Wednesday, April 1, 2026
spot_img
More
    spot_img
    HomeLatest newsಡಿಕೆ ಶಿವಕುಮಾರ್‌ ಅವರನ್ನು ಮುಖ್ಯಮಂತ್ರಿಯಾಗಿ ಸಂಪೂರ್ಣವಾಗಿ ಒಪ್ಪಿಕೊಳ್ಳುತ್ತೇನೆ: ಪರಮೇಶ್ವರ್

    ಡಿಕೆ ಶಿವಕುಮಾರ್‌ ಅವರನ್ನು ಮುಖ್ಯಮಂತ್ರಿಯಾಗಿ ಸಂಪೂರ್ಣವಾಗಿ ಒಪ್ಪಿಕೊಳ್ಳುತ್ತೇನೆ: ಪರಮೇಶ್ವರ್

    ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಸಿಎಂ ಕುರ್ಚಿ ಗುದ್ದಾಟದ ನಡೆದ ಸಿಎಂ ಆಪ್ತ ಗುಂಪಿನಿಂದ ಮತ್ತೊಂದು ಸ್ಫೋಟಕ ಸಂದೇಶ ರವಾನೆಯಾಗಿದೆ.

    ಕಾಂಗ್ರೆಸ್ ಹೈಕಮಾಂಡ್ ನಾಯಕತ್ವ ಬದಲಾವಣೆಗೆ ನಿರ್ಧರಿಸಿದರೆ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ಸಂಪೂರ್ಣವಾಗಿ ಒಪ್ಪಿಕೊಳ್ಳುತ್ತೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

    ಮುಖ್ಯಮಂತ್ರಿ ಆಕಾಂಕ್ಷೆ ಬಗ್ಗೆ ಕೇಳಿದಾಗ, ನಾನು ಮುಖ್ಯಮಂತ್ರಿ ರೇಸ್‍ನಲ್ಲಿದ್ದೇನೆ ಎಂದು ಸ್ವಾಭಾವಿಕವಾಗಿಯೇ ಉತ್ತರಿಸುತ್ತೇನೆ. ಆದರೆ ಅಧಿಕಾರ ಬದಲಾವಣೆಯಾಗಿ ಡಿಕೆ ಮುಖ್ಯಮಂತ್ರಿಯಾದರೆ, ನಾವು ಅದನ್ನು ಒಪ್ಪಿಕೊಳ್ಳುತ್ತೇವೆ ಎಂದು ಹೇಳಿದರು.

    ಇದು ರಾಜ್ಯದಲ್ಲಿ ನಡೆಯುತ್ತಿರುವ ಮುಖ್ಯಮಂತ್ರಿ ಹುದ್ದೆ ಪೈಪೋಟಿ ನಡುವೆ ಸಿದ್ದರಾಮಯ್ಯ ಬಣದಿಂದ ಬಂದ ಮಹತ್ವದ ಸಂದೇಶವಾಗಿದೆ. ಪಕ್ಷ ಒಪ್ಪಿದರೆ ಬದಲಾವಣೆ ಸುಗಮವಾಗಿರುತ್ತದೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.

    ಮುಖ್ಯಮಂತ್ರಿ ಹುದ್ದೆ ಆಕಾಂಕ್ಷೆ ತನಗೂ ಇದೆ ಎಂದು ಅವರು ಪುನರುಚ್ಚರಿಸಿದರು. ಪಕ್ಷಕ್ಕಾಗಿ ತನ್ನ ಕೊಡುಗೆ ಹೈಕಮಾಂಡ್‌ಗೆ ತಿಳಿದಿದೆ. ಆದರೆ ಅಂತಿಮ ತೀರ್ಮಾನವನ್ನು ಅವರಿಗೆ ಬಿಟ್ಟಿದ್ದೇನೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ “ಮುಖ್ಯಮಂತ್ರಿ ಹುದ್ದೆಗೆ ಸೂಕ್ತ ಅಭ್ಯರ್ಥಿ” ಎಂದು ಪರಮೇಶ್ವರ್ ಹೇಳಿದರು. ಆದರೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವಿನ ಯಾವುದೇ ಒಪ್ಪಂದದ ಬಗ್ಗೆ ತಮಗೆ ತಿಳಿದಿಲ್ಲ ಎಂದರು.

    ರಾಜ್ಯದ ಶಾಲೆಗಳಲ್ಲಿ ವಾಟರ್‌ ಬೆಲ್‌; ಏನಿದು ಹೊಸ ನಿಯಮ?


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಬಿಗ್ ನ್ಯೂಸ್! ಧೋನಿ ಹೊಸ ಇನ್ವೆಸ್ಟ್‌ಮೆಂಟ್… ‘ಕುಕು’ ಜೊತೆ ಕೈಜೋಡನೆ!

    ಕ್ರಿಕೆಟ್ ಲೆಜೆಂಡ್ ಮಹೇಂದ್ರ ಸಿಂಗ್ ಧೋನಿ ಈಗ ಮತ್ತೊಂದು ದೊಡ್ಡ ಹೆಜ್ಜೆ ಇಟ್ಟಿದ್ದಾರೆ! ‘ಕುಕು ಟಿವಿ’ ಹೂಡಿಕೆ ವಿಚಾರ ಈಗ ಸಕತ್ ಟ್ರೆಂಡ್ ಆಗಿದೆ. ಕ್ರೀಡಾಂಗಣದಲ್ಲಿ ಸಾಧನೆ ಮಾಡಿದ ಧೋನಿ, ಇದೀಗ ಡಿಜಿಟಲ್...

    ಬಿಗ್ ನ್ಯೂಸ್! ಬೆಂಗಳೂರು ಕರಗ ಉತ್ಸವಕ್ಕೆ ಸಜ್ಜು—1000ಕ್ಕೂ ಹೆಚ್ಚು ಪೊಲೀಸರ ಬಿಗಿ ಭದ್ರತೆ, ₹1.70 ಕೋಟಿ ವೆಚ್ಚ!

    “ಬೆಂಗಳೂರು ಕರಗ ಉತ್ಸವ 2026” ಮತ್ತೆ ನಗರಕ್ಕೆ ಸಾಂಸ್ಕೃತಿಕ ಸಂಭ್ರಮ ತರಲು ಸಜ್ಜಾಗಿದೆ! ಏಪ್ರಿಲ್ 1ರಂದು ನಡೆಯಲಿರುವ ಈ ಐತಿಹಾಸಿಕ ಉತ್ಸವಕ್ಕಾಗಿ ಭರ್ಜರಿ ಸಿದ್ಧತೆಗಳು ನಡೆಯುತ್ತಿದ್ದು, ಭದ್ರತೆ ಮತ್ತು ವ್ಯವಸ್ಥೆಗಾಗಿ ಸರ್ಕಾರದಿಂದ ವಿಶೇಷ...

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading