತನ್ನು ನಡೆಸಿಕೊಡಬೇಕು. ಮಾತಿನ ಶಕ್ತಿ ವಿಶ್ವದ ಶಕ್ತಿ ಎಂದು ಡಿಕೆ ಶಿವಕುಮಾರ್‌ ಉಲ್ಲೇಖಿಸಿದ್ದಾರೆ.

    ಈ ಮೂಲಕ ಡಿಕೆ ಶಿವಕುಮಾರ್‌ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗ ತಮಗೆ ಕಾಂಗ್ರೆಸ್‌ ಕೊಟ್ಟಿದ್ದಾರೆ ಎನ್ನಲಾದ ಅಧಿಕಾರದ ಹಂಚಿಕೆ ಮಾತನ್ನು ಉಳಿಸಿಕೊಳ್ಳಿ ಎಂದು ಹೈಕಮಾಂಡ್‌ಗೆ ನೀಡಿರುವ ಸಂದೇಶ ಎಂದೇ ಹೇಳಲಾಗುತ್ತಿದೆ.

    ‌ಡಿಕೆಶಿಯವರನ್ನು ಬಿಟ್ಟು ಇನ್ಯಾರನ್ನು ಸಿಎಂ ಮಾಡ್ತೀರ?; ಡಿಕೆ ಪರ ಬ್ಯಾಟ್‌ ಬೀಸಿದ ಕಾಂಗ್ರೆಸ್‌ ಶಾಸಕ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search